Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ ಸರಕಾರದ ದುರಾಡಳಿತದಿಂದ...

ಕೇಂದ್ರ ಸರಕಾರದ ದುರಾಡಳಿತದಿಂದ ಮೃತ್ಯುಕೂಪವಾದ ಹಾಸನ- ಮಂಗಳೂರು ಹೆದ್ದಾರಿ: ಎಚ್. ವಿಶ್ವನಾಥ್

'ರಾಷ್ಟ್ರೀಯ ಹೆದ್ದಾರಿ ಪೂರ್ಣಗೊಳಿಸಿ, ಜನರ ಜೀವ ಉಳಿಸಿ' ಘೋಷಣೆಯೊಂದಿಗೆ ಕಾಂಗ್ರೆಸ್ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ14 Jan 2019 10:17 PM IST
share
ಕೇಂದ್ರ ಸರಕಾರದ ದುರಾಡಳಿತದಿಂದ ಮೃತ್ಯುಕೂಪವಾದ ಹಾಸನ- ಮಂಗಳೂರು ಹೆದ್ದಾರಿ: ಎಚ್. ವಿಶ್ವನಾಥ್

ಉಪ್ಪಿನಂಗಡಿ, ಜ. 14: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರಾಡಳಿತದಿಂದಾಗಿ ಹಾಸನ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯು ಇಂದು ಮೃತ್ಯುಕೂಪವಾಗಿ ಮಾರ್ಪಾಡಾಗಿದ್ದು, ಭಯದಿಂದಲೇ ಸಂಚರಿಸಬೇಕಾದ ಸ್ಥಿತಿ ಬಂದೊದಗಿದೆ. ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಜನಸಾಮಾನ್ಯರಿಗೆ ಸಾವಿರಾರು ಸಮಸ್ಯೆಗಳಿದ್ದು, ಅದನ್ನು ಬಗೆಹರಿಸಲು ಮುಂದಾಗದ ಕೇಂದ್ರ ಸರಕಾರ ಧರ್ಮ ರಾಜಕಾರಣದ ಮೂಲಕ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಸಕಲೇಶಪುರ ಮಾಜಿ ಶಾಸಕ ಎಚ್. ವಿಶ್ವನಾಥ್ ತಿಳಿಸಿದರು.

ಹಾಸನ- ಗುಂಡ್ಯ- ಬಿ.ಸಿ.ರೋಡ್ ಅಪೂರ್ಣ ಹೆದ್ದಾರಿಯ ಅಸ್ಥವ್ಯಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಸೋಮವಾರ ನಡೆದ ಕಾಲ್ನಡಿಗೆ ಜಾಥಾವು ಉಪ್ಪಿನಂಗಡಿಗೆ ಆಗಮಿಸಿದ ಸಂದರ್ಭ ಇಲ್ಲಿನ ಬಸ್‍ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರದ ಜನ ವಿರೋಧಿ ನೀತಿಗಳಿಂದಾಗಿ ದೇಶವಿಂದು ಕತ್ತಲೆಯ ಹಾದಿಗೆ ತಳ್ಳಲ್ಪಟ್ಟಿದೆ. ಸೋಲಿನ ಹತಾಶೆಯಲ್ಲಿರುವ ಬಿಜೆಪಿಯವರು ದೇಶದ ಅಭಿವೃದ್ಧಿ ಬಗ್ಗೆ ಚಿಂತಿಸದೆ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಉದ್ದೇಶದಿಂದ ರಾಮ ಮಂದಿರ, ಶಬರಿಮಲೆ ವಿಷಯದಲ್ಲಿ ಧರ್ಮ ರಾಜಕಾರಣ ಮಾಡಿ ದೇಶವನ್ನು ಒಡೆಯಲು ಹುನ್ನಾರ ನಡೆಸುತ್ತಿದ್ದಾರೆ. ಅಭಿವೃದ್ಧಿಯ ಕೆಲಸ ನಡೆಸುವ ಬದಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಭಾಷಣ, ಘೋಷಣೆಗಷ್ಟೇ ಸೀಮಿತವಾಗಿದೆ ಎಂದು ಅವರು ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಮುಖಂಡ ಸುಧೀರ್ ಕೊಪ್ಪ ಮಾತನಾಡಿ, ಬಿಜೆಪಿಯವರಿಗೆ ಅಭಿವೃದ್ಧಿಯ ರಾಜಕಾರಣ ಬೇಡ. ಅವರಿಗೆ ಬೇಕಾಗಿರೋದು ಜನರನ್ನು ಧರ್ಮದ ಹೆಸರಿನಲ್ಲಿ ವಿಭಜಿಸುವ ರಾಜಕಾರಣ. ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸದ ಬಿಜೆಪಿ ಕೋಮುಗಲಭೆ, ಹತ್ಯೆಗಳಾದಾಗ ಮಾತ್ರ ನಿದ್ದೆಯಿಂದ ಎದ್ದು ಬಂದು ಆ್ಯಕ್ಟೀವ್ ಆಗುತ್ತಾರೆ. ಇನ್ನೊಬ್ಬರ ದುಃಖದ ನಡುವೆ ಇವರು ಚುನಾವಣಾ ಲೆಕ್ಕಾಚಾರ ಹಾಕುತ್ತಾರೆ ಎಂದರು.

