Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅವೈಜ್ಞಾನಿಕ ಕಾಮಗಾರಿ ಕರಗಡ ಯೋಜನೆ...

ಅವೈಜ್ಞಾನಿಕ ಕಾಮಗಾರಿ ಕರಗಡ ಯೋಜನೆ ವೈಫಲ್ಯಕ್ಕೆ ಕಾರಣ: ಎಸ್.ಎಲ್.ಬೋಜೇಗೌಡ

ವಾರ್ತಾಭಾರತಿವಾರ್ತಾಭಾರತಿ14 Jan 2019 11:43 PM IST
share
ಅವೈಜ್ಞಾನಿಕ ಕಾಮಗಾರಿ ಕರಗಡ ಯೋಜನೆ ವೈಫಲ್ಯಕ್ಕೆ ಕಾರಣ: ಎಸ್.ಎಲ್.ಬೋಜೇಗೌಡ

ಚಿಕ್ಕಮಗಳೂರು, ಜ.14: ಕರಗಡ ಏತ ನೀರಾವರಿ ಯೋಜನೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಆದರೆ ಈ ಯೋಜನೆ ಅಧಿಕಾರಿಗಳ ಹಾಗೂ ಕ್ಷೇತ್ರದ ಶಾಸಕರ ನಿರ್ಲಕ್ಷ್ಯದಿಂದಾಗಿ ಹಳ್ಳ ಹಿಡಿಯುವಂತಾಗಿದೆ. ತಾಂತ್ರಿಕವಾಗಿ ಈ ಯೋಜನೆ ವೈಫಲ್ಯ ಕಂಡಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೋಟಿಗಟ್ಟಲೆ ಹಣ ವ್ಯಯವಾದ ಮೇಲೆ ಹೇಳುತ್ತಿದ್ದಾರೆ. ಯೋಜನೆ ವಿಫಲಗೊಂಡ ಬಳಿಕ ಈ ಬಗ್ಗೆ ಸಬೂಬು ಹೇಳುತ್ತಿರುವುದು ಬೇಸರದ ಸಂಗತಿ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ವಿಷಾದಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಗಡ ಯೋಜನೆಯ ವಿಫಲತೆಗೆ ಅಧಿಕಾರಿಗಳೇ ಕಾರಣ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಯೋಜನೆ ಅಪೂರ್ಣವಾಗಿದೆ. ಈ ಸಂಬಂಧ ತನಿಖೆಯಾಗಬೇಕು. ಯೋಜನೆಯ ಆರಂಭದ ಹಂತದಲ್ಲಿ ಜನಪ್ರತಿಧಿಯಾದವರು ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮಾತನಾಡದೇ ಮೌನವಹಿಸಿದ್ದು, ಈಗ ಮಾತನಾಡುತ್ತಿದ್ದಾರೆಂದು ಶಾಸಕ ಸಿ.ಟಿ.ರವಿ ಅವರನ್ನು ಪರೋಕ್ಷವಾಗಿ ಟೀಕಿಸಿದ ಅವರು, ಯೋಜನೆ ವೈಫಲ್ಯ ಕಾಣಲಿದೆ ಎಂಬ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರಲಿಲ್ಲವೇ? ಯೋಜನೆಗೆ ಸರಕಾರ ಕೋಟ್ಯಂತರ ರೂ. ಖರ್ಚಾಗಿದೆ. ಆದರೆ ಕಾಮಗಾರಿ ವಿಫಲವಾಗಿದೆ. ಇದರಿಂದ ರೈತರು ಹಾಗೂ ಸರಕಾರದ ಖಜಾನೆಗೆ ನಷ್ಟವಾಗಿದೆಯಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದರು.

ಸದ್ಯ ಮೋಟರ್ ಗಳ ಮೂಲಕ ನೀರೆತ್ತಿ ಪೈಪ್‍ಲೈನ್ ಮೂಲಕ ಕೆರೆಗಳಿಗೆ ನೀರು ಹರಿಸುವ ಯೋಜನೆ ಕೈಗೊಳ್ಳಲಾಗಿದ್ದರೂ ಅದು ತಾಂತ್ರಿಕವಾಗಿ ಸಾಧ್ಯವಿಲ್ಲ ಎನ್ನಲಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದು ಜನಪ್ರತಿನಿಧಿಗಳ ಜವಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಬಳಿ ಚರ್ಚೆ ನಡೆಸಲಾಗಿದ್ದು, ವೈಜ್ಞಾನಿಕವಾಗಿ ಕಾಮಗಾರಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆಂದು ಅವರು ತಿಳಿಸಿದರು.

