ಸಜ್ಜನ್ ಕುಮಾರ್ ಮೇಲ್ಮನವಿ; ಸಿಬಿಐಗೆ ಸುಪ್ರೀಂ ನೋಟಿಸ್
ಹೊಸದಿಲ್ಲಿ, ಜ.14: 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಸೇರಿರುವ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರು ದಿಲ್ಲಿ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸಲ್ಲಿರುವ ಮೇಲ್ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಸೋಮವಾರ ಸಿಬಿಐಗೆ ಈ ಸಂಬಂಧ ನೋಟಿಸ್ ಜಾರಿಗೊಳಿಸಿದೆ.
ಆರು ವಾರಗಳ ಒಳಗಾಗಿ ನೋಟಿಸ್ ಗೆ ಉತ್ತರಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಶರಣಾಗಲು 30 ದಿನಗಳ ಸಮಯಾವಕಾಶ ಕೋರಿ ಸಜ್ಜನ್ ಕುಮಾರ್ ಡಿ. 21ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವಧಿ ವಿಸ್ತರಣೆ ಮಾಡಲು ಯಾವುದೇ ಆಧಾರವಿಲ್ಲ ಎಂದು ಹೇಳಿದ್ದ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ, ಡಿ.31ರ ಒಳಗಾಗಿ ಶರಣಾಗುವಂತೆ ತಿಳಿಸಿತ್ತು. ಅದರಂತೆ ಸಜ್ಜನ್ ಕುಮಾರ್ ಡಿ.31ರಂದು ನ್ಯಾಯಾಲಯಕ್ಕೆ ಶರಣಾಗಿದ್ದರು.
Next Story