Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್‌ಜಿಟಿ ಆದೇಶ ಉಲ್ಲಂಘಿಸಿದವರ ವಿರುದ್ಧ...

ಎನ್‌ಜಿಟಿ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಬಿಬಿಎಂಪಿ ವಿಫಲ

ಬಫರ್ ಜೋನ್ ವ್ಯಾಪ್ತಿ ಕಾಮಗಾರಿ ಸಂಬಂಧ

ವಾರ್ತಾಭಾರತಿವಾರ್ತಾಭಾರತಿ11 Jan 2019 9:17 PM IST
share

ಬೆಂಗಳೂರು, ಜ.11: ಬಫರ್ ಜೋನ್ ವ್ಯಾಪ್ತಿಯಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ನಡೆಸುವಂತಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ಜಿಟಿ) ನೀಡಿದ್ದ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಫಲವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಪಾಲಿಕೆ ವ್ಯಾಪ್ತಿಯ ಕೆರೆಗಳ ಅಂಚಿನಿಂದ 75 ಮೀಟರ್ ಸ್ಥಳವನ್ನು ಬಫರ್ ಜೋನ್ ಎಂದು ಗುರುತಿಸಿದ್ದು, ಕೆರೆಗಳ ಅಸಮರ್ಪಕ ನಿರ್ವಹಣೆ ಹಾಗೂ ಒತ್ತುವರಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ಹಾಗೂ ಸ್ಥಳೀಯ ಸಂಸ್ಥೆಗಳು ವಿಫಲವಾದ ಹಿನ್ನೆಲೆಯಲ್ಲಿ, ಕೆರೆಗಳ ಅಂಚಿನಿಂದ 75 ಮೀಟರ್ ಬಫರ್ ವ್ಯಾಪ್ತಿ ಕಾಯ್ದುಕೊಳ್ಳಬೇಕೆಂದು 2016ರ ಮೇ 4ರಂದು ಎನ್‌ಜಿಟಿ ಮಹತ್ವದ ಆದೇಶ ಹೊರಡಿಸಿತ್ತು. ಆದರೆ, ಪಾಲಿಕೆ ಮಾತ್ರ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸುವ ಆಸಕ್ತಿ ತೋರುತ್ತಿಲ್ಲ.

ಎನ್‌ಜಿಟಿ ಆದೇಶ ಹೊರಡಿಸಿ ಎರಡು ವರ್ಷಗಳು ಕಳೆಯುತ್ತಿವೆ. ಆದರೆ, ನಗರದ ಹಲವಾರು ಭಾಗಗಳಲ್ಲಿ ಕೆರೆಯ 75 ಮೀಟರ್ ವ್ಯಾಪ್ತಿಯಲ್ಲೇ ಹೊಸದಾಗಿ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೆ, ಪಾಲಿಕೆ ಅಧಿಕಾರಿಗಳು ಮಾತ್ರ ಕಟ್ಟಡ ನಿರ್ಮಾಣ ತಡೆಯಲು ಮುಂದಾಗುತ್ತಿಲ್ಲ. ಇನ್ನು ಕೆಲವು ಕಡೆ ಬಫರ್ ವ್ಯಾಪ್ತಿಯೆಂದು ತಿಳಿದಿದ್ದರೂ ಕಟ್ಟಡ ನಕ್ಷೆ ಮಂಜೂರು ಮಾಡಲಾಗಿದೆ.

ಕೆರೆಗಳ ಸಂರಕ್ಷಣೆಯ ಉದ್ದೇಶದಿಂದ ಎನ್‌ಜಿಟಿ ನೀಡಿದ್ದ ಆದೇಶ ಪಾಲನೆಗೆ ಬಿಬಿಎಂಪಿ ಮುಂದಾಗಿತ್ತು. ಆ ಹಿನ್ನೆಲೆಯಲ್ಲಿ ಕೆರೆಯಿಂದ 75 ಮೀಟರ್ ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಪರಿಗಣಿಸಬೇಕು ಹಾಗೂ ಈ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರು ಮಾಡಕೂಡದು ಎಂದು ಬಿಬಿಎಂಪಿ ಆಯುಕ್ತರು ಆದೇಶ ಹೊರಡಿಸಿದ್ದರು. ಆದರೆ, ಆಯುಕ್ತರು ಹೊರಡಿಸಿದ ಆದೇಶ, ಕಾಗದಕ್ಕೆ ಸೀಮಿತವಾಗಿದ್ದು, ಬಫರ್ ಜೋನ್‌ನಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಲೇ ಇವೆ.

ಎನ್‌ಜಿಟಿ ಆದೇಶದಿಂದಾಗಿ ನಗರದ 9 ವಲಯಗಳಲ್ಲಿ 152 ಪ್ರಮುಖ ಯೋಜನೆಗಳ 34,853 ಫ್ಲಾಟ್‌ಗಳು (ಯುನಿಟ್‌ಗಳು) ಸಂಕಷ್ಟ ಎದುರಿಸುವಂತಾಗಿದೆ. ಎನ್‌ಜಿಟಿ ಆದೇಶಕ್ಕೆ ಮೊದಲು ನಕ್ಷೆ ಪಡೆದು ಕಾಮಗಾರಿ ಆರಂಭಿಸದ, ಕಾಮಗಾರಿ ಪೂರ್ಣಗೊಳಿಸಿ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯದ ಹಾಗೂ ಹೊಸ ಕಟ್ಟಡಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಪಾಲಿಕೆಯಿಂದ ಯಾವುದೇ ಅನುಮತಿ ಹಾಗೂ ಪ್ರಮಾಣ ಪತ್ರ ನೀಡಲು ಬರುವುದಿಲ್ಲ. ಇದರಿಂದಾಗಿ ಜನ ತೊಂದರೆ ಅನುಭವಿಸುವಂತಾಗಿದೆ.