ಸರಕಾರ ಬೀಳುತ್ತದೆ ಎಂದು ಬಿಜೆಪಿ ಪಕ್ಷದ ಮುಖಂಡರು ಹಗಲು ಕನಸು ಕಾಣುತ್ತಿದ್ದಾರೆ. ಪ್ರತೀ ಹಬ್ಬಗಳ ಸಂದರ್ಭದಲ್ಲೂ ಬಿಜೆಪಿ ಮುಖಂಡರು ಇದನ್ನೇ ಹೇಳುತ್ತಿದ್ದಾರೆ. ಸಂಕ್ರಾತಿ ವೇಳೆಯೂ ಸರಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿಯವರು ಹಗಲು ಕನಸು ಕಾಣುತ್ತಲೇ ಇರಲಿ, ಸಮ್ಮಿಶ್ರ ಸರಕಾರ ತನ್ನ ಐದು ವರ್ಷ ಪೂರೈಸುವುದು ಖಚಿತ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಸಿಎಂ ಆಗಿರುವ ಕುಮಾರಸ್ವಾಮಿ ನೇತೃತ್ವದ ಸರಕಾರ ಬಿಜೆಪಿ ಮುಖಂಡರ ಹೇಳಿಕೆಗಳಿಂದ ಪತನವಾಗುವುದಿಲ್ಲ ಎಂದ ಅವರು, ಮಧು ಬಂಗಾರಪ್ಪ ಅವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದಾರೆ. ಈ ಕಾರಣಕ್ಕೆ ಅವರಲ್ಲಿ ಸಣ್ಣ ಅಸಮಾದಾನವಿತ್ತು. ಅದು ಶಮನಗೊಂಡಿದೆ ಎಂದು ಅವರೇ ಹೇಳಿರುವುದರಿಂದ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮೂಲಕ ಚುನಾವಣೆ ಎದುರಿಸಿದರೆ ಜನರ ಪ್ರೀತಿಗಳಿಸಬಹುದೆಂಬ ಕಾರಣಕ್ಕೆ ಚುನಾವಣೆಯನ್ನು ಹೊಂದಾಣಿಕೆ ಮೂಲಕವೇ ಎದುರಿಸಲಾಗುತ್ತಿದೆ. ರಾಜ್ಯದಲ್ಲಿ 12 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದ್ದು, ಚಿಕ್ಕಮಗಳೂರು, ಉಡುಪಿ ಕ್ಷೇತ್ರವನ್ನೂ ಜೆಡಿಎಸ್ ಕೇಳಿದೆ. ಈ ಬಗ್ಗೆ ಅಂತಿಮ ತೀರ್ಮಾನವಾಗಿಲ್ಲ. ಈ ಕ್ಷೇತ್ರ ಜೆಡಿಎಸ್‍ಗೆ ಧಕ್ಕಿದಲ್ಲಿ ವರಿಷ್ಠರ ತೀರ್ಮಾನದಂತೆ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

- ಎಸ್.ಎಲ್.ಬೋಜೇಗೌಡ

ಶಿವಮೊಗ್ಗ-ಶೃಂಗೇರಿ ರೈಲ್ವೆ ಯೋಜನೆ ಸಂಬಂಧ ಸಿಎಂ ಕುಮಾರಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆದಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಈ ಬಗ್ಗೆ ಕಡತಗಳ ಪರಿಶೀಲಿಸಿ ಮಾಹಿತಿ ಪಡೆಯುತ್ತೇನೆ. ಕೇಂದ್ರದ ಬಜೆಟ್‍ಗೂ ಮುನ್ನ ರಾಜ್ಯದಲ್ಲಿ ಜಾರಿಯಾಗಬೇಕಿರುವ ಮಹತ್ವದ ಅಭಿವೃದ್ಧಿ ಯೋಜನೆಗಳ ಬಗ್ಗೆ ರಾಜ್ಯ ಸರಕಾರ ಕೇಂದ್ರದ ಗಮನಸೆಳೆಯುವುದು ಸಹಜ. ಈ ಸಂಬಂಧ ಸಿಎಂ ಅಗತ್ಯ ಕ್ರಮವಹಿಸಿದ್ದಾರೆ.
- ಎಸ್.ಎಲ್.ಬೋಜೇಗೌಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X