Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯ ವ್ಯಸನದಿಂದ ಆರೋಗ್ಯ, ಆರ್ಥಿಕತೆ...

ಮದ್ಯ ವ್ಯಸನದಿಂದ ಆರೋಗ್ಯ, ಆರ್ಥಿಕತೆ ಮೇಲೆ ಪರಿಣಾಮ: ಡಾ.ರಾವ್

ವಾರ್ತಾಭಾರತಿವಾರ್ತಾಭಾರತಿ10 Jan 2019 8:55 PM IST
share
ಮದ್ಯ ವ್ಯಸನದಿಂದ ಆರೋಗ್ಯ, ಆರ್ಥಿಕತೆ ಮೇಲೆ ಪರಿಣಾಮ: ಡಾ.ರಾವ್

ಉಡುಪಿ, ಜ.10: ಚಟದಿಂದ ಆರಂಭಗೊಂಡು ಕಾಯಿಲೆಯಾಗಿ ಪರಿವರ್ತನೆಯಾಗುವ ಮದ್ಯ ವ್ಯಸನದಿಂದ ಆರೋಗ್ಯ, ಆರ್ಥಿಕ, ಸಾಮಾಜಿಕ, ಕೌಟುಂಬಿಕ ಹಾಗೂ ಮಾನಸಿಕ ಪರಿಣಾಮಗಳು ಬೀರುತ್ತವೆ ಎಂದು ಮಣಿಪಾಲ ಕೆಎಂಸಿ ಮೆಡಿಸಿನ್ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಎನ್. ಆರ್.ರಾವ್ ಹೇಳಿದ್ದಾರೆ.

ಮುಂಬೈನ ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆ ಹಾಗೂ ಹಾಜಿ ಅಬ್ದುಲ್ಲಾ ಚಾರಿಟೇಬಲ್ ಟ್ರಸ್ಟ್‌ಗಳ ಸಹಯೋಗದಲ್ಲಿ ದೊಡ್ಡಣಗುಡ್ಡೆಯ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಕಳೆದ 10 ದಿನಗಳ ಕಾಲ ನಡೆದ 26ನೇ ಮದ್ಯವ್ಯಸನ ವಿಮುಕ್ತಿ ಮತ್ತು ವಸತಿ ಶಿಬಿರದ ಸಮಾರೋಪದಲ್ಲಿ ಗುರುವಾರ ಮಾತನಾಡುತಿದ್ದರು.

ಮದ್ಯವ್ಯಸನ ವ್ಯಕ್ತಿಯ ಶರೀರದ ಎಲ್ಲಾ ಅವಯವಗಳ ಮೇಲೂ ದುಷ್ಪರಿಣಾ ಬೀರುತ್ತದೆ. ಆತನಿಗೆ ಸಾಮಾಜಿಕ ಹಣೆಪಟ್ಟಿ ತಪ್ಪಿದ್ದಲ್ಲ. ನೀರು, ಗಾಳಿಯಂತೆ ಮದ್ಯ ಮನುಷ್ಯನಿಗೆ ಬದುಕಿನ ಅನಿವಾರ್ಯತೆ ಏನಲ್ಲ ಎಂದರು.

ಭಾರತೀಯ ವೈದ್ಯಕೀಯ ಸಂಘದ ಉಡುಪಿ ಕರಾವಳಿ ಶಾಖೆ ಕಾರ್ಯದರ್ಶಿ ಡಾ.ಕೃಷ್ಣಾನಂದ ಮಲ್ಯ ಮಾತನಾಡಿ, ಸಾಮಾಜಿಕ ಕಳಕಳಿಯಿಂದ ರೂಪು ಗೊಂಡ ಮದ್ಯವ್ಯಸನ ವಿಮುಕ್ತಿ ಶಿಬಿರ, ವ್ಯಸನಿಗಳಿಗೆ ಹೊಸ ಬದುಕಿಗೆ ಹಾದಿ ತೆರೆದಿದೆ. ಮದ್ಯ ವ್ಯಸನಕ್ಕೀಡಾದವರು ಜೀವನ ಪಾಠ ಅರಿತು ಬದಲಾವಣೆಯ ಹಾದಿಯಲ್ಲಿ ಛಲದ ಮೊದಲ ಹೆಜ್ಜೆ ಇಟ್ಟಿರುವುದು ಸ್ವಾಗತಾರ್ಹ ಎಂದರು.

ಮನೋರೋಗ ತಜ್ಞ ಡಾ.ವಿರೂಪಾಕ್ಷ ದೇವರಮನೆ ಮಾತನಾಡಿ, ಮದ್ಯ ವ್ಯಸನ ಮುಂದಿನ ಪೀಳಿಗೆಗೆ ಮಾರಕವಾಗದಂತೆ ಹೆತ್ತವರು ಎಚ್ಚರವಹಿಸಬೇಕು. ಮನೆಯಲ್ಲಿರುವ ಮಕ್ಕಳು ಮದ್ಯ ವ್ಯಸನಕ್ಕೆ ತುತ್ತಾಗುವ ಅಪಾಯ ಮೂರು ಪಟ್ಟು ಹೆಚ್ಚಿದೆ ಎಂದವರು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಎ.ವಿ. ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಮಾತನಾಡಿ, ಕುಡಿತ ಬಿಟ್ಟವರ ಬಗ್ಗೆ ತಕ್ಷಣದ ನಿರೀಕ್ಷೆ, ಸಂಶಯ ಸರಿಯಲ್ಲ. ಅವರೊಂದಿಗೆ ಸಮಾಧಾನದಿಂದ ವ್ಯವಹರಿಸಬೇಕು. ತಮಗೆ ಮಾತ್ರವಲ್ಲ ಅನ್ಯರಿಗೂ ಪ್ರಯೋಜನವಾಗುವಂತೆ ಕಲಿತ ವಿದ್ಯೆಯ ಸದ್ಭಳಕೆಯಾಗಬೇಕು ಎಂದರು.

ಮನೋತಜ್ಞ ಡಾ. ದೀಪಕ್ ಮಲ್ಯ ಮಾತನಾಡಿದರು. ನವೀನ್ ಪೆರ್ಡೂರು, ವೆಂಕಟೇಶ್, ಶಂಕರ್ ನಾಯಕ್, ಸದಾನಂದ ಪೂಜಾರಿ, ನಾಗರಾಜ್, ವಾಸುದೇವ ಅಮಲು ರೋಗಕ್ಕೆ ಮತ್ತೆ ಬಲಿಯಾಗದಿರುವ, ಅನಾಮಿಕ ಅಮಲು ರೋಗಿಗಳ ಸಭೆಗೆ ತಪ್ಪದೇ ಬರುವ ಭರವಸೆ ನೀಡಿದರು.

ಶಿಬಿರಾರ್ಥಿಗಳಿಗೆ ನಡೆದ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವೀಣಾ ಬಹುಮಾನಿತರ ಪಟ್ಟಿ ಓದಿದರು. ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ ಸ್ವಾಗತಿಸಿ, ಸಮುದಾಯ ಸಂಯೋಜಕ ಸುರೇಶ್ ಎಸ್. ನಾವೂರು ವರದಿ ವಾಚಿಸಿದರು. ಮೋನಿಕಾ ಮತ್ತು ಜಮೀಲಾ ಕಾರ್ಯಕ್ರಮ ನಿರೂಪಿಸಿದರು. ನರ್ಸಿಂಗ್ ಮೇಲ್ವಿಚಾರಕಿ ಎಡ್ನಾ ರೋಡ್ರಿಗಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X