Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ದಸಂಸ ವತಿಯಿಂದ ವಿಚಾರ ಸಂಕಿರಣ,...

ಮಂಡ್ಯ: ದಸಂಸ ವತಿಯಿಂದ ವಿಚಾರ ಸಂಕಿರಣ, ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ19 Jan 2019 9:08 PM IST
share
ಮಂಡ್ಯ: ದಸಂಸ ವತಿಯಿಂದ ವಿಚಾರ ಸಂಕಿರಣ, ಅಭಿನಂದನಾ ಸಮಾರಂಭ

ಮಂಡ್ಯ, ಜ. 19: ರಾಜ್ಯದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೋಮುವಾದದ ಶಕ್ತಿ ಹಿಮ್ಮೆಟ್ಟಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ದಸಂಸ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಅನಿವಾರ್ಯ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಕೆಲಸ ಮಾಡಿದ ಸಂದರ್ಭದಲ್ಲಿಯೂ 20 ತಿಂಗಳು ಯಶಸ್ವಿಯಾಗಿ ಸರ್ಕಾರ ನಡೆಸಿದ್ದಾರೆ. ಇಂದು ಸಹ ಯಾವುದೇ ಕಾರಣಕ್ಕೂ ಕೋಮುವಾದಿ ಗಳ ಕೈವಾಡ ಸಮಾಜದ ದಿಕ್ಕು ತಪ್ಪಿಸಲು ಬಿಡುವುದಿಲ್ಲ ಎಂದು ಹೇಳಿದರು.

ಕೋಮುವಾದಿಯ ಮುಖವಾಡ ಧರಿಸಿ, ಇಡೀ ರಾಷ್ಟ್ರದಲ್ಲಿ ಅನೇಕ ರೀತಿಯ ಸಮಾಜಘಾತುಕ ಶಕ್ತಿಗಳಾಗಿ ಯಾವ ಯಾವ ರೀತಿಯ ಕೋಮುವಾದದ ಅಡಿಯಲ್ಲಿ ರಾಷ್ಟ್ರವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂಬುದನ್ನು ಜನತೆ ಅರಿಯಬೇಕು ಎಂದರು.

ಶ್ರೀನಿವಾಸ್ ಅವರು ಮೇನಾಗರ ಗ್ರಾಮದಲ್ಲಿ ಹುಟ್ಟಿ, ಜಿಲ್ಲೆ ಹಾಗೂ ರಾಜ್ಯದಲ್ಲಿ ತುಳಿತಕ್ಕೆ ಒಳಗಾದ ಸಮುದಾಯದ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಮತ್ತು ತಂಡ ಈ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಂ.ಬಿ.ಶ್ರೀನಿವಾಸ್ ಅವರಿಗೆ ಅಭಿನಂದಿಸುವ ಕಾರ್ಯ ಶ್ಲಾಘನೀಯವಾದುದು. ಅವರಿಗೆ ಗೌರವ ಡಾಕ್ಟರೇಟ್ ದೊರಕಿರುವುದು ಜಿಲ್ಲೆಯ ಜನತೆಗೆ ಗೌರವ ದೊರಕಿದಂತಾಗಿದೆ ಎಂದು ಹೇಳಿದರು.

ಜಿಲ್ಲೆಯ 7 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲು ಶ್ರೀನಿವಾಸ್ ಮತ್ತು ಅವರ ಸಂಘಟನೆ ಶ್ರಮವೂ ಅಡಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಶಾಸಕ ಎಂ.ಶ್ರೀನಿವಾಸ್, ಕಾಂಗ್ರೆಸ್‍ನ ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅವರೊಂದಿಗೆ ನಾನು ಜವಾಬ್ದಾರಿಯಿಂದ ಪ್ರಾಮಾಣಿಕವಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಗೌರವ ಡಾಕ್ಟರೇಟ್‍ಗೆ ಭಾಜನರಾಗಿರುವ ಎಂ.ಬಿ.ಶ್ರೀನಿವಾಸ್ ಅವರನ್ನು ಅಭಿನಂದಿಸಲಾಯಿತು.  ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ.ತುಕಾರಾಂ ವಿಷಯ ಮಂಡನೆ ಮಾಡಿದರು. ದಸಂಸ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ್ ಅಧ್ಯಕ್ಷತೆ ವಹಿಸಿದ್ದರು.

ಜಿಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ ರೇವಣ್ಣ, ಶಾಸಕ ಎಂ.ಶ್ರೀನಿವಾಸ್, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಸಾತನೂರು ಜಯರಾಂ, ಭದ್ರಚಲಮೂರ್ತಿ, ಚಿಕ್ಕಹಲಗಯ್ಯ, ಮಹೇಶ್, ಸೋಮಶೇಖರ್ ಮತ್ತಿತರರು ಭಾಗವಹಿಸಿದ್ದರು.

ರಾಜ್ಯ ಸಂಪನ್ಮೂಲ ಕೇಂದ್ರದ ನಿದೇಶಕ ಡಾ.ಎಸ್.ತುಕಾರಾಂ ಮಾತನಾಡಿ, ನಾನು, ನನ್ನದು, ನನ್ನ ಮಾತೇ ನಡೆಯಬೇಕು ಎನ್ನುವ ಫ್ಯಾಸಿಸ್ಟ್ ಮನೋಭಾವದವರು ಅಧಿಕಾರದಲ್ಲಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಗಂಡಾಂತರ ತಂದಿದ್ದು, ಫ್ಯಾಸಿಸಂ ತಡೆಯದಿದ್ದರೆ ಭವಿಷ್ಯದಲ್ಲಿ ಭಾರತಕ್ಕೆ ದೊಡ್ಡ ಅನಾಹುತ ಕಾದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ವಿಷಯ ಮಂಡಿಸಿ ಮಾತನಾಡಿದ ಅವರು, ಇಂದು ಮಾತುಗಳು ಸೋತು ಹೋಗುತ್ತಿವೆ. ನೈತಿಕತೆ ಸತ್ತು ಹೋಗಿ ಒಳ ಮತ್ತು ಹೊರ ಬದುಕಿನಲ್ಲಿ ವ್ಯತ್ಯಾಸವಾಗಿದೆ. ಗಾಂಧಿ ಮತ್ತು ಅಂಬೇಡ್ಕರ್ ಒಳ ಮತ್ತು ಹೊರ ಬದುಕಿನಲ್ಲಿ ತಾವು ಆಡಿದ ಮಾತಿನಂತೆ ನಡೆದುಕೊಂಡರು. ಹಾಗಾಗಿ ಇಂದಿಗೂ ಕೂಡ ಅವರು ಸೋತಿಲ್ಲ. ಆದರೆ ಇಂದು ಕೆಲವರು ಮಾತಿಗೂ ಕೃತಿಗೂ ವ್ಯತ್ಯಾಸವಿಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಅವರು ಮಾತುಗಳು ಸೋತು ಹೋಗಿದೆ ಎಂದು ಪ್ರಸ್ತುತ ಸಮಾಜದಲ್ಲಿರುವ ವ್ಯಕ್ತಿಗಳ ಢಾಂಬಿಕತೆ ಬಗ್ಗೆ ವಿವರಿಸಿದರು.

ನನ್ನದೇ ಮಾತು ನಡೆಯಬೇಕು. ನಾನಿಲ್ಲದೆ ಏನೂ ಇಲ್ಲ ಎನ್ನುವ ಫ್ಯಾಸಿಸ್ಟ್ ಮನೋಧರ್ಮದವರು ಸಮಾಜದಲ್ಲಿ ಭೀತಿಯನ್ನು ತಂದಿದ್ದಾರೆ. ಭಾರತ ದೇಶ ಹಲವು ಸಂಪ್ರದಾಯಗಳ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ಮನುಷ್ಯನ ರೂಪ, ಬಣ್ಣ, ಆಕಾರ, ಉಡುಪುಗಳಲ್ಲಿ ವ್ಯತ್ಯಾಸವಿರುವುದು ಪ್ರಕೃತಿಯ ನಿರ್ಧಾರ. ಆದರೆ ಅದನ್ನು ಒಪ್ಪಿಕೊಳ್ಳುವ ಶಿಕ್ಷಣ ನಮ್ಮಲ್ಲಿಲ್ಲ. ನಮ್ಮಲ್ಲಿ ಔದಾರ್ಯತೆ ಮಾಯವಾಗಿದೆ. ಏಕವ್ಯಕ್ತಿ ನಿರೀಕ್ಷೆಗೆ ತಕ್ಕಂತೆ ನಡೆಯಬೇಕೆನ್ನುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ನಿರಕುಂಶ ಪ್ರಭುತ್ವ ಜನ್ಮತಾಳಿದೆ. ಎಲ್ಲವೂ ನಾನೇ. ಎಲ್ಲವೂ ನನ್ನಿಂದಲೇ ಎನ್ನುವ ಸಂಕೇತವೇ ಫ್ಯಾಸಿಸ್ಟ್ ಮನೋಭಾವ ಎಂದರು.

