Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಳಿನ್ ಕುಮಾರ್ ಕಟೀಲ್ ಸ್ವಯಂಘೋಷಿತ ನಂ.1...

ನಳಿನ್ ಕುಮಾರ್ ಕಟೀಲ್ ಸ್ವಯಂಘೋಷಿತ ನಂ.1 ಸಂಸದ: ರಮಾನಾಥ ರೈ

ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ16 Jan 2019 9:13 PM IST
share
ನಳಿನ್ ಕುಮಾರ್ ಕಟೀಲ್ ಸ್ವಯಂಘೋಷಿತ ನಂ.1 ಸಂಸದ: ರಮಾನಾಥ ರೈ

ಬಂಟ್ವಾಳ, ಜ. 15: ಕಾಂಗ್ರೆಸ್‍ನಿಂದ ಆಯ್ಕೆಯಾದ ಸಂಸದರು ಜಿಲ್ಲೆಯಲ್ಲಿ ನಂ.1 ಆಗಿದ್ದಾರೆ. ನಳಿನ್ ಕುಮಾರ್ ಕಟೀಲ್ ಸ್ವಯಂಘೋಷಿತ ನಂ.1 ಸಂಸದ. ಜಿಲ್ಲೆಯಲ್ಲಿ ಅಭಿವೃದ್ಧಿಯನ್ನೇ ಮಾಡದ ನಳಿನ್‍ಗೆ ನಂ.1 ಪಟ್ಟ ಕೊಡುವುದಾದರೆ ಉಳಿದ ಬಿಜೆಪಿ ಸಂಸದರ ಗತಿಯೇನು ? ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.

ಹಾಸನ- ಗುಂಡ್ಯ- ಬಿ.ಸಿ.ರೋಡ್ ಅಪೂರ್ಣ ಹೆದ್ದಾರಿಯ ಅಸ್ಥವ್ಯಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಸೋಮವಾರ ನಡೆದ ಕಾಲ್ನಡಿಗೆ ಜಾಥಾವು ಬುಧವಾರ ಬಿ.ಸಿ.ರೋಡ್‍ನಲ್ಲಿ ಸಮಾಪ್ತಿಗೊಂಡಿದ್ದು, ಬಳಿಕ ಬಿ.ಸಿ.ರೋಡ್ ನಾರಾಯಣಗುರು ವೃತ್ತದ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರಕಾರ ಮತ್ತು ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ವೈಫಲ್ಯವನ್ನು ಜನರಿಗೆ ತೋರಿಸುವ ಕೆಲಸವನ್ನು ಇಂದು ಪಾದಯಾತ್ರೆ ಮೂಲಕ ಕಾಂಗ್ರೆಸ್ ಮಾಡಿದೆ. ನಾವು ಪಾದೆಯಾತ್ರೆ ಮಾಡುವುದು ಚರ್ಬಿ ಇಳಿಸಲು ಎಂದ ಇಲ್ಲಿನ ಸಂಸದರ ಚರ್ಬಿ ಇಳಿಸಬೇಕಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಉದ್ದಿಮೆದಾರರ ಸಾಲ ಮನ್ನಾ ವಿಚಾರದಲ್ಲಿ ಹುಂ ಎನ್ನುತ್ತಾರೆ. ಆದರೆ ರೈತರ ಸಾಲ ಮನ್ನಾ ವಿಚಾರದಲ್ಲಿ ಉಹೂಂ ಎನ್ನುತ್ತಾರೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮಾತನಾಡಿ, ಜಿಲ್ಲೆಯ ಜನ ಸಾಮಾನ್ಯರ ಪಾದಯಾತ್ರೆ. ಇದು ಕೇಂದ್ರ ವೈಫಲ್ಯಗಳನ್ನು ಎಚ್ಚರಿಸುವ ಕರೆ ಗಂಟೆಯಾಗಿದೆ ಎಂದವರು, ಹುತಾತ್ಮ ಸೈನಿಕರ ಮನೆಗೆ ತೆರಳಿ ಸಾಂತ್ವನ ಹೇಳುವ ಸೌಜನ್ಯ ಇಲ್ಲದ ಪ್ರಧಾನಿ ದೇಶದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

