Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಕುಮಾರ ಸ್ವಾಮೀಜಿ ನಿಧನ: ತೋಂಟದ...

ಶಿವಕುಮಾರ ಸ್ವಾಮೀಜಿ ನಿಧನ: ತೋಂಟದ ಸಿದ್ಧರಾಮ ಸ್ವಾಮಿ ಸಂತಾಪ

ವಾರ್ತಾಭಾರತಿವಾರ್ತಾಭಾರತಿ21 Jan 2019 10:36 PM IST
share
ಶಿವಕುಮಾರ ಸ್ವಾಮೀಜಿ ನಿಧನ: ತೋಂಟದ ಸಿದ್ಧರಾಮ ಸ್ವಾಮಿ ಸಂತಾಪ

ಬೆಂಗಳೂರು, ಜ. 21: ಸಿದ್ಧಗಂಗಾ ಕ್ಷೇತ್ರದ ಡಾ.ಶಿವಕುಮಾರ ಸ್ವಾಮೀಜಿ ನಮ್ಮ ಮಧ್ಯದಲ್ಲಿ ಬದುಕಿ ಬಾಳಿದ ನಡೆದಾಡುವ ದೇವರು. ಶ್ರೀಮಠದ ಪೀಠಾಧಿಪತಿಗಳಾಗಿ ಸತತ ಎಂಟು ದಶಕಗಳ ಕಾಲ ಈ ನಾಡಿಗೆ ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಗದಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸಂತಾಪ ಸೂಚಿಸಿದ್ದಾರೆ.

ಸ್ವಾತಂತ್ರ್ಯಪೂರ್ವ ಕಾಲದಿಂದಲೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಿ, ಬಡ ಮಕ್ಕಳಿಗೆ ಅನ್ನ-ಆಶ್ರಯ ನೀಡಿ ವಿದ್ಯಾದಾನ ಮಾಡುತ್ತ ಅವರ ಬಾಳನ್ನು ಬೆಳಗಿದವರು. ಅವರು ನಮ್ಮ ದಿನಮಾನದ ಸಂತಶ್ರೇಷ್ಠರು. ಬಸವಾದಿ ಶರಣರ ದಾಸೋಹ ತತ್ವವನ್ನು ಆಧುನಿಕ ದಿನಮಾನದಲ್ಲಿ ಸಾಕಾರಗೊಳಿಸಿದ ಪುಣ್ಯಪುರುಷರು. ಇಂದು ಅವರು ಬಯಲಿನಲ್ಲಿ ಬಯಲಾದುದು ಸಮಸ್ತ ಜನತೆಯನ್ನು ಶೋಕಸಾಗರದಲ್ಲಿ ಮುಳುಗಿಸಿದಂತಾಗಿದೆ. ಒಬ್ಬ ಮಠಾಧಿಪತಿ ಹೇಗಿರಬೇಕು ಎಂಬುದಕ್ಕೆ ಮಾದರಿ ಎನಿಸಿದವರು. ಆಧುನಿಕ ಕಾಲದಲ್ಲಿ ಬಸವಾದಿ ಶರಣರ ದಾಸೋಹ ತತ್ವಕ್ಕೆ ಬಹುದೊಡ್ಡ ನೆಲೆಯನ್ನು ಒದಗಿಸಿದರು. ತಮ್ಮ ಸಾಧನೆ ಸಿದ್ಧಿಗಳ ಮೂಲಕ ಬದುಕಿರುವಾಗಲೇ ಅವರು ದಂತಕತೆಯಾದವರು.

ತ್ರಿವಿಧ ದಾಸೋಹಿ, ಕರ್ನಾಟಕ ರತ್ನಗಳಿಂದ ಭೂಷಿತರಾದ ಶ್ರೀಗಳು ಈ ನಾಡಿಗೆ ತನ್ಮೂಲಕ ನಮ್ಮ ರಾಷ್ಟ್ರಕ್ಕೆ ಕೊಟ್ಟ ಕೊಡುಗೆ ಅಪೂರ್ವವಾದುದು. ಅವರ ಬದುಕು ಸಂಪೂರ್ಣವಾಗಿ ಸಮಾಜಕ್ಕೆ ಸಮರ್ಪಿತವಾದುದು. 112 ವರ್ಷಗಳ ವರೆಗೆ ಕ್ರಿಯಾಶೀಲರಾಗಿ ಬದುಕಿದ ಶ್ರೀಗಳು ತಮ್ಮ ನಡೆ-ನುಡಿ, ಸಾಧನೆ-ಸಿದ್ಧಿಗಳಿಂದ ನಡೆದಾಡುವ ದೇವರೆನಿಸಿದ್ದರು.

ಜಾತಿ-ಮತ-ಧರ್ಮಗಳ ಎಲ್ಲೆಯನ್ನು ಮೀರಿ ಎಲ್ಲರಿಗೂ ಆರಾಧ್ಯರೆನಿಸಿದ್ದರು. ಅವರ ಅಗಲಿಕೆ ನಾಡ ಜನತೆಯನ್ನು ಬಹುಕಾಲ ಬಾಧಿಸದಿರದು. ಪೂಜ್ಯರ ಆದರ್ಶದ ಮಾರ್ಗದಲ್ಲಿ ನಾವು ಮುನ್ನಡೆಯುವುದೇ ನಾವು ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ. ಕೇಂದ್ರ ಸರಕಾರವು ಅವರಿಗೆ ಮರಣೋತ್ತರ ‘ಭಾರತರತ್ನ’ ಪ್ರಶಸ್ತಿಯನ್ನು ನೀಡಿ ಗೌರಸಬೇಕೆಂದು ತೋಂಟದ ಸಿದ್ದರಾಮ ಸ್ವಾಮಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X