Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆ ಸರಿಪಡಿಸಿ, ವಿದ್ಯುತ್ ನೀಡಿ;...

ರಸ್ತೆ ಸರಿಪಡಿಸಿ, ವಿದ್ಯುತ್ ನೀಡಿ; ಅಹವಾಲು ಸಭೆಯಲ್ಲಿ ಮಕ್ಕಳ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ21 Jan 2019 10:00 PM IST
share
ರಸ್ತೆ ಸರಿಪಡಿಸಿ, ವಿದ್ಯುತ್ ನೀಡಿ; ಅಹವಾಲು ಸಭೆಯಲ್ಲಿ ಮಕ್ಕಳ ಬೇಡಿಕೆ

ಉಡುಪಿ, ಜ. 21: ನಮ್ಮ ಮನೆಗೆ ವಿದ್ಯುತ್ ಇಲ್ಲ, ಇದರಿಂದ ರಾತ್ರಿ ಓದಲು ಸಮಸ್ಯೆಯಾಗುತ್ತಿದೆ, ಶಾಲೆಗೆ ಬರಲು ಸರಿಯಾದ ರಸ್ತೆಯಿಲ್ಲ, ಮನೆಯ ಬಳಿ ಆಟವಾಡಲು ಮೈದಾನ ಇಲ್ಲ, ಮನೆಯಲ್ಲಿ ಶೌಚಾಲಯ ಇಲ್ಲ

ಮನೆಯಲ್ಲಿ ಶೌಚಾಲಯ ಇಲ್ಲ.... ಇದು ಸೋಮವಾರ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆದ, ಮೂಲಭೂತ ಸೌಕರ್ಯಗಳ ಸಮಸ್ಯೆ ಕುರಿತು ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು ಸಲ್ಲಿಸಿದ ಅಹವಾಲುಗಳು.

ಈ ಎಲ್ಲಾ ಅಹವಾಲುಗಳಿಗೆ ಸೂಕ್ತ ರೀತಿಯಲ್ಲಿ, ಅತ್ಯಂತ ಶೀಘ್ರವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತೆ ಹಾಗೂ ಈ ಬಗ್ಗೆ ಆಯೋಗಕ್ಕೆ ವರದಿಯನ್ನು ನೀಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗದ ಸದಸ್ಯೆ ಡಾ.ವನಿತಾ ತೊರವಿ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳ ಅಹವಾಲು ಸಲ್ಲಿಕೆಯಲ್ಲಿ ಮಣಿಪಾಲ ಎಂಜೆಸಿಯ ವಿದ್ಯಾರ್ಥಿ ಮಣಿಕಂಠ ಮಾತನಾಡಿ, ರಾಹುಲ್ ನಗರದಲ್ಲಿ ವಾಸವಾಗಿರುವ ನನ್ನ ಮನೆ ಯಲ್ಲಿ ಶೌಚಾಲಯ ಇಲ್ಲ. ನಮಗೆ ಶೌಚಾಲಯ ಒದಗಿಸಿಕೊಡಿ ಎಂದು ಮನವಿ ಮಾಡಿದರು. ಈ ಕುರಿತಂತೆ ಬಾಲಕನ ಮನೆಯ ವಿಳಾಸವನ್ನು ಪತ್ತೆ ಮಾಡಿ, ಸರಿಯಾದ ಮಾಹಿತಿಯನ್ನು ನೀಡುವಂತೆ ಮಣಿಪಾಲ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ತಿಳಿಸಿದ ವನಿತಾ ತೊರವಿ, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ನೇತಾಜಿ ನಗರದ 8ನೇ ತರಗತಿ ವಿದ್ಯಾರ್ಥಿ ದೀಪಕ್ ಮಾತನಾಡಿ, ಶಾಲೆಗೆ ಬರುವ ರಸ್ತೆ ಸರಿ ಇಲ್ಲ. ಇದರಿಂದ ಅಪ್ಪನೊಂದಿಗೆ ಬೈಕ್‌ನಲ್ಲಿ ಬರುವಾಗ ಸ್ಕಿಡ್ ಆಗುತ್ತೆ. ಹಲವು ಮಂದಿ ಸಾರ್ವಜನಿಕರು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೇ ಈ ಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲ, ಮನೆ ಬಳಿ ಆಟವಾಡಲು ಮೈದಾನ ಇಲ್ಲ ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಇದು ಬಡಗಬೆಟ್ಟು ಗ್ರಾಪಂ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ವಸತಿ ನಿವೇಶನಕ್ಕೆ ಜಾಗ ಕಾಯ್ದಿರಿಸಲಾಗಿದೆ. ಇಲ್ಲಿ ಯಾವ ಯೋಜನೆಯಡಿ ರಸ್ತೆ ನಿರ್ಮಿಸಲಾ ಗುತ್ತಿದೆ ಎಂಬುದನ್ನು ಪರಿಶೀಲಿಸಿ ಹಾಗೂ ವಸತಿ ನಿವೇಶನ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಟದ ಮೈದಾನಕ್ಕೆ ಜಾಗ ಮೀಸಲಿಡಲು ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದರು.

