Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 28 ವೃತ್ತಿಪರ ಟೆನಿಸ್ ಆಟಗಾರರನ್ನು...

28 ವೃತ್ತಿಪರ ಟೆನಿಸ್ ಆಟಗಾರರನ್ನು ಬಂಧಿಸಿದ ಸ್ಪೇನ್ ಪೊಲೀಸ್

ಮ್ಯಾಚ್ ಫಿಕ್ಸಿಂಗ್

ವಾರ್ತಾಭಾರತಿವಾರ್ತಾಭಾರತಿ10 Jan 2019 11:28 PM IST
share
28 ವೃತ್ತಿಪರ ಟೆನಿಸ್ ಆಟಗಾರರನ್ನು ಬಂಧಿಸಿದ ಸ್ಪೇನ್ ಪೊಲೀಸ್

ಅಪಾರ ನಗದು ವಶ

ಮ್ಯಾಡ್ರಿಡ್, ಜ.10: ವೃತ್ತಿಪರ ಟೆನಿಸ್ ಪಂದ್ಯಗಳಲ್ಲಿ ಮೋಸದಾಟ ವಾಡಿ ಮಿಲಿಯನ್ ಯುರೋ ಸಂಪಾದಿಸಿದ ಶಂಕೆಯ ಮೇರೆಗೆ ಸ್ಪೇನ್ ಪೊಲೀಸರು 28 ವೃತ್ತಿಪರ ಟೆನಿಸ್ ಆಟಗಾರರ ಸಹಿತ ಒಟ್ಟು 83 ಮಂದಿಯನ್ನು ಬಂಧಿಸಿದ್ದಾರೆ.

‘‘ಸ್ಪೇನ್‌ನ ಸಿವಿಲ್ ಗಾರ್ಡ್, ದೇಶದ ನ್ಯಾಶನಲ್ ಹೈಕೋರ್ಟ್ ಸಹಯೋಗದೊಂದಿಗೆ ಅರ್ಮೆನಿಯದ ಸಂಘಟಿತ ಅಪರಾಧಿಗಳ ಜಾಲವನ್ನು ಭೇದಿಸಿದ್ದು, ಒಟ್ಟು 83 ಮಂದಿ ಶಂಕಿತರನ್ನು ಬಂಧಿಸಲಾಗಿದ್ದು, ಈ ಪೈಕಿ 28 ಮಂದಿ ವೃತ್ತಿಪರ ಆಟಗಾರರಾಗಿದ್ದಾರೆ ಎಂದು ಯುರೋಪೊಲ್ ವರದಿ ಮಾಡಿದೆ. ‘‘11 ಮನೆಗಳ ಮೇಲೆ ದಾಳಿ ನಡೆಸಿ, 167,000 ಯುರೋ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಶಾಟ್‌ಗನ್ ಹಾಗೂ ಐದು ಐಶಾರಾಮಿ ವಾಹನಗಳು, 42 ನಕಲಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ’’ ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಮೆನಿಯದ ಕ್ರಿಮಿನಲ್ ಗುಂಪು ಬೆಟ್ಟಿಂಗ್ ಉದ್ದೇಶದಿಂದ ವೃತ್ತಿಪರ ಆಟಗಾರರಿಗೆ ಲಂಚ ನೀಡುತ್ತಿತ್ತು. ಪಂದ್ಯದ ಫಲಿತಾಂಶವನ್ನು ಮೊದಲೇ ನಿರ್ಧರಿಸುತ್ತಿತ್ತು. ವೃತ್ತಿಪರ ಆಟಗಾರರನ್ನು ಗ್ಯಾಂಗ್ ಹಾಗೂ ಉಳಿದ ಗುಂಪಿನ ಕೊಂಡಿಯಾಗಿ ಬಳಸುತ್ತಿತ್ತು. ಗ್ಯಾಂಗ್‌ನ ಸದಸ್ಯರು ಪಂದ್ಯದಲ್ಲಿ ಹಾಜರಾಗುತ್ತಿದ್ದರು. ಆಟಗಾರರು ತಾವು ಮೊದಲೇ ಒಪ್ಪಿಕೊಂಡಂತೆ ನಡೆದುಕೊಳ್ಳುತ್ತಿದ್ದಾರೆಯೇ ಎಂದು ಖಚಿತ ಪಡಿಸಿಕೊಳ್ಳುತ್ತಿದ್ದರು. ಓರ್ವ ವೃತ್ತಿಪರ ಆಟಗಾರ ಕಳೆದ ವರ್ಷ ನಡೆದ ಯುಎಸ್ ಓಪನ್‌ನಲ್ಲಿ ಭಾಗವಹಿಸಿದ್ದು, ಅಧಿಕಾರಿಗಳು ಆತನ ಹೆಸರನ್ನು ಬಹಿರಂಗಪಡಿಸಿಲ್ಲ. ಕೆಳ ದರ್ಜೆಯ ಫ್ಯೂಚರ್ಸ್ ಹಾಗೂ ಚಾಲೆಂಜರ್ ಟೂರ್ನಿಗಳಲ್ಲಿ ಕನಿಷ್ಠ 97 ಪಂದ್ಯಗಳು ಫಿಕ್ಸ್ ಆಗಿವೆ ಎಂದು ಯುರೋಪೊಲ್ ತಿಳಿಸಿದೆ.

ಒಂದೇ ದಿನ ನಡೆದ ದಾಳಿಯ ವೇಳೆ ಸ್ಪೇನ್ ಪೊಲೀಸರು 50 ಇಲೆಕ್ಟ್ರಾನಿಕ್ ವಸ್ತುಗಳನ್ನು, ಕ್ರೆಡಿಟ್ ಕಾರ್ಡ್‌ಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಯನ್ನು ವಶಕ್ಕೆ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X