Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಭಾರತಕ್ಕೆ ಆಸೀಸ್ ವಿರುದ್ಧ...

ಇಂದು ಭಾರತಕ್ಕೆ ಆಸೀಸ್ ವಿರುದ್ಧ ಮಾಡು-ಮಡಿ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ14 Jan 2019 11:47 PM IST
share
ಇಂದು ಭಾರತಕ್ಕೆ ಆಸೀಸ್ ವಿರುದ್ಧ ಮಾಡು-ಮಡಿ ಪಂದ್ಯ

ಅಡಿಲೇಡ್,ಜ.14: ಟೀಮ್ ಇಂಡಿಯಾ ಆತಿಥೇಯ ಆಸ್ಟ್ರೇಲಿಯ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸ್ಪರ್ಧೆಯಲ್ಲಿರಬೇಕಾದರೆ ಮಂಗಳವಾರ ಇಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಇದು ಕೊಹ್ಲಿ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ.

ಶಿಸ್ತಿನ ನೆಲೆಯಲ್ಲಿ ಹಾರ್ದಿಕ್ ಪಾಂಡ್ಯರನ್ನು ಹಠಾತ್ತನೆ ಅಮಾನತುಗೊಳಿಸಿರುವುದು ತಂಡದ ಬ್ಯಾಟಿಂಗ್ ಸರದಿಯ ಸಮತೋಲನದ ಮೇಲೆ ಪರಿಣಾಮ ಬೀರಿದೆ. ಮೊದಲ ಪಂದ್ಯದಲ್ಲಿ ಉಪ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 22ನೇ ಶತಕ ಸಿಡಿಸಿದರೂ ಭಾರತ 34 ರನ್‌ನಿಂದ ಸೋತಿತ್ತು. ಈ ಪಂದ್ಯದಲ್ಲಿ ಎಂಎಸ್ ಧೋನಿ 96 ಎಸೆತಗಳಲ್ಲಿ 51 ರನ್ ಗಳಿಸಿದ್ದರೂ ತಂಡದ ಇನಿಂಗ್ಸ್‌ಗೆ ವೇಗ ನೀಡಲು ವಿಫಲರಾಗಿದ್ದರು.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಸರದಿ ತೀವ್ರ ಪರೀಕ್ಷೆಗೆ ಒಳಗಾಗಿತ್ತು. ಅಗ್ರ ಮೂವರು ದಾಂಡಿಗರಾದ ರೋಹಿತ್, ಶಿಖರ್ ಧವನ್ ಹಾಗೂ ಕೊಹ್ಲಿ 2016ರಿಂದ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಧೋನಿ ಸರಾಸರಿ 52.95ರಷ್ಟಿದೆ. 333 ಪಂದ್ಯಗಳಲ್ಲಿ ಆಡಿರುವ ಧೋನಿ ಪ್ರಸಕ್ತ 50.11 ಸರಾಸರಿ ಇದೆ. 4ನೇ ಕ್ರಮಾಂಕದಲ್ಲಿ ಅವರ ವೃತ್ತಿಜೀವನದ ಸ್ಟ್ರೈಕ್‌ರೇಟ್ 94.21 ರಷ್ಟಿದೆ. ಇದು 5 ಹಾಗೂ 6ನೇ ಕ್ರಮಾಂಕಕ್ಕಿಂತ ಹೆಚ್ಚಾಗಿದೆ. ಕಳೆದ ಬಾರಿ 2016ರಲ್ಲಿ ಧೋನಿ ಆಸ್ಟ್ರೇಲಿಯದಲ್ಲಿ 4ನೇ ಕ್ರಮಾಂಕದಲ್ಲಿ 2 ಪಂದ್ಯಗಳನ್ನು ಆಡಿದ್ದರೂ ಕೇವಲ 18 ರನ್ ಗಳಿಸಿದ್ದರು. ಪಾಂಡ್ಯ ಬದಲಿಗೆ ತಮಿಳುನಾಡು ಆಲ್‌ರೌಂಡರ್ ವಿಜಯ್ ಶಂಕರ್ ಸೋಮವಾರ ಮಧ್ಯಾಹ್ನ ಅಡಿಲೇಡ್‌ಗೆ ಬಂದಿಳಿದಿದ್ದಾರೆ. ಅವರು 11ರ ಬಳಗಕ್ಕೆ ಆಯ್ಕೆಯಾಗುವ ಸಾಧ್ಯತೆಯಿಲ್ಲ. ಆಲ್‌ರೌಂಡರ್ ಅಂಬಟಿ ರಾಯುಡು ವಿರುದ್ಧ ಶಂಕಾಸ್ಪದ ಬೌಲಿಂಗ್ ಆರೋಪ ಕೇಳಿಬಂದರೂ ಅವರು ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯಲು ಯಾವುದೇ ಸಮಸ್ಯೆಯಿಲ್ಲ. ದಿನೇಶ್ ಕಾರ್ತಿಕ್ ಬದಲಿಗೆ ಆಲ್‌ರೌಂಡರ್ ಕೇದಾರ್ ಜಾಧವ್ ಆಡುವ 11ರ ಬಳಗ ಸೇರುವ ಸಾಧ್ಯತೆಯಿದೆ. ಭಾರತ ಮೊದಲ ಏಕದಿನದಲ್ಲಿ ಕಣಕ್ಕಿಳಿಸಿದ್ದ ತಂಡವನ್ನೇ ಆಡಿಸುವ ಎಲ್ಲ ಸಾಧ್ಯತೆಯಿದೆ. ಮೊದಲ ಪಂದ್ಯದಲ್ಲಿ ಪರದಾಡಿದ್ದ ವೇಗಿ ಖಲೀಲ್ ಅಹ್ಮದ್ ಸೋಮವಾರ ಯಜುವೇಂದ್ರ ಚಹಾಲ್‌ರೊಂದಿಗೆ ನೆಟ್ ಪ್ರಾಕ್ಟೀಸ್ ನಡೆಸಿದ್ದು, ಮತ್ತೊಂದು ಅವಕಾಶ ಪಡೆಯುವ ನಿರೀಕ್ಷೆಯಿದೆ. ಮೊದಲ ಪಂದ್ಯದಲ್ಲಿ ಮೂವರು ವೇಗದ ಬೌಲರ್‌ಗಳ ಪೈಕಿ ಮುಹಮ್ಮದ್ ಶಮಿ ಮಾತ್ರ ಉತ್ತಮ ಪ್ರದರ್ಶನ ನೀಡಿದ್ದರು. ಟೀಮ್ ಮ್ಯಾನೇಜ್‌ಮೆಂಟ್ ರವೀಂದ್ರ ಜಡೇಜರ ಆಲ್‌ರೌಂಡ್ ಪ್ರದರ್ಶನವನ್ನು ನೆಚ್ಚಿಕೊಂಡಿದೆ. ಮುಹಮ್ಮದ್ ಸಿರಾಜ್ ಕೋಚ್ ರವಿ ಶಾಸ್ತ್ರಿ ಹದ್ದಿನಕಣ್ಣಿನಡಿ ದೀರ್ಘ ಅಭ್ಯಾಸ ನಡೆಸಿದ್ದು ಅಹ್ಮದ್ ಜಾಗ ತುಂಬುವ ಸ್ಪರ್ಧೆಯಲ್ಲಿದ್ದಾರೆ.

