Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ವ್ಯಾಪ್ತಿಯ ಅಂತಿಮ ಮತದಾರರ...

ಬಿಬಿಎಂಪಿ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ16 Jan 2019 10:07 PM IST
share
ಬಿಬಿಎಂಪಿ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ಜ.16: ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆರಂಭವಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಘೋಷಿಸಿದ್ದಾರೆ.

ಬುಧವಾರ ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಅಕ್ಟೋಬರ್ 10 ರಂದು ಪ್ರಕಟಿಸಿದ್ದ ಪರಿಷ್ಕೃತ ಕರಡು ಮತದಾರರ ಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮವಾದ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ 46,32,900 ಪುರುಷರು, 42,48,166 ಮಹಿಳೆಯರು ಸೇರಿದಂತೆ ಒಟ್ಟು 88,81,066 ಮತದಾರರು ನಗರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ಅರ್ಹತೆಯುಳ್ಳವರಾಗಿದ್ದಾರೆ. ಬುಧವಾರ ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 67,020 ಮತದಾರರಿದ್ದಾರೆ. 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು 13,85,024 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಪಟ್ಟಿಯಿಂದ ಹೊರಕ್ಕೆ: ರಾಜರಾಜೇಶ್ವರಿ ನಗರ, ಯಶವಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ನಕಲಿ ಮತದಾರರು ಪಟ್ಟಿಯಲ್ಲಿದ್ದಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ರಾಜರಾಜೇಶ್ವರಿ ನಗರದಲ್ಲಿ ಅತಿ ಹೆಚ್ಚು(14,880) ಮತದಾರರನ್ನು ಕೈ ಬಿಡಲಾಗಿದೆ. ಇನ್ನುಳಿದಂತೆ ಯಶವಂತಪುರದಲ್ಲಿ 12,798, ಮಹದೇವಪುರದಲ್ಲಿ 12,537 ಹಾಗೂ ದಾಸರಹಳ್ಳಿಯಲ್ಲಿ 10,596 ಸೇರಿದಂತೆ ನಗರ ಜಿಲ್ಲಾ ವ್ಯಾಪ್ತಿಯಲ್ಲಿ 1,75,183 ಮತದಾರರನ್ನು ಕೈ ಬಿಡಲಾಗಿದೆ ಎಂದು ಅವರು ತಿಳಿಸಿದರು.

8,514 ಮತಗಟ್ಟೆಗಳು: ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಥಾಪಿಸಿದ್ದ 8,287 ಮತಗಟ್ಟೆಗಳನ್ನು ವಿಸ್ತರಿಸಿದ್ದು, ಮುಂದಿನ ಚುನಾವಣೆಗೆ 8,514 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನುಳಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮತದಾನ ಯಂತ್ರ ಹಾಗೂ ವಿವಿ ಪ್ಯಾಟ್‌ಗಳ ಪರಿಶೀಲನೆ ಕಾರ್ಯ ಮುಗಿದಿದೆ. ಬೆಂಗಳೂರು ಉತ್ತರ ಹಾಗೂ ಸೆಂಟ್ರಲ್ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಮತದಾನ ಯಂತ್ರ ಹಾಗೂ ವಿವಿ ಪ್ಯಾಟ್‌ಗಳ ಪರಿಶೀಲನೆ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿವಾದಕ್ಕೀಡಾಗಿದ್ದ ರಾಜರಾಜೇಶ್ವರಿ ನಗರ, ಗೋವಿಂದರಾಜನಗರ, ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾನ ಯಂತ್ರಗಳನ್ನು ಈ ಚುನಾವಣೆಯಲ್ಲಿ ಬಳಕೆ ಮಾಡುತ್ತಿಲ್ಲ. ಬದಲಿಗೆ ಬೇರೆ ಕಡೆಯಿಂದ ತರಲಾಗುವುದು ಎಂದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತಿ ಭಾಗ ಸಂಖ್ಯೆಗೆ ಒಬ್ಬ ಮತಗಟ್ಟೆ ಅಧಿಕಾರಿಯಂತೆ ಒಟ್ಟು 8,514 ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರ ಸಂಪೂರ್ಣ ವಿವರವನ್ನು www.ceokarnataka.kar.nic.in ನಲ್ಲಿ ಹಾಗೂ ECI portal ನಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅಳವಡಿಸಲಾಗಿದೆ. ಅಲ್ಲದೆ, ಮತದಾರರು ಈ ವೆಬ್‌ಸೈಟ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ತಪ್ಪುಗಳಿದ್ದರೆ ಸಂಬಂಧಿಸಿದ ಬಿಎಲ್‌ಒಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಮತಗಟ್ಟೆ ಮಟ್ಟದ ಏಜೆಂಟ್‌ರನ್ನು ನೇಮಕ ಮಾಡಿ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದ್ದರೂ, ಇದುವರೆಗೂ ಯಾವ ರಾಜಕೀಯ ಪಕ್ಷದಿಂದ ಯಾವುದೇ ಮಾಹಿತಿ ಸ್ವೀಕೃತವಾಗಿಲ್ಲ. ಹೀಗಾಗಿ, ಅರ್ಹ ನಾಗರಿಕರು ಮತದಾರರಾಗಿ ಸೇರ್ಪಡೆಯಾಗಿ ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸುವಂತಾಗಲು ಪ್ರತಿ ಮತಗಟ್ಟೆಗೆ ಒಬ್ಬ ಏಜೆಂಟ್ ನೇಮಕ ಮಾಡಲು ಮುಂದಾಗಬೇಕು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿದರು.

ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ ಅರ್ಹರು ಪಟ್ಟಿಗೆ ಸೇರ್ಪಡೆಯಾಗಲು ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ನಾಮಪತ್ರ ಸಲ್ಲಿಸುವ 10 ಹಿಂದಿನ ದಿನದವರೆಗೂ ಅವಕಾಶವಿರುತ್ತದೆ. ಹೀಗಾಗಿ, ಎಲ್ಲರೂ ಮತದಾನ ಪಟ್ಟಿಗೆ ಸೇರ್ಪಡೆಯಾಗುವ ಮೂಲಕ ಮತದಾನದಲ್ಲಿ ಪಾಲ್ಗೊಳ್ಳಬೇಕು.

-ಮಂಜುನಾಥ್ ಪ್ರಸಾದ್, ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X