ಮುಂದಿನ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಈ ದೇಶದ ಪ್ರಜಾಪ್ರಭುತ್ವ ನಾಶಗೊಂಡು ಫ್ಯಾಶಿಸ್ಟ್ ಆಡಳಿತ ಜಾರಿಯಾಗುತ್ತದೆ ಎಂದ ಅವರು, ಬಿಎಸ್ಸೆನ್ನೆಲ್ ಬಂದ್ ಮಾಡಿ ಜಿಯೋಗೆ ಪ್ರಚಾರ ನೀಡಿದವರು ಯಾರು ಎಂದು ಪಾರ್ಲಿಮೆಂಟ್‍ನಲ್ಲಿ ನಳಿನ್ ಟೆಲಿಕಮ್ಯೂನಿಕೇಶನ್ ಮಂತ್ರಿಯನ್ನು ಕೇಳಲಿ ಎಂದರು.

ರಾಜ್ಯ ಸರಕಾರ ಸುಭದ್ರವಾಗಿದೆ. ಬಿಬಿಎಂಪಿಯ ನಾಲ್ಕು ಕಾರ್ಪೊರೇಟರ್ ಗಳನ್ನು ತರಿಸಲಾಗದವರು ಸರಕಾರ ಉರುಳಿಸುತ್ತಾರೆ ಎಂದ ಅವರು, ಬಿಜೆಪಿ ಟೆಸ್ಟ್ ಮ್ಯಾಚ್ ಆಡಲಿ, ನಾವು ಒನ್ ಡೇ ಮ್ಯಾಚ್ ಆಡುತ್ತೇವೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮಾತನಾಡಿ, ಸಮ್ಮಿಶ್ರ ಸರಕಾರ ಸುಭದ್ರವಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ. ನಮ್ಮ ಸರಕಾರ 5 ವರ್ಷ ಆಡಳಿತ ನಡೆಸಲಿದೆ ಎಂದ ಅವರು, ಬಿಜೆಪಿ ವಿರುದ್ಧ ಟೀಕಾಪ್ರಹಾರ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸವಿತಾ ರಮೇಶ್ ಮಾತನಾಡಿ, ಬಿಜೆಪಿ ರಸ್ತೆಯಲ್ಲಿ ಪ್ರಾಣ ಕಳೆದುಕೊಳ್ಳುವ ಜನರ ಅಭಿವೃದ್ಧಿ ಮಾಡಲಿಲ್ಲ. ಬಡವರಿಗೆ ನಳಿನ್ ಅವರ ಕಾಳಜಿ ಇಲ್ಲ. ಜನರ ಮನಸ್ಸು ಕೆಡಿಸಲು ಅವರು ಮುಂದಾಗುತ್ತಿದ್ದಾರೆ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಐಸಿಸಿ ಸದಸ್ಯ ಅಮೃತ್ ಶೆಣೈ, ಮಾಜಿ ಶಾಸಕ ಮೊಯ್ದಿನ್ ಬಾವ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ಮೇಯರ್ ಭಾಸ್ಕರ್ ಕೆ., ಕೆಪಿಸಿಸಿ ಸದಸ್ಯ ಡಾ. ರಘು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಬಿ.ಎಚ್.ಖಾದರ್, ಇಬ್ರಾಹಿಂ ಕೋಡಿಜಾಲ್, ಕಣಚೂರು ಮೋಣು, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಶಾಹುಲ್ ಹಮೀದ್, ಅನಿತಾ ಹೇಮನಾಥ ಶೆಟ್ಟಿ, ಪದ್ಮಶೇಖರ ಜೈನ್, ಮಂಜುಳಾ ಮಾಧವ ಮಾವೆ, ಎಂ.ಎಸ್.ಮುಹಮ್ಮದ್, ಮಮತಾಗಟ್ಟಿ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮುಹಮ್ಮದ್ ಬಡಗನ್ನೂರು ಹಾಗೂ ಬ್ಲಾಕ್ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿದರು. ಕೊಡಾಜೆ ಬಾಲಕೃಷ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X