ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಜ. 16: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದಿನಿಂದ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.
ಬುಧವಾರ ಇಲ್ಲಿನ ಕೆಪಿಸಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಮುಂದಿನ ವರ್ಷದ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.
ಸಭೆಗಳಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಆರ್ಥಿಕ ಇಲಾಖೆ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ಸಿಎಂ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Next Story