Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಜ. 26ರಂದು ಎಸ್ಕೆಎಸ್ಸೆಫ್ ವತಿಯಿಂದ...

ಕಡಬ: ಜ. 26ರಂದು ಎಸ್ಕೆಎಸ್ಸೆಫ್ ವತಿಯಿಂದ ಜಿಲ್ಲಾ ಮಟ್ಟದ ಮಾನವ ಸರಪಳಿ, ಬೃಹತ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ16 Jan 2019 11:19 PM IST
share

ಕಡಬ, ಜ.16. ರಾಷ್ಟ್ರ ರಕ್ಷಣೆ ಹಾಗೂ ಸೌಹಾರ್ದತೆಯ ಸಂಕಲ್ಪದೊಂದಿಗೆ ದೇಶಾದ್ಯಂತ ಕಾರ್ಯಾಚರಿಸುತ್ತಿರುವ ಎಸ್ಕೆಎಸ್ಸೆಫ್ ವತಿಯಿಂದ ಜಿಲ್ಲಾ ಮಟ್ಟದ ಮಾನವ ಸರಪಳಿ ಹಾಗೂ ಬೃಹತ್ ಸಮಾವೇಶವು ಜ. 26 ರಂದು ಕಡಬದ ಕಳಾರ ಶಂಸುಲ್ ಉಲಮಾ ನಗರದಲ್ಲಿ ನಡೆಯಲಿದೆ ಎಂದು ಎಸ್ಕೆಎಸ್ಸೆಫ್ ಜಿಲ್ಲಾಧ್ಯಕ್ಷ ಕಾಸೀಂ ದಾರಿಮಿ ಹೇಳಿದರು.

ಅವರು ಬುಧವಾರದಂದು ಕಡಬದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜ.26ರಂದು ದೇಶಾದ್ಯಂತ 200 ಜಿಲ್ಲೆಗಳಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಾಗೂ ಸೌಹಾರ್ದ ಸಮಾವೇಶ ನಡೆಯಲಿದೆ. ಕಡಬದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ದ.ಕ. ಜಿಲ್ಲಾಮಟ್ಟದ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದ ಅವರು ರಾಷ್ಟ್ರದ ಸಂವಿಧಾನ ಅಪಾಯದಲ್ಲಿರುವ ಇಂದಿನ ಕಾಲಘಟ್ಟದಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ರಾಷ್ಟ್ರ ರಕ್ಷಣೆ ಹಾಗೂ ದೇಶಪ್ರೇಮವನ್ನು ಉದ್ದೀಪನೆಗೊಳಿಸುವ ಈ ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಕಡಬ ಪೇಟೆಯ ಹಳೆಸ್ಟೇಶನ್‌ನಿಂದ ಕಳಾರ ತನಕ ಮಾನವ ಸರಪಳಿ ನಿರ್ಮಿಸಿ ಬೃಹತ್ ರ್ಯಾಲಿ ನಡೆಯಲಿದೆ. ಇದರಲ್ಲಿ ವಿಶೇಷವಾಗಿ ವಿವಿಧ ದಫ್ ಕಮಿಟಿ ವತಿಯಿಂದ ದಫ್ ಪ್ರದರ್ಶನ ನಡೆಯಲಿದೆ. ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿಖಾಯದ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ವಿಶೇಷ ಆಕರ್ಷಣೆಯಾಗಿ ಭಾಗವಹಿಸಲಿದ್ದಾರೆ. ಬೆಳಗ್ಗೆ ಕಾರ್ಯಕ್ರಮ ನಿಮಿತ್ತ ಶಂಸುಲ್ ಉಲಮಾ ನಗರದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಂಜೆ ನಡೆಯುವ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಖ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ ಎಂದರು.

ದ.ಕ.ಜಿಲ್ಲಾ ಉಲಾಮ ಮುಶಾವರ ಇದರ ಅಧ್ಯಕ್ಷರಾದ ಶೈಖುನಾ ಎನ್.ಪಿ.ಎಂ. ಝೈನುಲ್ ಅಬಿದೀನ್ ತಂಙಳ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಗೀವರ್ಗೀಸ್ ಮಾರ್‌ಮಕ್ಕಾರಿಯೋಸ್, ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ದಿನೇಶ್ ಗುಂಡುರಾವ್, ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್, ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಎಸ್ಕೆಎಸ್ಸೆಫ್ ಮುಖಂಡರಾದ ಅಮೀರ್ ತಂಙಳ್, ಇಸ್ಮಾಯಿಲ್ ಯಮಾನಿ, ಸಯ್ಯದ್ ಝುನೈದ್ ಝಫ್ರಿ ತಂಙಳ್ ಆತೂರು, ಸಯ್ಯದ್ ಅನಸ್ ಅಲ್ ಹಾದಿ ತಂಙಳ್ ಗಂಡಿಬಾಗಿಲು, ಕಡಬ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಇಬ್ರಾಹಿಂ ದಾರಿಮಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಎಸ್ಕೆಎಸ್ಸೆಫ್ ಕರ್ನಾಟಕ ರಾಜ್ಯ ಅಧ್ಯಕ್ಷ ಅನೀಸ್ ಕೌಸರಿ, ಕೇರಳದ ವೆಳ್ಳಮುಂಡ ಶೌಖತ್ ಅಲಿ ಸೇರಿದಂತೆ ಹಲವಾರು ಉಮಾರ, ಉಲಾಮ,  ಧರ್ಮಗುರುಗಳು, ಧರ್ಮದರ್ಶಿಗಳು ಪ್ರಭಾಷಣ ಮಾಡಲಿದ್ದಾರೆ ಎಂದು ಎಸ್ಕೆಎಸ್ಸೆಫ್ ದ.ಕ.ಜಿಲ್ಲಾ ಅಧ್ಯಕ್ಷ ಕಾಸಿಂ ದಾರಿಮಿ ಎಂದು ಹೇಳಿದರು. 

ಪತ್ರಿಕಾಗೋಷ್ಠಿಯಲ್ಲಿ ಎಸ್ಕೆಎಸ್ಸೆಫ್ ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ಅಬ್ದುಲ್ ಖಾದರ್, ಕೋಶಾಧಿಕಾರಿ ಸಯ್ಯದ್ ಹಮೀದ್ ತಂಙಳ್, ಮಾನವ ಸರಪಳಿ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಕನ್ವೀನರ್ ಪುತ್ತುಮೋನು ಅನ್ನಡ್ಕ, ಪ್ರಮುಖರಾದ ಟಿ.ಎ.ಮಹಮ್ಮದ್, ಪಿ.ಎ. ಮರ್ದಾಳ, ಇ.ಕೆ.ಅಬ್ದುಲ್ ರಹಿಮಾನ್, ಎ.ಎಸ್.ಶರೀಫ್, ಕೆ.ಪಿ.ಎಂ.ಶರೀಪ್, ಶಫಿಯುಲ್ಲಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X