Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಿದ್ದಗಂಗಾ ಶ್ರೀಗಳ ಸಾಧನೆ, ವೆಶಿಷ್ಟಗಳು

ಸಿದ್ದಗಂಗಾ ಶ್ರೀಗಳ ಸಾಧನೆ, ವೆಶಿಷ್ಟಗಳು

ವಾರ್ತಾಭಾರತಿವಾರ್ತಾಭಾರತಿ22 Jan 2019 5:08 PM IST
share
ಸಿದ್ದಗಂಗಾ ಶ್ರೀಗಳ ಸಾಧನೆ, ವೆಶಿಷ್ಟಗಳು

ಮಹಾ ಶರಣ, ಕಾಯಕ ಯೋಗಿ ಸಿದ್ದಗಂಗಾ ಡಾ. ಶಿವಕುಮಾರ ಶ್ರೀಗಳು ಇಂದು ನಿಧನರಾಗಿದ್ದಾರೆ. ಆದರೆ ಅವರ ಕೆಲಸ, ಅವರ ಪ್ರವಚನಗಳು ಈಗಲೂ ನಮ್ಮ ಕಣ್ಣ ಮುಂದಿದೆ. ಹೀಗಾಗಿ ಶ್ರೀಗಳ 111 ಸಾಧನೆ, ವೈಶಿಷ್ಟ್ಯಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

1937:1917ರಲ್ಲಿ ಪ್ರಾರಂಭವಾದ ಸಂಸ್ಕೃತ ಪಾಠ ಶಾಲೆಯನ್ನು ಕಾಲೇಜಾಗಿ ಪರಿವರ್ತಿಸಿದರು.

1944: ತುಮಕೂರು ನಗರದಲ್ಲಿ ಸಿದ್ದಗಂಗಾ ಪ್ರೌಢ ಶಾಲೆ ಆರಂಭ.

1949: ಜೂ.18ರಂದು ಶ್ರೀಸಿದ್ದಲಿಂಗೇಶ್ವರರ ಸಂಸ್ಕೃತ ಮತ್ತು ವೇದಪಾಠ ಶಾಲೆ ರಜತಮಹೋತ್ಸವ.

1950: ಧರ್ಮಸ್ಥಳದ ಶ್ರೀಮಂಜಯ್ಯ ಹೆಗ್ಗಡೆಯವರಿಂದ ಮಹಾ ನಡಾವಳಿ ಉತ್ಸವದಲ್ಲಿ ಗೌರವ ಸ್ವೀಕಾರ.

1951: ಶ್ರೀಗಳಿಂದ ಪ್ರಭುಲಿಂಗ ಲೀಲೆ ಪ್ರವಚನ ಪ್ರಭುಲಿಂಗ ಲೀಲೆಯ ತತ್ವಸಾರಾಂಶಗಳನ್ನು ಪ್ರಚಾರ ಪಡಿಸಿದ ಮೊದಲ ಹೆಜ್ಜೆ.

1954: ಶ್ರೀಕ್ಷೇತ್ರದ ಹಳೆಯ ವಿದ್ಯಾರ್ಥಿಗಳ ಸಂಘ ಸ್ಥಾಪನೆ.

1955: ಶ್ರೀ ಕ್ಷೇತ್ರದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಪ್ರೌಢಶಾಲೆ ಸ್ಥಾಪನೆ.

1956: ಸಿದ್ದಗಂಗಾ ಉಪಧ್ಯಾಯ ಶಿಕ್ಷಣ ತರಬೇತಿ ಸಂಸ್ಥೆ ಸ್ಥಾಪನೆ.

1956: ಶ್ರೀಕ್ಷೇತ್ರದಲ್ಲಿ ಸಂಸ್ಕೃತ ಕಾಲೇಜು ಕಟ್ಟಡ ನಿರ್ಮಾಣ.

1960: ಶ್ರೀಮಠದಲ್ಲಿ ಸಾರ್ವಜನಿಕ ವಿದ್ಯಾರ್ಥಿನಿಲಯ ನಿರ್ಮಾಣ ಆರಂಭ.

1962: ಧರ್ಮಸ್ಥಳದಲ್ಲಿ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಇಡೀ ವಿಶ್ವವೇ ಮೆಚ್ಚುವಂತೆ ಪ್ರವಚನ ನೀಡಿದ್ದ ಶ್ರೀಗಳು.

