ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ: ದೂರು
ಬೆಂಗಳೂರು, ಜ.18: ಖಾಸಗಿ ಕಂಪೆನಿ ವ್ಯವಸ್ಥಾಪಕನೋರ್ವ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳಾ ಉದ್ಯೋಗಿಯೊಬ್ಬರು ಇಲ್ಲಿನ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಗರದ ಕೋರಮಂಗಲ ಬಳಿಯ ಖಾಸಗಿ ಕಂಪೆನಿಯ ವ್ಯವಸ್ಥಾಪಕ ತಬ್ರೇಝ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
ಆಂಧ್ರ ಮೂಲದ ಯುವತಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕಳೆದ ಮೂರು ತಿಂಗಳಿನಿಂದ ತಬ್ರೇಝ್ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಐಪಿಸಿ 354(ಅ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story