Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹತ್ಯೆಗೆ ಸಂಚು ಸುದ್ದಿ ಮೂಲಕ ಚುನಾವಣೆ...

ಹತ್ಯೆಗೆ ಸಂಚು ಸುದ್ದಿ ಮೂಲಕ ಚುನಾವಣೆ ಗೆಲ್ಲಲು ಬಿಜೆಪಿ ತಯಾರಿ: ಎಸ್‌ಡಿಪಿಐ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Jan 2019 11:00 PM IST
share

ಮಂಗಳೂರು, ಜ.11: ದ.ಕ.ಜಿಲ್ಲೆಯ ಕೆಲವು ಸಂಘಪರಿವಾರದ ನಾಯಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಕೆಲವು ಮಾಧ್ಯಮಗಳ ಮೂಲಕ ಪ್ರಚಾರಪಡಿಸಿದ್ದು, ಮತ್ತೊಮ್ಮೆ ಹಿಂದೂ ಮತಗಳನ್ನು ಕ್ರೋಢೀಕರಿಸಿ ಮುಂದಿನ ಲೋಕಸಭಾ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಒಂದು ಪ್ರಯತ್ನವಾಗಿದೆ ಎಂದು ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ.

ಈ ರೀತಿಯ ಹತ್ಯೆಯ ಸಂಚು ಎಂಬ ಪ್ರಹಸನವನ್ನು ಸೃಷ್ಟಿಸುವುದರಲ್ಲಿ ಸಂಘಪರಿವಾರ ಮತ್ತು ಬಿಜೆಪಿ ನಿಸ್ಸೀಮ. ಇಂತಹ ಸತ್ಯಕ್ಕೆ ನಿಲುಕದ ಸುಳ್ಳು ಸುದ್ದಿಗಳನ್ನು ಬಿಜೆಪಿ ಪಕ್ಷವು ಪ್ರತಿಯೊಂದು ಚುನಾವಣೆಯ ಸಂದರ್ಭದಲ್ಲೂ ಛೂ ಬಿಡುತ್ತದೆ. ಆದರೆ ಈ ಸುದ್ದಿ ಎಲ್ಲಿಂದ ಬಂತು? ಯಾರು ಇದರ ಹಿಂದೆ ಇರುವವರು? ಎಂಬುದರ ಬಗ್ಗೆ ತನಿಖೆ ನಡೆಸಿದಾಗ ನಿಖರವಾದ ಮಾಹಿತಿಗಳು ಪೊಲೀಸ್ ಇಲಾಖೆಗೆ ಸಿಕ್ಕಿರುವುದಿಲ್ಲ. ಈ ಸುದ್ದಿಯು ಕೂಡ ಅದೇ ರೀತಿಯಾಗಿದೆ ಎಂದು ಎಸ್‌ಡಿಪಿಐ ಹೇಳಿಕೆಯಲ್ಲಿ ತಿಳಿಸಿದೆ.

ಗುಪ್ತಚರ ಇಲಾಖೆಯು ಇಂತಹ ಸೂಕ್ಷ್ಮಮತ್ತು ಗಂಭೀರ ಸ್ವರೂಪದ ಸುದ್ದಿಯನ್ನು ಗುಪ್ತವಾಗಿ ಕೇವಲ ಎರಡು ಮಾಧ್ಯಮಗಳಿಗೆ ಮಾತ್ರ ನೀಡಿರುವ ಔಚಿತ್ಯವಾದರೂ ಏನು? ಎಂಬ ಸಂಶಯವು ಸಾಮಾನ್ಯವಾಗಿ ಉದ್ಭವಿಸುತ್ತದೆ. ಸಂಘ ಪರಿವಾರವು ಕರಾವಳಿಯ ಪೊಲೀಸ್ ಇಲಾಖೆಯಲ್ಲಿ ಶೇ.60 ಪೊಲೀಸರು ಸಂಘಪರಿವಾರದವರು ಎಂಬ ಹೇಳಿಕೆ ಈ ಮೊದಲು ನೀಡಿರುವುದರಿಂದ ಈ ಪ್ರಹಸನದಲ್ಲಿ ಪೊಲೀಸರು ಕೂಡ ಶಾಮೀಲಾಗಿದ್ದಾರೆಯೇ ಎಂದು ಎಸ್‌ಡಿಪಿಐ ಪ್ರಶ್ನಿಸಿದೆ.

ಮುಸ್ಲಿಂ ನಾಯಕರಿಗೆ ನೇರವಾಗಿ ಬೆದರಿಕೆ ಬಂದ ಸಂದರ್ಭ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದವರು ಸಂಘಪರಿವಾರದ ಕ್ರಿಮಿನಲ್ ನಾಯಕರಿಗೆ ಸರಕಾರಿ ವೆಚ್ಚದಲ್ಲಿ ರಕ್ಷಣೆಯನ್ನು ನೀಡುತ್ತಿರುವುದು ದುರಂತವಾಗಿದೆ ಹಾಗೂ ಈ ಸುಳ್ಳು ಸುದ್ದಿಯನ್ನು ಆಧರಿಸಿ ಮುಸ್ಲಿಂ ಯುವಕರನ್ನು ಬೇಟೆಯಾಡುತ್ತಿರುವುದನ್ನು ಎಸ್‌ಡಿಪಿಐ ಪಕ್ಷವು ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ಸುದ್ದಿಯ ನೈಜತೆಯ ಬಗ್ಗೆ ವಿಶೇಷ ತನಿಖೆ ನಡೆಸಿ ಇದರ ಹಿಂದಿರುವ ಷಡ್ಯಂತ್ರವನ್ನು ಬಹಿರಂಗ ಪಡಿಸುವುದರ ಮೂಲಕ ಸತ್ಯವನ್ನು ಜನರ ಮುಂದೆ ಬಯಲುಗೊಳಿಸಿ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಕಲು ಮುಂದಾಗಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X