1962: ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸ್ಥಾಪನೆ.

1963: ಜಾತ್ರೆಯಲ್ಲಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಆರಂಭ ಹಾಗೂ ಸಿದ್ದಗಂಗಾ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ.

1963: ತುಮಕೂರಿನಲ್ಲಿ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯ ಪ್ರಾರಂಭ.

1963: 44ನೇ ಅಖಿಲ ಕರ್ನಾಟಕ ಸಾಹಿತ್ಯ ಸಮ್ಮೇಳನ ಶ್ರೀಮಠದಲ್ಲಿ ನಡೆದಿದ್ದು, ಶ್ರೀಗಳು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದರು. ರಂ.ಶ್ರೀ ಮುಗಳಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು.

1965: ಶ್ರೀಮಠದಲ್ಲಿ ಕನ್ನಡ ಪಂಡಿತ ತರಗತಿ ಸ್ಥಾಪನೆ.

1965: ಸಿದ್ದಗಂಗಾ ತ್ರೈಮಾಸಿಕ ಪತ್ರಿಕೆ ಆರಂಭ.

1966: ತುಮಕೂರಿನಲ್ಲಿ ಸಿದ್ದಗಂಗಾ ಕಲಾ ವಾಣಿಜ್ಯ ವಿಜ್ಞಾನ ಕಾಲೇಜು ಸ್ಥಾಪನೆ.

1967: ಸಂಜೆ ಕಾಲೇಜು ಸ್ಥಾಪನೆ ಬೆಳಗ್ಗೆ ಕೆಲಸ ಮಾಡಿ, ಸಂಜೆ ಓದು. ಆಸ್ತಕ ವಿದ್ಯಾರ್ಥಿ ಅನುಕೂಲವಾಗುವ ರೀತಿಯಲ್ಲಿ ಸ್ಥಾಪನೆ.

1968: ಬಸವ ಕಲ್ಯಾಣದಲ್ಲಿ ನಡೆದ ಬಸವೇಶ್ವರರ ಅಷ್ಟ ಶತಮಾನೋತ್ಸವದ ಅಧ್ಯಕ್ಷತೆ, ಬಸವಣ್ಣರ ಮಹಾತತ್ವ ಸಾರಿದ ಶ್ರೀಗಳು ದೇಶದ ಮೂಲೆ ಮೂಲೆಯಿಂದ ಆಗಮಿಸಿದ್ದ ಭಕ್ತರು.

1969: ಮುಂಬೈನಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಅಧಿವೇಶನದ ಅಧ್ಯಕ್ಷತೆ.

1969: ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಸಮಾವೇಶದಲ್ಲಿ ನೇತೃತ್ವ, ಹಿಂದೂಧರ್ಮದ ಜಾಗೃತಿಯಲ್ಲಿ ಭಾಗಿ.

1970: ಡಿ.27 ಬೆಂಗಳೂರಿನಲ್ಲಿ ನಡೆದ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ.

1972: ಮೇ.26 ಶ್ರೀಮಠದ ಪೀಠಾಧಿಕಾರ ಸ್ವೀಕಾರದ ರಜತ ಮಹೋತ್ಸವ. ಮುದ್ರಣಾಲಯ ಪ್ರಾರಂಭ

1972: ಮೇ 28 ಉಚಿತ ವಿದ್ಯಾರ್ಥಿ ನಿಲಯ ಮತ್ತು ಸಂಸ್ಕೃತ ಕಾಲೇಜಿನ ಸುವರ್ಣ ಮಹೋತ್ಸವ.

1974: ಅಖಿಲ ಭಾರತ ವೀರಶೈವ ಮಠಾಧಿಪತಿಗಳ ಸಂಘದ ಅಧ್ಯಕ್ಷತೆ.

1977: ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರಗಳ ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿಗಳ ರಜತ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ.

1978: ಗ್ರಾಮಾಂತರ ಬಸವಜಯಂತಿ ಯೋಜನೆ ಆರಂಭ.

