Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯಕಪ್ ಫುಟ್ಬಾಲ್: ಉತ್ಸಾಹಿ ಭಾರತಕ್ಕೆ...

ಏಶ್ಯಕಪ್ ಫುಟ್ಬಾಲ್: ಉತ್ಸಾಹಿ ಭಾರತಕ್ಕೆ ಇಂದು ಯುಎಇ ಸವಾಲು

ಚೆಟ್ರಿ ಮೇಲೆ ಭಾರತದ ಭರವಸೆ

ವಾರ್ತಾಭಾರತಿವಾರ್ತಾಭಾರತಿ9 Jan 2019 11:43 PM IST
share
ಏಶ್ಯಕಪ್ ಫುಟ್ಬಾಲ್: ಉತ್ಸಾಹಿ ಭಾರತಕ್ಕೆ ಇಂದು ಯುಎಇ ಸವಾಲು

ಅಬುಧಾಬಿ, ಜ.9: ಮೊದಲ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ಭಾರತ ಫುಟ್ಬಾಲ್ ತಂಡಕ್ಕೆ ಗುರುವಾರ ಎಎಫ್‌ಸಿ ಏಶ್ಯಕಪ್ ಫುಟ್ಬಾಲ್ ಟೂರ್ನಿಯ ‘ಎ’ಗುಂಪಿನಲ್ಲಿ ಆತಿಥೇಯ ಯುಎಇ ಸವಾಲು ಎದುರಾಗಿದೆ. ಇಲ್ಲಿಯ ಝಾಯೆದ್ ಸ್ಪೋರ್ಟ್ಸ್ ಸಿಟಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ನಾಲ್ಕು ದಿನಗಳ ಹಿಂದೆ ಥಾಯ್ಲೆಂಡ್‌ನು 4-1 ಗೋಲುಗಳ ಅಂತರದಿಂದ ಬಗ್ಗುಬಡಿದಿರುವ ಚೆಟ್ರಿ ಬಳಗ ಥಾಯ್ಲೆಂಡ್‌ಗಿಂತ ಉನ್ನತ ಮಟ್ಟದ ರ್ಯಾಂಕಿನ ಯುಎಇ ತಂಡದ ಸವಾಲನ್ನು ಮೆಟ್ಟಿ ನಿಲ್ಲುವುದೇ ಎಂದು ಕಾದುನೋಡಬೇಕಿದೆ. ಇದೇ ವೇಳೆ ಯುಎಇ ತಂಡ ಕಪ್‌ನ ಮೇಲೆ ಕಣ್ಣಿಟ್ಟಿದ್ದು ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ. ಯುಎಇ ವಿಶ್ವ ರ್ಯಾಂಕಿಂಗ್‌ನಲ್ಲಿ 79ನೇ ಸ್ಥಾನದಲ್ಲಿದ್ದರೆ, ಭಾರತ 97ನೇ ರ್ಯಾಂಕ್‌ನಲ್ಲಿದೆ.

ಭಾರತ ತಂಡದ ಕೋಚ್ ಸ್ಟೀಫನ್ ಕಾನ್‌ಸ್ಟಂಟೈನ್ ತಂಡದ ಕಳೆದ ಪಂದ್ಯದ ಗೆಲುವಿನಿಂದ ಸಂತಸಗೊಂಡಿದ್ದು, ಅದರಲ್ಲೂ ಪಂದ್ಯದ ದ್ವಿತೀಯಾರ್ಧದಲ್ಲಿ ತೋರಿದ ಪ್ರದರ್ಶನ ಹಾಗೂ ದಾಳಿಯಲ್ಲಿ ಶೀಘ್ರ ಬದಲಾವಣೆಗಳನ್ನು ತಂದಿದ್ದು ಹೆಚ್ಚು ಖುಷಿ ನೀಡಿದೆ.

‘‘ನಮ್ಮಲ್ಲಿ ಉತ್ಸಾಹಿ ಯುವ ಪಡೆಯಿದೆ. ಆದಾಗ್ಯೂ ಯುಎಇ ವಿಭಿನ್ನ ಆಟದ ಮಾದರಿಯನ್ನು ಹೊಂದಿದೆ. ಯುಎಇ ಒಂದು ಉತ್ತಮ ತಂಡವಾಗಿದ್ದರೂ, ನಮಗೆ ಅದು ಮತ್ತೊಂದು ಎದುರಾಳಿ ಅಷ್ಟೇ’’ ಎಂದು ಕೋಚ್ ಕಾನ್‌ಸ್ಟಂಟೈನ್ ಹೇಳಿದ್ದಾರೆ.

ಥಾಯ್ಲೆಂಡ್ ವಿರುದ್ಧ ಅವಳಿ ಗೋಲುಗಳನ್ನು ಬಾರಿಸಿ ಅತ್ಯುತ್ಸಾಹದಲ್ಲಿರುವ ನಾಯಕ ಸುನೀಲ್ ಚೆಟ್ರಿಯನ್ನು ಭಾರತ ತಂಡ ಹೆಚ್ಚು ನಂಬಿಕೊಂಡಿದೆ, ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಬಹರೈನ್ ತಂಡದೊಂದಿಗೆ 1-1ರ ಡ್ರಾ ಸಾಧಿಸಿರುವ ಆತಿಥೇಯ ಯುಎಇ ಈ ಪಂದ್ಯದಲ್ಲಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

► ಪಂದ್ಯದ ಸಮಯ: ರಾತ್ರಿ 8 ಗಂಟೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X