Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗನಕಾಯಿಲೆ: ಪರಿಸ್ಥಿತಿ ನಿಭಾಯಿಸಲು...

ಮಂಗನಕಾಯಿಲೆ: ಪರಿಸ್ಥಿತಿ ನಿಭಾಯಿಸಲು ಸಮಿತಿ ರಚನೆ; ದ.ಕ. ಡಿಸಿ

ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ ಮಾಹಿತಿ ರವಾನಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Jan 2019 10:30 PM IST
share
ಮಂಗನಕಾಯಿಲೆ: ಪರಿಸ್ಥಿತಿ ನಿಭಾಯಿಸಲು ಸಮಿತಿ ರಚನೆ; ದ.ಕ. ಡಿಸಿ

ಮಂಗಳೂರು, ಜ.18: ನೆರೆ ಜಿಲ್ಲೆಗಳಲ್ಲಿ ಮಂಗನಕಾಯಿಲೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿ ಮತ್ತು ಅರಣ್ಯದಂಚಿನಲ್ಲಿ ಈಗಾಗಲೇ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದ್ದು, ಇನ್ನಷ್ಟು ಪರಿಣಾಮಕಾರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸಲು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಕಾರ್ಯ ನಿರ್ವಹಣಾಧಿಕಾರಿ, ವಲಯ ಅರಣ್ಯಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದರು.

ನಗರದ ಜಿಪಂನ ವೀಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮುಂಜಾಗ್ರತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಿರಂತರವಾಗಿ ಪರಿಸ್ಥಿತಿಯ ಮೇಲೆ ಕಣ್ಣಿರಿಸಲು ಸಮಿತಿ ರಚನೆ ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳ ವಾಟ್ಸ್‌ಆ್ಯಪ್ ಗ್ರೂಪ್ ರಚಿಸಿ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ವರದಿ ಮಾಡಲು ಆದೇಶಿಸಿದರು. ಮಂಗಗಳ ದೇಹಗಳಲ್ಲಿರುವ ಉಣ್ಣೆಗಳಿಂದ ರೋಗ ಹರಡುತ್ತಿರುವುದರಿಂದ ಉಣ್ಣೆಗಳಿರುವ ಪ್ರದೇಶಗಳ ಗುರುತಿಸುವಿಕೆ ಹಾಗೂ ಮಂಗಗಳು ಮೃತಪಟ್ಟರೆ ಗುರುತಿಸಿ ವರದಿ ಮಾಡುವಿಕೆಗೆ ಆದ್ಯತೆ ನೀಡಬೇಕು. ಈ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಲ್ಲಿ ಅರಿವು ಮೂಡಿಸಲು ಪ್ರಮುಖ ಮಾಹಿತಿಯನ್ನೊಳಗೊಂಡ ನಾಲ್ಕು ಸಾಲಿನ ಮಾಹಿತಿ ಪತ್ರಗಳನ್ನು ವಿತರಿಸಿ ಎಂದ ಜಿಲ್ಲಾಧಿಕಾರಿ, ಮುಂಜಾಗ್ರತೆಗೆ ‘ಡಿಎಂಪಿ’ ಎಣ್ಣೆಯನ್ನು ತರಿಸಿ ಅರಣ್ಯದಂಚಿನಲ್ಲಿರುವವರಿಗೆ ವಿತರಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾಯಿಲೆಯ ಚರಿತ್ರೆಯ ಬಗ್ಗೆ ಇದೇ ವೇಳೆ ಅವರು ಮಾಹಿತಿಯನ್ನು ಆರೋಗ್ಯ ಇಲಾಖಾ ವೈದ್ಯರಿಂದ ಪಡೆದುಕೊಂಡರು. ಅರಣ್ಯ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾಕ್ಟರ್‌ಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸುವ ಜೊತೆಗೆ ಜಿಲ್ಲೆಯಲ್ಲಿ ಹೆಚ್ಚಿನ ಜನರು ಜ್ವರ ಬಂದ ವೇಳೆ ಖಾಸಗಿ ಡಾಕ್ಟರ್‌ಗಳ ಬಳಿ ತೆರಳುವುದು ಸಾಮಾನ್ಯ. ಈ ವೇಳೆ ಮಂಗನ ಕಾಯಿಲೆ ಲಕ್ಷಣಗಳು ವರದಿಯಾದರೆ ಖಾಸಗಿ ಡಾಕ್ಟರ್‌ಗಳು ತಕ್ಷಣವೇ ಡಿಎಚ್‌ಒ ಅವರಿಗೆ ವರದಿ ಮಾಡತಕ್ಕದ್ದು ಎಂದರು.

