Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾಪು ಕನ್ನಡಿಗರ ಸಾಕ್ಷಿ ಪ್ರಜ್ಞೆ: ಸಚಿವ...

ಪಾಪು ಕನ್ನಡಿಗರ ಸಾಕ್ಷಿ ಪ್ರಜ್ಞೆ: ಸಚಿವ ನಾಡಗೌಡ

ವಾರ್ತಾಭಾರತಿವಾರ್ತಾಭಾರತಿ11 Jan 2019 10:31 PM IST
share

ಬೆಂಗಳೂರು, ಜ. 11: ಗಾಂಧೀವಾದಿ ನಾಡೋಜ ಪಾಟೀಲ ಪುಟ್ಟಪ್ಪ ಕನ್ನಡಿಗರ ಸಾಕ್ಷಿ ಪ್ರಜ್ಞೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ನಗರದ ಗಾಂಧೀ ಭವನದಲ್ಲಿ ಪಾಟೀಲ ಪುಟ್ಟಪ್ಪ ಜನ್ಮ ಶತಮಾನೋತ್ಸವ ಸಮಿತಿ, ಬಸವ ಸಮಿತಿ ಮತ್ತು ಗಾಂಧೀ ಸ್ಮಾರಕ ನಿಧಿ ವತಿಯಿಂದ ಏರ್ಪಡಿಸಿದ್ದ ನಾಡೋಜ ಡಾ.ಪಾಟೀಲ್ ಪುಟ್ಟಪ್ಪ ಜನ್ಮಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸ್ವಾಭಿಮಾನ, ಭಾಷಾಭಿಮಾನ, ದೇಶಾಭಿಮಾನಕ್ಕೆ ಮಾದರಿ ನಾಡೋಜ ಪಾಟೀಲ್ ಪುಟ್ಟಪ್ಪ. ರಾಜ್ಯ ಸರಕಾರದ ವ್ಯವಹಾರಗಳು ಕನ್ನಡದಲ್ಲಿ ನಡೆಯಲು ಪಾಟೀಲ್ ಪುಟ್ಟಪ್ಪ ಪಾತ್ರ ಅಪಾರವಾದುದು. ಅವರು, ಕನ್ನಡ ನಾಡಿನ ಸಾಕ್ಷಿ ಪ್ರಜ್ಞೆಯಾಗಿದ್ದಾರೆ ಎಂದು ಬಣ್ಣಿಸಿದರು.

ಪತ್ರಿಕೋದ್ಯಮದ ಭೀಷ್ಮರೆಂದೇ ಖ್ಯಾತರಾಗಿರುವ ಪಾಟೀಲ್ ಪುಟ್ಟಪ್ಪಅವರದ್ದು ಅಸಾಮಾನ್ಯ ಪ್ರತಿಭೆ. ರಾಜಕೀಯ ಕ್ಷೇತ್ರದಲ್ಲಿ, ಸ್ವಾತಂತ್ರ ಹೋರಾಟದಲ್ಲಿ ತಮ್ಮದೇ ಛಾಪು ಮೂಡಿಸಿರುವ ಗಾಂಧೀ ಸ್ಪರ್ಶಿಸಿದ ಬಾಲಕ. ಕ್ಯಾಲಿಫೋರ್ನಿಯಾ ವಿವಿಯಿಂದ ಪತ್ರಿಕೋದ್ಯಮ ಪದವಿ ಪಡೆದ ಪುಟ್ಟಪ್ಪಸಾಂಕ ವ್ಯವಸ್ಥೆಯಲ್ಲಿ ಅತಿಯಾದ ನಂಬಿಕೆ. ಬಾಂಬೆ ಕ್ರಾನಿಕಲ್ ಪತ್ರಿಕೆಯಿಂದ ತಮ್ಮ ಪತ್ರಕರ್ತ ವೃತ್ತಿ ಆರಂಭಿಸಿ ನಿಷ್ಠೂರವಾದ ವರದಿಗಳಿಂದ ಪ್ರಖ್ಯಾತಿ ಹೊಂದಿದವರು ಎಂದು ಶ್ಲಾಘಿಸಿದರು.

ಪಾಟೀಲ್ ಅವರ ನಿಷ್ಠೂರ ಬರಹಗಳು ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಿವೆ. ತೀಕ್ಷ್ಣ ಸ್ವರೂಪದ ಬರವಣಿಗೆ ಹಾಗೂ ಸತ್ಯ ಪತ್ರಿಕೋದ್ಯಮಕ್ಕೆ ಅತ್ಯಗತ್ಯ ಎನ್ನುವುದನ್ನು ತೋರಿಸಿಕೊಟ್ಟರು. ಪುಟ್ಟಪ್ಪಅವರು ಎಲ್ಲ ಕ್ಷೇತ್ರಗಳಲ್ಲಿ ಪಾರಮ್ಯ ಸಾಧಿಸಿದ ಮಹಾನ್ ಸಾಧಕ ಎಂದರು.

ಪುಟ್ಟಪ್ಪಗೆ ಜ.14ಕ್ಕೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಹಲವು ಜನರು ಅವರಿಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ, ಅರವಿಂದ ಜತ್ತಿ, ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ. ಕೃಷ್ಣ, ಬಿ.ಎಲ್. ಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X