Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹನೂರು: ಮನೆಗಳ ಕಾಮಗಾರಿ ಆದೇಶ ಪತ್ರ...

ಹನೂರು: ಮನೆಗಳ ಕಾಮಗಾರಿ ಆದೇಶ ಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ12 Jan 2019 11:29 PM IST
share
ಹನೂರು: ಮನೆಗಳ ಕಾಮಗಾರಿ ಆದೇಶ ಪತ್ರ ವಿತರಣೆ

ಹನೂರು,ಜ.12: ತಾಲೂಕಿನ ಮೀಣ್ಯಂ ಗ್ರಾಮ ಪಂ. ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆಗಳ ಕಾಮಗಾರಿ ಆದೇಶ ಪತ್ರವನ್ನು ಶಾಸಕ ನರೇಂದ್ರ ವಿತರಿಸಿದರು.

ಬಳಿಕ ಮಾತನಾಡಿದ ಶಾಸಕರು, ಮಿಣ್ಯಂ ಗ್ರಾಪಂ ವ್ಯಾಪ್ತಿಯಲ್ಲಿ ಅರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಜನರು ಹೆಚ್ಚು ವಾಸಿಸುತ್ತಿದ್ದು, ಈ ಭಾಗದಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಸರವಾಗಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ 224 ಹಾಗೂ ಅಂಗವಿಕರಿಗೆ 9 ಮನೆ ಒಟ್ಟು 233 ಮನೆಗಳ ಆದೇಶ ಪತ್ರವನ್ನು ಶನಿವಾರ ವಿತರಣೆ ಮಾಡಲಾಗುತ್ತಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಹಾಗೆಯೇ ಮುಂದಿನ ದಿನಗಳಲ್ಲಿ ಗ್ರಾಮದ ಮುಖಂಡರು ನೇರವಾಗಿ ನನ್ನನ್ನು ಭೇಟಿ ಮಾಡಿ ಮನೆಗಳು ಅವಶ್ಯಕತೆ ಇರುವ ಗ್ರಾಮಸ್ಥರ ಹೆಸರುಗಳ ಪಟ್ಟಿ ನೀಡಿ ಎಂದರು.

ಮಧ್ಯವರ್ತಿಗಳು ಮೊರೆ ಹೋಗದಿರಿ: ಸರಕಾರದ ಸವಲತ್ತುಗಳನ್ನು ಗ್ರಾಮಸ್ಥರಿಗೆ ತಲುಪಿಸಲು ಸರಕಾರದಿಂದ ಯಾರನ್ನೂ ಸಹ ಮದ್ಯವರ್ತಿಗಳನ್ನಾಗಿ ನೇಮಿಸಿಲ್ಲ. ನಿಮ್ಮ ಸೇವೆ ಮಾಡಲು ಶಾಸಕನಾಗಿ ಸದಾ ನಿಮ್ಮ ಜೊತೆ ನಾನಿದ್ದೇನೆ. ಇತ್ತೀಚಿನ ದಿನಗಳಲ್ಲಿ ಹಲವು ಗ್ರಾಮ ಪಂ. ವ್ಯಾಪ್ತಿಯಲ್ಲಿ ಮದ್ಯವರ್ತಿಗಳು ಹಾವಳಿ ಹೆಚ್ಚಾಗಿದ್ದು, ಅಂತವರ ವಿರುದ್ಧ ಎಚ್ಚರದಿಂದ ಇರುವಂತೆ ಗ್ರಾಮಸ್ಥರಿಗೆ ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಸದಸ್ಯ ನಟರಾಜು, ಪಾರ್ವತಿಬಾಯಿ, ದಿನ್ನಳ್ಳಿ ಗ್ರಾಪಂ ಸದಸ್ಯ ಮುರುಗೇಶ್, ಮುಖಂಡ ಬಾಲಾಜು ಪ್ರಕಾಶ್, ರಾಜಪ್ಪ ಕಾಳಿಯಪ್ಪ, ಕುಮಾರ್ ರಾಜು ಬಸವರಾಜು ಪ್ರಭುಸ್ವಾಮಿ ಸಿದ್ದುನಾಯಕ ಕೃಷ್ಣ, ಮುನಿಗೌಡ ಪಿಡಿಒ ಮಹದೇವ್ ಸೇರಿದಂತೆ ಹಲವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X