ಮುಂಜಾಗ್ರತೆ, ಮುನ್ನೆಚ್ಚರಿಕೆ, ಅರಿವು ಕಾರ್ಯಕ್ರಮ ಹಾಗೂ ಅಗತ್ಯ ಮದ್ದುಗಳನ್ನು ಶೇಖರಿಸಿಟ್ಟುಕೊಂಡು ಪರಿಸ್ಥಿತಿ ನಿಯಂತ್ರಿಸಿ ಎಂದು ವೈದ್ಯಾಧಿಕಾರಿಗಳಿಗೆ ಹೇಳಿದರು. ಮಂಗನ ಕಾಯಿಲೆಗೆ ಕಾರಣವಾಗುವ ಹೀಮೋಫೈಸಾಲಿಸ್ ಸ್ಪಿನಿಜೆರಾ ವೈರಸ್ ಸಾಮಾನ್ಯವಾಗಿ ನವೆಂಬರ್‌ನ ಚಳಿಗಾಲ ದಲ್ಲಿ ಆರಂಭವಾಗಿ ಫೆಬ್ರವರಿಯವರೆಗೆ ಪ್ರಭಲವಾಗಿರುತ್ತದೆ ಎಂದು ಡಾ ಅರುಣ್ ವಿವರಿಸಿದರು. ಉಣ್ಣೆಗಳು ಹರಡದಂತೆ ಮಲಥಿಯಾನ್ ಎಂಬ ದ್ರಾವಣ ಸಿಂಪಡಿಸುವುದರಿಂದ ಅರಣ್ಯದಂಚುಗಳು ಸುರಕ್ಷಿತವಾಗಲಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸಿಇಒ ಡಾ ಸೆಲ್ವಮಣಿ, ಡಿಎಚ್‌ಒ ರಾಮಕೃಷ್ಣ ರಾವ್, ವಲಯ ಅರಣ್ಯಅಧಿಕಾರಿ ಶ್ರೀಧರ್ ಕೆಎಂಸಿ, ಯೆನಪೋಯ, ಫಾದರ್‌ಮುಲ್ಲರ್ಸ್‌ನ ವೈದ್ಯರು, ತಾಲೂಕು ಆರೋಗ್ಯಾಧಿಕಾರಿಗಳು, ಕೀಟಶಾಸ್ತ್ರಜ್ಞರು, ಡ್ರಗ್ ಕಂಟ್ರೋಲರ್ ಮತ್ತಿತರರಿದ್ದರು.

ಉಣ್ಣೆಗಳಿಂದ ಮಾತ್ರ ಹರಡುವ ಈ ಕಾಯಿಲೆ ಬಗ್ಗೆ ಜನರು ಗಾಬರಿಗೊಳಗಾಗದೆ ಆರೋಗ್ಯ ಇಲಾಖೆಯ ಸೂಚನೆಯಂತೆ ಸುರಕ್ಷಾ ಕ್ರಮಗಳನ್ನು ವಹಿಸುವುದರಿಂದ ಪರಿಸ್ಥಿತಿ ಕೈಮೀರದಂತೆ ನಿಭಾಯಿಸಲು ಸಾಧ್ಯವಿದೆ.
- ಸಸಿಕಾಂತ್ ಸೆಂಥಿಲ್, ದ.ಕ. ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X