Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಸೀ ವಿಜಿಲ್ ಅಣಕು...

ಉಡುಪಿ ಜಿಲ್ಲೆಯಲ್ಲಿ ಸೀ ವಿಜಿಲ್ ಅಣಕು ಕಾರ್ಯಾಚರಣೆ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ18 Jan 2019 10:10 PM IST
share
ಉಡುಪಿ ಜಿಲ್ಲೆಯಲ್ಲಿ ಸೀ ವಿಜಿಲ್ ಅಣಕು ಕಾರ್ಯಾಚರಣೆ: ಜಿಲ್ಲಾಧಿಕಾರಿ

ಉಡುಪಿ, ಜ.18: ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಭದ್ರತಾ ದೃಷ್ಠಿಯಿಂದ ಪ್ರಸ್ತುತ ಇರುವ ರಕ್ಷಣಾ ಕ್ರಮಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನು ಸ್ವಯಂ ವೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಜನವರಿ 22 ಮತ್ತು 23ರಂದು ಜಿಲ್ಲೆಯಾದ್ಯಂತ ಸೀ ವಿಜಿಲ್ ಅಣಕು ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೀ ವಿಜಿಲ್ ಅಣಕು ಕಾರ್ಯಾಚರಣೆಯ ಪೂರ್ವಭಾವಿ ಸಿದ್ದತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್‌ಗಳು, ದೇವಸ್ಥಾನ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಹಾಗೂ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿ ವ್ಯಾಪಕ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಈ ಸ್ಥಳಗಳಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳು ಅಥವಾ ವಸ್ತುಗಳು ಕಂಡು ಬಂದಲ್ಲಿ ಪೊಲೀಸ್ ಕಂಟ್ರೊಲ್ ರೂಂ 100ಕ್ಕೆ, ಕರಾವಳಿ ಕಾವಲು ಪಡೆ ಕಂಟ್ರೊಲ್ ರೂಂ 1093, ಜಿಲ್ಲಾಧಿಕಾರಿ ಕಂಟ್ರೊಲ್ ರೂಂ 1077ಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ ಯಾವುದೆ ಲೋಪವಾಗದಂತೆ ಕಾರ್ಯ ನಿರ್ಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಾಹನಗಳ ವ್ಯಾಪಕ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ದೋಣಿಗಳಲ್ಲಿ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆ ಪತ್ರಗಳನ್ನು ಇಟ್ಟುಕೊಳ್ಳುವಂತೆ ಹಾಗೂ ಸಮುದ್ರದಲ್ಲಿ ಅಪರಿಚಿತ ದೋಣಿಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮೀನುಗಾರರ ಮುಖಂಡರಿಗೆ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ, ಮೀನುಗಾರರು ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅಣುಕು ಕಾರ್ಯಾಚರಣೆ ಸಂದರ್ಭದಲ್ಲಿ ಮಾತ್ರವಲ್ಲದೇ ಸದಾ ಕಾಲ ಪಾಲಿಸುವುದು ದ್ರತೆಯ ದೃಷ್ಠಿಯಿಂದ ಅವಶ್ಯಕ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X