ರಾಜಸ್ಥಾನ ವಿಧಾನಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿಗೆ ನಿರ್ಣಯ ಅಂಗೀಕರಿಸಲು ಸಚಿವ ಸಂಪುಟದ ನಿರ್ಧಾರ
ಜೈಪುರ,ಜ.18: ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೋರಿ ನಿರ್ಣಯವೊಂದನ್ನು ಅಂಗೀಕರಿಸಲು ರಾಜ್ಯ ಸಂಪುಟವು ತಾತ್ವಿಕವಾಗಿ ನಿರ್ಧರಿಸಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಐದು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈ ನಿರ್ಣಯ ಅಂಗೀಕಾರಗೊಳ್ಳಬೇಕು ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯರು ಬಯಸಿದ್ದಾರೆ ಎಂದರು. ಆದರೆ ಹಾಲಿ ವಿಧಾನಸಭಾ ಅಧಿವೇಶನದಲ್ಲಿಯೇ ಈ ನಿರ್ಣಯವನ್ನು ಅಂಗೀಕರಿಸಲಾಗುವುದೇ ಎನ್ನುವುದನ್ನು ಅವರು ತಿಳಿಸಲಿಲ್ಲ.
ಸಂಸತ್ತಿನಲ್ಲಿ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹೋರಾಟ ನಡೆಸಿದ್ದರು. ಸುದೀರ್ಘ ಹೋರಾಟದ ಬಳಿಕ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದರೂ ರಾಜ್ಯಸಭೆಯಲ್ಲಿ ಬಾಕಿಯಾಗಿದೆ ಎಂದು ಗೆಹ್ಲೋಟ್ ತಿಳಿಸಿದರು.
Next Story