ಅಳದಂಗಡಿ: ಜ. 16ರಂದು ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ
ಬೆಳ್ತಂಗಡಿ, ಜ. 8 : ‘ಕನ್ನಡ ಸಾಹಿತ್ಯ ಪರಿಷತ್ ದ.ಕ.ಜಿಲ್ಲೆ, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.16ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದ ಅರುವ ನಾರಾಯಣ ಶೆಟ್ಟಿ ಸಭಾಂಗಣದ ಪಾಂಡ್ಯಪ್ಪ ಅರಸ ಕೃಷ್ಣರಾಜ ಅಜಿಲ ವೇದಿಕೆಯಲ್ಲಿ ಪ.ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಅಧ್ಯಕ್ಷತೆಯಲ್ಲಿ ನಡೆಯಲಿದೆ’ ಎಂದು ಸಮ್ಮೇಳನ ಸಂಯೋಜನಾ ಸಮಿತಿಯ ಗೌರವಾಧ್ಯಕ್ಷ ತಿಮ್ಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ಹೇಳಿದರು.
ಅವರು ಮಂಗಳವಾರ ಬೆಳ್ತಂಗಡಿ ಪ್ರವಾಸಿ ಬಂಗಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಮ್ಮೇಳನದ ಕಾರ್ಯಕ್ರಮಗಳ ವಿವರ ನೀಡಿದರು.
Next Story





