ಬೈಕ್ ಢಿಕ್ಕಿ: ಸೈಕಲ್ ಸವಾರ ಮೃತ್ಯು
ಹಿರಿಯಡ್ಕ, ಜ.11: ಬೈಕೊಂದು ಸೈಕಲ್ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಕುಕ್ಕೆಹಳ್ಳಿ ಗ್ರಾಮದ ಕಟ್ಟೆಮನೆ ಎಂಬಲ್ಲಿ ಜ.10ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಬಾಬು ಕುಲಾಲ್ ಎಂದು ಗುರುತಿಸಲಾಗಿದೆ. ಇವರು ಸೈಕಲಿನಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಬಾಬು ಕುಲಾಲ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story