ಕರ್ನಾಟಕ ಹೈಕೋರ್ಟ್‌ನ ಪ್ರಭಾರ ಮುಖ್ಯ ನ್ಯಾಯಮೂರ್ತಿಯಾಗಿ ಎಲ್. ನಾರಾಯಣ ಸ್ವಾಮಿ ನೇಮಕ

ಹೊಸದಿಲ್ಲಿ, ಜ. 17: ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಕರ್ನಾಟಕದ ಉಚ್ಚ ನ್ಯಾಯಾಲಯದ ಪ್ರಭಾರ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜಿತರಾಗಿದ್ದಾರೆ. ಪ್ರಸ್ತುತ ಇದ್ದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಸುಪ್ರೀಂ ಕೋರ್ಟ್‌ಗೆ ಭಡ್ತಿ ನೀಡಿದ ಹಿನ್ನೆಲೆಯಲ್ಲಿ ಈ ನಿಯೋಜನೆ ನಡೆದಿದೆ. ನ್ಯಾಯಮೂರ್ತಿ ಸ್ವಾಮಿ ಅವರು 1987ರಲ್ಲಿ ವಕೀಲರಾಗಿ ಸೇರಿದ್ದರು. ಅನಂತರ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ನಿರ್ವಹಿಸಿದ್ದರು. 2007 ಜುಲೈಯಲ್ಲಿ ಅವರನ್ನು ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನಿಯೋಜಿಸಲಾಗಿತ್ತು ಹಾಗೂ ಅನಂತರ 2009 ಎಪ್ರಿಲ್‌ನಲ್ಲಿ ಖಾಯಂಗೊಳಿಸಲಾಗಿತ್ತು. ಈಗ ಅವರು ಉಚ್ಚ ನ್ಯಾಯಾಲಯದ ಪ್ರಭಾರ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಶುಕ್ರವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
Next Story