ಭಾರತದ ಅಗ್ರ ಮೂವರು ದಾಂಡಿಗರು ಉತ್ತಮ ಪ್ರದರ್ಶನ ನೀಡಿದರೆ ಮಧ್ಯಮ ಕ್ರಮಾಂಕದ ದಾಂಡಿಗರ ಒತ್ತಡ ಕಡಿಮೆಯಾಗುತ್ತದೆ. ಕೊಹ್ಲಿ ಅಡಿಲೇಡ್ ಓವಲ್‌ನಲ್ಲಿ ಎಲ್ಲ 3 ಮಾದರಿ ಕ್ರಿಕೆಟ್‌ನಲ್ಲಿ 73.44 ಸರಾಸರಿ ಕಾಯ್ದುಕೊಂಡಿದ್ದು, ಏಕದಿನ ಕ್ರಿಕೆಟ್‌ನಲ್ಲಿ ಅವರ ಸರಾಸರಿ 46.66ರಷ್ಟಿದೆ.ಮತ್ತೊಂದೆಡೆ, ಆಸ್ಟ್ರೇಲಿಯ ಅಂತಿಮ-11ರ ಬಳಗವನ್ನು ಪ್ರಕಟಿಸಿಲ್ಲ. ಅನಾರೋಗ್ಯದಿಂದ ಮೊದಲ ಪಂದ್ಯ ತಪ್ಪಿಸಿಕೊಂಡಿದ್ದ ಮಿಚೆಲ್ ಮಾರ್ಷ್ 2ನೇ ಪಂದ್ಯ ಆಡಲಿದ್ದಾರೆ ಎಂದು ಉಪ ನಾಯಕ ಅಲೆಕ್ಸ್ ಕಾರೆ ಹೇಳಿದ್ದಾರೆ.

ಬಹುದಿನದ ಬಳಿಕ ಸಿಡ್ನಿ ಏಕದಿನದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದ ಆಸ್ಟ್ರೇಲಿಯ ರೋಚಕ ಜಯ ದಾಖಲಿಸಿ ಸರಣಿಯಲ್ಲಿ ಮುನ್ನಡೆ ದಾಖಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X