ಮುದನೂರು ಗ್ರಾಮದಲ್ಲಿ ನೀರಿಗೆ ವಿಷ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
![ಮುದನೂರು ಗ್ರಾಮದಲ್ಲಿ ನೀರಿಗೆ ವಿಷ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ ಮುದನೂರು ಗ್ರಾಮದಲ್ಲಿ ನೀರಿಗೆ ವಿಷ ಬೆರೆಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ](https://www.varthabharati.in/sites/default/files/images/articles/2019/01/10/172113.jpg)
ಬೆಂಗಳೂರು, ಜ. 10: ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದರಿಂದ ಹಲವರು ಅಸ್ವಸ್ಥರಾಗಿ ಮಹಿಳೆಯೊಬ್ಬರು ಮೃತರಾದ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದಿದ್ದು ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.
ಈ ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ ಇಂತಹ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.
Next Story