ಇಲ್ಲಿನ ರಸ್ತೆ ದುರಸ್ತಿ ಮಾಡುವುದು ಸಂಸದ ನಳಿನ್ ಕುಮಾರ್ ಅವರ ಜವಾಬ್ದಾರಿಯಲ್ಲ.  ಅವರ ಜವಾಬ್ದಾರಿ ಸೌಹಾರ್ದಯುತ ಜಿಲ್ಲೆಗೆ ಬೆಂಕಿ ಹಚ್ಚೋದು ಮಾತ್ರ ಆಗಿದೆ. ಆದ್ದರಿಂದ ಸಮಾಜದಲ್ಲಿ ದ್ವೇಷದ ವಿಷ ಬೀಜ ಬಿತ್ತುವಂತಹ ಮನೋಸ್ಥಿತಿಯ ರಾಜಕಾರಣವನ್ನು ಜನತೆ ಒದ್ದೋಡಿಸಬೇಕು ಎಂದು ಸುಧೀರ್ ಕೊಪ್ಪ ತಿಳಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ರಾಜಕೀಯಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯ ಪವಿತ್ರ ಕ್ಷೇತ್ರ ಕಟೀಲ್‍ನ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಸಂಸದನಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡದಿದ್ದರೂ ತನ್ನ ರಾಜಕೀಯಕ್ಕಾಗಿ ಹಲವು ಬಡ ಜೀವಗಳನ್ನು ಬಲಿತೆಗೆದುಕೊಂಡಿದ್ದಾರೆ. ಆದ್ದರಿಂದ ಬಿಜೆಪಿಯ ಬಗ್ಗೆ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ನಮ್ಮ ಇಂದಿನ ಈ ಹೋರಾಟ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಲ್ಲ. 63 ಕಿ.ಮೀ. ಈ ರಾಷ್ಟ್ರೀಯ ಹೆದ್ದಾರಿ ಸರಿಯಾಗಿ ಜನರ ಸಮಸ್ಯೆ ಬಗೆಹರಿಯುವವರೆಗೆ ನಿರಂತರ ಹೋರಾಟ ಕಾಂಗ್ರೆಸ್‍ನಿಂದ ನಡೆಯಲಿದೆ ಎಂದರು.

ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಂಜೇಶ್ವರದ ಕಾಂಗ್ರೆಸ್ ಮುಖಂಡ ಹಾರೀಸ್ ಬಾಬು ಮಾತನಾಡಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರು ಗಳಾದ ಶಾಹುಲ್ ಹಮೀದ್, ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ಕೆಪಿಸಿಸಿ ಸದಸ್ಯ ಡಾ. ಬಿ. ರಘು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ, ಸುಳ್ಯ ಬ್ಲಾಕ್ ಅಧ್ಯಕ್ಷ ವೆಂಕಪ್ಪ ಗೌಡ, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‍ನ ಉಲ್ಲಾಸ್ ಕೋಟ್ಯಾನ್, ಮಾಣಿಕ್ಯರಾಜ್ ಪಡಿವಾಳ್, ಬೇಬಿ ಕುಂದರ್, ತಾಲೂಕು ಪಂಚಾಯತ್  ಸದಸ್ಯರಾದ ಉಷಾ ಅಂಚನ್, ಫಝಲ್ ಕೋಡಿಂಬಾಳ, ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ, ಸುಧೀರ್ ಕುಮಾರ್ ಶೆಟ್ಟಿ, ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಅಶ್ರಫ್ ಬಸ್ತಿಕ್ಕಾರ್, ನಝೀರ್ ಮಠ, ಹಾಜಿ ಮುಸ್ತಫಾ ಕೆಂಪಿ, ಯು.ಕೆ. ಇಬ್ರಾಹಿಂ, ಯು.ಕೆ. ಅಯ್ಯೂಬ್, ಕೃಷ್ಣ ರಾವ್ ಅರ್ತಿಲ, ಡಾ. ರಾಜಾರಾಮ್, ಮಹಮ್ಮದ್ ಕೆಂಪಿ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಬ್ಬೀರ್ ಕೆಂಪಿ, ಅಫ್ತಾಬ್ ಬಸ್ತಿಕ್ಕಾರ್, ನಝೀರ್ ಬೆದ್ರೋಡಿ, ಪುತ್ತೂರು ತಾಲೂಕು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ವಿಕ್ರಂ ಶೆಟ್ಟಿ, ಗಂಗಾಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಸ್ವಾಗತಿಸಿದರು. ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ವಂದಿಸಿದರು. ವಲಯ ಕಾಂಗ್ರೆಸ್ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X