Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಅರಣ್ಯ ಭೂಮಿ ಹಕ್ಕುಪತ್ರ...

ದಾವಣಗೆರೆ: ಅರಣ್ಯ ಭೂಮಿ ಹಕ್ಕುಪತ್ರ ನೀಡಲು ಒತ್ತಾಯಿಸಿ ರೈತ ಸಂಘದಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ21 Jan 2019 11:49 PM IST
share
ದಾವಣಗೆರೆ: ಅರಣ್ಯ ಭೂಮಿ ಹಕ್ಕುಪತ್ರ ನೀಡಲು ಒತ್ತಾಯಿಸಿ ರೈತ ಸಂಘದಿಂದ ಧರಣಿ

ದಾವಣಗೆರೆ,ಜ.21: ಅರಣ್ಯಭೂಮಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಯದೇವವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಆಲೂರು, ಗುಡಾಳು, ಮ್ಯಾಸರಹಳ್ಳಿ, ಗುಮ್ಮನೂರು, ನೀರ್ಥಡಿ, ಹುಚ್ಚವ್ವನಹಳ್ಳಿ, ಬಾವಿಹಾಳ, ಕಾಡಜ್ಜಿ, ದಿಂಡದಹಳ್ಳಿ, ಹೆದ್ನೆ, ರಾಂಪುರ ಮತ್ತಿತರೆ ಗ್ರಾಮಗಳಲ್ಲಿ ಸರ್ಕಾರದ ಜಮೀನು ಅರಣ್ಯ ಇಲಾಖೆಯದ್ದೆಂದು ಪಹಣಿಯಲ್ಲಿ ಬರುತ್ತಿದೆ. ಆದರೆ ಅರಣ್ಯ ಹಕ್ಕುಕಾಯ್ದೆ ಅಡಿಯಲ್ಲಿ ಅರ್ಜಿ ವಿಲೇವಾರಿ ಮಾಡುವಾಗ ಅರಣ್ಯ ಇಲಾಖೆ ಅಧಿಕಾರಿಗಳು ಈ ಗ್ರಾಮಗಳ ಜಮೀನು ಅರಣ್ಯ ಇಲಾಖೆಗೆ ಸೇರುವುದಿಲ್ಲ ಎಂದು ಹೇಳುತ್ತಿದ್ದಾರೆ ಹಾಗೂ ಹರಿಹರ ತಾಲೂಕಿನ ಕೊಕ್ಕನೂರು, ಜಿ.ಟಿ.ಕಟ್ಟೆ ಗ್ರಾಮದಲ್ಲಿ ಸಾಗುವಳಿ ಮಾಡಿರುವ ಜಮೀನು ಸಹ ಅರಣ್ಯ ಇಲಾಖೆಗೆ ಸೇರಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸುತ್ತಿದ್ದಾರೆ. ಜಿಲ್ಲೆಯ ಕಂದಾಯ ಇಲಾಖೆಯ ಜಮೀನು 2000 ಅಥವಾ 2004 ರ ಇಸವಿಯಿಂದ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರ ಅರ್ಜಿ ಪರಿಶೀಲನೆ ಮಾಡುವಾಗ ಯಾವ ವರ್ಷದ ದಾಖಲೆ ಆಧಾರದ ಮೇಲೆ ಭೂಮಿ ಮಂಜೂರು ಮಾಡುತ್ತಿದೆ ಎಂಬುದನ್ನು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಖಾಸಗಿ ಬ್ಯಾಂಕ್ ಗಳು ಗ್ರಾಮೀಣ ಭಾಗದ ರೈತರಿಗೆ ಟ್ರ್ಯಾಕ್ಟರ್ ಸಾಲ ಹೆಚ್ಚಾಗಿ ನೀಡುತ್ತಿದೆ. ಆದರೆ ವಸೂಲಾತಿಯಲ್ಲಿ ಮಾತ್ರ ಬಲವಂತವಾಗಿ ಅತಿಹೆಚ್ಚಿನ ಬಡ್ಡಿ ಮತ್ತು ವಿಪರೀತ ದಂಡ ವಿಧಿಸುತ್ತಿದ್ದಾರೆ. ಇದು ಖಂಡನೀಯ. ಈ ರೀತಿ ರೈತರನ್ನು ಶೋಷಿಸುವ ಬ್ಯಾಂಕ್ ಗಳ ಮೇಲೆ ಸರ್ಕಾರ ಕ್ರಮಕೈಗೊಂಡು ರೈತರ ಪ್ರಾಣ ಮತ್ತು ಆಸ್ತಿಯನ್ನು ಉಳಿಸಬೇಕೆಂದು ಒತ್ತಾಯಿಸಿದರು.

ಹುಚ್ಚವ್ವನಹಳ್ಳಿ ಮಂಜುನಾಥ್, ಅರಸನಾಳು ಸಿದ್ದಪ್ಪ, ಗೌಡ್ರಶೇಖರಪ್ಪ, ಬಸವರಾಜ್, ಚಿರಂಜೀವಿ ಪರಮೇಶ್, ರವಿಕುಮಾರು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X