ಸರಳೇಬೆಟ್ಟು ಸಮೀಪದ ಬಿಜಾಪುರ ಕಾಲೊನಿಯಲ್ಲಿರುವ ನಮ್ಮ ಮನೆಯಲ್ಲಿ ವಿದ್ಯುತ್ ಇಲ್ಲ ಎಂದು ಮಂಜು ಮತ್ತು ರುಕ್ಮಿಣಿ ತಿಳಿಸಿ, ಇದರಿಂದ ನಮ್ಮ ಓದಿಗೆ ಅಡ್ಡಿಯಾಗುತ್ತಿದೆ ಎಂದರು. ವಲಸಿಗರ ಕಾಲೊನಿ ನಿವಾಸಿಗಳಿಗೆ ಸೂಕ್ತ ದಾಖಲೆ ಇಲ್ಲದ ಕಾರಣ ವಿದ್ಯುತ್ ಸಂಪರ್ಕ ನೀಡಲು ಅಡಚಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಈ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ಸೇರಲು ಇಚ್ಛಿಸಿದಲ್ಲಿ ಪೋಷಕರ ಮನ ಒಲಿಸಿ ಹಾಸ್ಟೆಲ್‌ಗೆ ಸೇರ್ಪಡೆ ಮಾಡುವಂತೆ ವನಿತಾ ತೊರವಿ ಹೇಳಿದರು.

ಶಾಲೆಗಳಲ್ಲಿ ಮಕ್ಕಳ ಅನುಪಾತಕ್ಕೆ ತಕ್ಕಂತೆ ಶಿಕ್ಷಕರ ನಿಯೋಜನೆ ಆಗಲಿ, ಹೆಚ್ಚುವರಿ ಶಿಕ್ಷಕರ ಕೊರತೆ ಆಗದಂತೆ ಡಿಡಿಪಿಐ ಕ್ರಮ ವಹಿಸುವಂತೆ ಹಾಗೂ ಯಾವುದೇ ಮಗು ಶಾಲೆಯಿಂದ ಹೊರಗುಳಿದು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತೊರವಿ ತಿಳಿಸಿದರು.

ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಮಣಿಪಾಲದ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ನ ಉಪನ್ಯಾಸಕಿ ಐಡಾ ಡಿಸೋಜ ಉಪನ್ಯಾಸ ನೀಡಿದರು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಸಿಂಧು ಬಿ ರೂಪೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಎನ್ ಗೊನ್ಸಾಲ್ವಿಸ್, ಜಿಲ್ಲಾ ಮಕ್ಕಳಾ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ಬಿ.ಕೆ. ನಾರಾಯಣ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮೋಹನ್ ಉಪಸ್ಥಿತರಿದ್ದರು.

ಉಡುಪಿ ತಾಲೂಕು ಶಿಶು ಅಭಿವೃಧ್ದಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X