Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ವಚನ ಮೇಳದಿಂದ ಸ್ವಸ್ಥ ಸಮಾಜದ...

ಮಕ್ಕಳ ವಚನ ಮೇಳದಿಂದ ಸ್ವಸ್ಥ ಸಮಾಜದ ನಿರ್ಮಾಣ: ಗೊ.ರು.ಚನ್ನಬಸಪ್ಪ

ವಾರ್ತಾಭಾರತಿವಾರ್ತಾಭಾರತಿ10 Jan 2019 9:15 PM IST
share

ಬೆಂಗಳೂರು, ಜ.10: ಕಲುಷಿತವಾಗುತ್ತಿರುವ ಸಮಾಜದಲ್ಲಿ ಮುಂದಿನ ಪೀಳಿಗೆಗೆ ಸಂಸ್ಕೃತಿಯ ಅರಿವನ್ನು ಮಾಡಿಕೊಟ್ಟು, ಸತ್ಯ, ನಿಷ್ಠೆ, ಪ್ರಾಮಾಣಿಕತೆಗಳನ್ನು ಮಕ್ಕಳ ವಚನ ಮೇಳ ಕಟ್ಟಿಕೊಡುತ್ತಿದ್ದು, ಇದರಿಂದ ಸ್ವಸ್ಥ ಸಮಾಜದ ನಿರ್ಮಾಣವಾಗಲಿಯೆಂದು ಖ್ಯಾತ ಜಾನಪದ ವಿದ್ವಾಂಸರಾದ ಗೊ.ರು.ಚನ್ನಬಸಪ್ಪ ಆಶಿಸಿದರು.

ಗುರುವಾರ ವಚನ ಜ್ಯೋತಿ ಬಳಗವು ಕಲಾಗ್ರಾಮದಲ್ಲಿ ಆಯೋಜಿಸಿದ್ದ ಮಕ್ಕಳ ವಚನ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐದು ಸಾವಿರಕ್ಕೂ ಹೆಚ್ಚು ಮಕ್ಕಳು ಕಲಾಗ್ರಾಮದಲ್ಲಿ ಸೇರಿ ವಚನಗಳನ್ನು ಹಾಡುತ್ತಿರುವುದು ಮುಂದಿನ ದಿನಗಳಲ್ಲಿ ಒಳ್ಳೆಯ ಸಮಾಜ ನಿರ್ಮಾಣದ ಕನಸನ್ನು ಬಿತ್ತುವಂತಾಗಿದೆ. ಇದು ನಿಜಕ್ಕೂ ಸಮಾಜದ ಬಗೆಗೆ ಕಾಳಜಿಯುಳ್ಳ ಕಾರ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವಾದಿ ಶರಣರು ಜಾತ್ಯತೀತ ಲಿಂಗ ಸಮಾನತೆಯ ಸಮಾಜವನ್ನು ನಿರ್ಮಾಣ ಮಾಡಿದರು. ಕಾಯಕಕ್ಕೆ ಪ್ರಾಧಾನ್ಯತೆಯನ್ನು ತಂದರು. ಅನುಭವಮಂಟಪದಲ್ಲಿ ಎಲ್ಲರೂ ಸೇರಿ ಮುಕ್ತವಾಗಿ ಅನುಭಾವವನ್ನು ಮಾಡಿದರು. ಅವರ ಬದುಕಿನಲ್ಲಿ ಕಂಡುಕೊಂಡ ಅನುಭವಗಳು ವಚನಗಳ ಮೂಲಕ ಅನಾವರಣಗೊಂಡವು. ಅಂತಹ ಅನರ್ಘ್ಯರತ್ನಗಳಾದ ವಚನಗಳನ್ನು ಪಸರಿಸುವ ಕೆಲಸದಲ್ಲಿ ಮಕ್ಕಳ ವಚನ ಮೇಳ ಕಾರ್ಯಕ್ರಮ ಅರ್ಥಪೂರ್ಣವಾದುದೆಂದು ಅವರು ಶ್ಲಾಘಿಸಿದರು.

ವಚನ ಜ್ಯೋತಿ ಬಳಗದ ಅಧ್ಯಕ್ಷರಾದ ಎಸ್.ಪಿನಾಕಪಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ವಚನ ಸಂಸ್ಕೃತಿಯನ್ನು ತಲುಪಿಸುವುದರ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ಪರಿಚಯಿಸಲಾಗುತ್ತಿದೆ. ವಚನ ಪ್ರಕಾರದ ಹನ್ನೆರಡು ಸ್ಪರ್ಧೆಗಳಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೆ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ವಚನ ಹಾಡು ಬರೆಯುವ, ನೃತ್ಯ ಮಾಡುವ, ಚಿತ್ರ ಬಿಡಿಸುವ, ವಚನಕಾರರ ವೇಷಭೂಷಣಧಾರಿಗಳಾಗಿ ನಲಿಯುವ ಮೂರು ದಿನಗಳ ಕಾರ್ಯಕ್ರಮ ಇದಾಗಿದೆಯೆಂದು ತಿಳಿಸಿದರು.

ಈ ವೇಳೆ ಕನ್ನಡ ಪ್ರಾಧ್ಯಾಪಕ ಡಾ.ರುದ್ರೇಶ್ ಅದರಂಗಿಯವರನ್ನು ಸನ್ಮಾನಿಸಲಾಯಿತು. ವಚನಜ್ಯೋತಿ ಬಳಗವು ಕಲಾಗ್ರಾಮದಲ್ಲಿ ಆಯೋಜಿಸಿದ್ದ ಮಕ್ಕಳ ವಚನ ಮೇಳದಲ್ಲಿ ಪೂಜ್ಯ ಮಹಾಪೌರರಾದ ಗಂಗಾಂಬಿಕೆ ಮಲ್ಲಿಕಾರ್ಜುನ ಪ್ರಶಂಸಾಪತ್ರ ವಿತರಿಸಿದರು. ಕವಯತ್ರಿ ಸೌಮ್ಯಾ ಗೌಡ, ಗಾಯಕಿಯರಾದ ಜಾನಕಿ ಮೀನಾಕ್ಷಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X