ದುಬೈ: ಡಾ.ಝೈನಿ ಕಾಮಿಲ್ ಸಖಾಫಿಗೆ ಜ.18 ರಂದು ಸನ್ಮಾನ

ದುಬೈ,ಜ.14: ಇತ್ತೀಚಿಗೆ ಓಪನ್ ಇಂಟರ್ ನ್ಯಾಷನಲ್ ಯುನಿವರ್ಸಿಟಿಯಿಂದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಪದವಿ ಪಡೆದ ನಂತರ ಮೊದಲ ಬಾರಿಗೆ ಯುಎಇ ಗೆ ಆಗಮಿಸುತ್ತಿರುವ ಕುಂಬ್ರ ಮರ್ಕಝ್ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರನ್ನು ಜನವರಿ 18 ರಂದು ದುಬೈ ನಗರದ ಖಲೀಜ್ ಹೋಟೆಲ್ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಸನ್ಮಾನಿಸಲಾಗುವುದು.
ಪ್ರಸ್ತುತ ಕಾರ್ಯಕ್ರಮದಲ್ಲಿ ಹಲವು ಸುನ್ನಿ ಸಂಘ ಸಂಸ್ಥೆಗಳ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರ್ಕಝುಲ್ ಹುದಾ ಯುಎಇ ರಾಷ್ಟ್ರಿಯ ಸಮಿತಿ ಅಧ್ಯಕ್ಷ ಮುಹಮ್ಮದ್ ಶಕೂರ್ ಮನಿಲಾ ವಹಿಸಲಿದ್ದಾರೆ. ಉದ್ಘಾಟನೆಯನ್ನು ಕೆಸಿಎಫ್ ರಾಷ್ಟ್ರಿಯ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಸಹದಿ ಈಶ್ವರಮಂಗಿಲ ಮಾಡಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