ಸಂವಿಧಾನದ ಮೂಲಕ ರೂಪಿಸಿರುವ ಕಾನೂನನ್ನು ಮುರಿಯುತ್ತಿದ್ದಾರೆ. ಸಂವಿಧಾನ ಧಿಕ್ಕರಿಸುವ ಮಾತುಗಳನ್ನಾಡುತ್ತಿದ್ದಾರೆ. ಅಂಬೇಡ್ಕರ್‍ರವರು ಮತ ಹಾಕುವವನ ಮಾತು, ಪಡೆಯುವವನ ಮಾತು ಒಂದೇ ಆಗಿರಬೇಕು ಎಂದಿದ್ದರು. ಹಾಗಾಗಿ ಅವರ ಮಾತು ಇಂದಿಗೂ ಪ್ರಸ್ತುತವಾಗಿದೆ. ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ವಿವೇಕ ಕಳೆದುಕೊಂಡವರು ಫ್ಯಾಸಿಸ್ಟ್ ನಂತೆ ವರ್ತಿಸುತ್ತಿದ್ದಾರೆ. ನಾವೆಲ್ಲ ಇಂದು ಒಂದಾಗಿ ಫ್ಯಾಸಿಸಂ ತಡೆಯದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಎಂದಿಗೂ ಕ್ಷಮಿಸದು ಎಂದರು.

ಬುದ್ಧ, ಗಾಂಧಿ, ಅಂಬೇಡ್ಕರ್ ಹೇಳಿದ ದಾರಿಯಲ್ಲಿ ನಡೆದು ಕೋಮುವಾದಿ ಫ್ಯಾಸಿಸ್ಟ್ ಆಡಳಿತವನ್ನು ಪ್ರಶ್ನಿಸಬೇಕು. ಒಬ್ಬ ಕೋಮುವಾದಿ ಕಂಡಾಗ ಆತನಿಗೆ ಕುವೆಂಪುರವರು ಹೇಳಿದಂತೆ ಭಾರತ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಆತನ ಎದೆಯಾಳಕ್ಕೆ ತಲುಪಿಸುವ ಕೆಲಸ ಮಾಡಬೇಕು. ದ್ವೇಷ ಕಾರುವ ಮನಸ್ಸು ಫ್ಯಾಸಿಸಂ. ಮಹಾತ್ಮಗಾಂಧಿಯನ್ನು ಕೊಂದ ಕ್ಷಣದಿಂದಲೇ ಫ್ಯಾಸಿಸಂ ಬಂತು. ಗಾಂಧಿ ಎಂದರೆ ಸಮಾನತೆಯ ಭಾರತ. ಬಡ ವ್ಯಕ್ತಿ ಕ್ರಿಶ್ಚಿಯನ್, ದಲಿತ, ಮುಸ್ಲೀಂ ಯಾರೂ ಕೂಡ ಯಾರಿಗೂ ಹೆದರಬಾರದು. ಅಂಬೇಡ್ಕರ್, ಗಾಂಧಿ ಹಾದಿಯಲ್ಲಿ ಸಮಾನತೆ ಸಮಾಜ ನಿರ್ಮಾಣ ಮಾಡಲು ಒಗ್ಗೂಡಿ ಹೋರಾಟ ಮಾಡಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X