ಎನ್‌ಜಿಟಿ ಆದೇಶ: ಕೆರೆಗಳ ಸಂರಕ್ಷಣೆಗಾಗಿ ಕೆರೆಯ ಅಂಚಿನಿಂದ 75 ಮೀಟರ್, ಪ್ರಾಥಮಿಕ ಕಾಲುವೆಯ ಅಂಚಿನಿಂದ 50 ಮೀಟರ್, ದ್ವೀತಿಯ ಕಾಲುವೆಯ ತಡೆಗೋಡೆಯಿಂದ 35 ಮೀಟರ್ ಹಾಗೂ ತೃತೀಯ ಕಾಲುವೆ ಅಂಚಿನಿಂದ 25 ಮೀಟರ್ ಪ್ರದೇಶವನ್ನು ಬಫರ್ ವ್ಯಾಪ್ತಿ ಎಂದು ಕಾಯ್ದಿರಿಸಬೇಕು. ಬಫರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುವಂತಿಲ್ಲ ಎಂದು ಎನ್‌ಜಿಟಿ ಆದೇಶ ನೀಡಿದೆ.

ಲಕ್ಷಾಂತರ ಕಟ್ಟಡ: ಕಟ್ಟಡ ನಿಯಮಗಳನ್ನು ಗಾಳಿಗೆ ತೂರಿ, ಪ್ರತಿ ಕಟ್ಟಡಗಳಿಗೂ ಸೆಟ್‌ಬ್ಯಾಕ್ ಬಿಡದೆ ಲಕ್ಷಾಂತರ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಹಿನ್ನೆಲೆಯಲ್ಲಿ ಅವುಗಳನ್ನು ಸಕ್ರಮಗೊಳಿಸಲು ಸರಕಾರ ಮುಂದಾದರೂ, ವಿಷಯ ನ್ಯಾಯಾಲಯದಲ್ಲಿರುವ ಕಾರಣ, ಈವರೆಗೆ ಅವುಗಳನ್ನು ಸಕ್ರಮದ ವ್ಯಾಪ್ತಿಗೆ ತರಲು ಸಾಧ್ಯವಾಗುತ್ತಿಲ್ಲ. ಇದೀಗ ಬಫರ್ ವ್ಯಾಪ್ತಿಯಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿರುವುದು ಮುಂದೊಂದು ದಿನ ಅಕ್ರಮ-ಸಕ್ರಮ ಸಮಸ್ಯೆ ಉಂಟು ಮಾಡಲಿದೆ.

ದಿಲ್ಲಿಯಲ್ಲಿ 15-20 ಮೀಟರ್: ಬೆಂಗಳೂರು ನಗರಕ್ಕೆ ಅನ್ವಯವಾಗುವಂತೆ ಮಾತ್ರ ಕೆರೆಯಿಂದ 75 ಮೀಟರ್ ಬಫರ್ ವ್ಯಾಪ್ತಿ ಎಂದು ಎನ್‌ಜಿಟಿ ಆದೇಶಿಸಿದೆ. ಆದರೆ, ದೆಹಲಿ ಸೇರಿದಂತೆ ಇತರೆ ಪ್ರಮುಖ ನಗರಗಳಲ್ಲಿ ಈ ವ್ಯಾಪ್ತಿ 15-20 ಮೀಟರ್‌ಗೆ ನಿಗದಿಪಡಿಸಲಾಗಿದೆ. ಜತೆಗೆ ಕೆರೆಯಿಂದ 75 ಮೀಟರ್ ಜಾರಿಗೊಳಿಸಲು ಮುಂದಾದರೆ ಲಕ್ಷಾಂತರ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ಆದೇಶವನ್ನು ಮರು ಪರಿಶೀಲಿಸುವಂತೆ ಎನ್‌ಜಿಟಿಯನ್ನು ಕೋರುವುದಾಗಿ ಈ ಹಿಂದೆ ಉಪಮುಖ್ಯಮಂತ್ರಿಗಳು ತಿಳಿಸಿರುವುದು ಮತ್ತಷ್ಟು ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಂತಾಗಿದೆ.

ಗೊಂದಲದಲ್ಲಿ ಅಧಿಕಾರಿಗಳು: ಎನ್‌ಜಿಟಿ ಆದೇಶ ಹೊರಡಿಸುವುದಕ್ಕೂ ಮೊದಲೇ ಕಟ್ಟಡ ನಕ್ಷೆ ಪಡೆದು ಕಟ್ಟಡ ನಿರ್ಮಿಸದವರಿಗೆ ಅನುಮತಿ ನೀಡಬೇಕೆ ಬೇಡವೇ? ಹಾಗೂ ಈಗಾಗಲೇ ಕಟ್ಟಡ ನಿರ್ಮಿಸಿಕೊಂಡವರಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಬೇಕೇ ಬೇಡವೇ ಎಂಬ ಕುರಿತು ಹಲವಾರು ಗೊಂದಲಗಳಿವೆ. ಈ ಹಿನ್ನೆಲೆಯಲ್ಲಿ ಆಸ್ತಿಯ ಮಾಲಕರಿಗೆ ಪಾಲಿಕೆಯ ಅಧಿಕಾರಿಗಳೇ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಳ್ಳುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X