1982: ಎ.24ರಂದು ರಾಷ್ಟ್ರಪತಿ ನೀಲಂ ಸಂಜೀವರೆಡ್ಡಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಸ್.ಗುಂಡೂರಾವ್ ಅವರಿಂದ   ಸುವರ್ಣಮಹೋತ್ಸವ ನೆನಪಿಗಾಗಿ ಗೌರವ ಗ್ರಂಥ ‘ಸಿದ್ದಗಂಗಾಶ್ರೀ’ ಬಿಡುಗಡೆ.

1982: ಶ್ರೀಸಿದ್ದಗಂಗಾ ಮಹಿಳಾ ಕಾಲೇಜು ಸ್ಥಾಪನೆ.

1982: ಪೀಠಾರೋಹಣ ಸುವರ್ಣ ಮಹೋತ್ಸವ ಸಮಾರಂಭ

1984: ನೆಲಮಂಗಲದಲ್ಲಿ ಶ್ರೀ ಸಿದ್ದಗಂಗಾ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ.

1984: ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜು ಸ್ಥಾಪನೆ.

1987: ಏ.20 ಹುಬ್ಬಳ್ಳಿ 3 ಸಾವಿರ ಮಠದ ಜಗದ್ಗುರು ಗಂಗಾಧರರಾಜ ಯೋಗೀಂದ್ರ ಸ್ವಾಮೀಜಿ ರಜತ ಮಹೋತ್ಸವದ ಅಧ್ಯಕ್ಷತೆ.

1992: ಫೆ.16 ಶ್ರೀಗಳ ವಜ್ರ ಮಹೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ ಡಾ.ಶಂಕರ್ ದಯಾಳ್ ಶರ್ಮ ಅವರಿಂದ ಸಿದ್ದಗಂಗಾ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಶಂಕುಸ್ಥಾಪನೆ.

1995: ಫೆ.2 ಸಿದ್ದಗಂಗಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆ.

1995: ತಮಿಳುನಾಡು ಧರ್ಮಪುರಿ ಜಿಲ್ಲೆ ಡೆಂಕಟಣ ಕೋಟೆ ತಾಲೂಕು ಮೊಳ್ಳಳ್ಳಿ ಗ್ರಾಮದಲ್ಲಿ ವಿಶ್ವ ಬಸವ ಜಯಂತಿ ಕಾರ್ಯಕ್ರಮದ ನೇತೃತ್ವ.

1996: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ 1995ನೇ ವರ್ಷದ ಘಟಿಕೋತ್ಸವದಲ್ಲಿ ಅನುಗ್ರಹ ಭಾಷಣ.

1997: ಮಾ.22 ಶ್ರೀಗಳ ವಜ್ರಮಹೋತ್ಸವ ಬೃಹತ್ ವಿದ್ಯಾರ್ಥಿ ನಿಲಯ, ಪ್ರಸಾದ ನಿಲಯ ಹಾಗೂ ದಾಸೋಹ ಸಿರಿ ಗ್ರಂಥ ಸಮರ್ಪಣೆ.

1997: ತಮಿಳುನಾಡಿನ ಸೇಲಂ ನಲ್ಲಿ ನಡೆದ ವೀರಶೈವ ಸಮಾಜದ ಸಮ್ಮೇಳನದ ಅಧ್ಯಕ್ಷತೆ.

2000: ಜ.30ರಂದು ಪ್ರಧಾನಿ ವಾಜಪೇಯಿ ಅವರಿಂದ ಸಂಸ್ಕೃತ ಕಾಲೇಜು, ಅಮೃತ ಮಹೋತ್ಸವ ಉದ್ಘಾಟನೆ. ಅಂಧ ಮಕ್ಕಳಿಗೆ ನೂತನ ಶಾಲಾ ಕಟ್ಟಡ ಹಾಗೂ ವಸತಿ ನಿಲಯ ನಿರ್ಮಾಣ.

2005: ಶ್ರೀಗಳ 98ನೇ ಜನ್ಮದಿನೋತ್ಸವ ಸಮಾರಂಭದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಆಡ್ವಾಣಿ ಭಾಗಿ.

 2005: ಪೀಠಾರೋಹಣ(ಅಮೃತ ಮಹೋತ್ಸವ) ಸಮಾರಂಭ ಗೃಹಸಚಿವ ಶಿವರಾಜ್ ಪಾಟೀಲ್, ಸಿಎಂ ಧರಂಸಿಂಗ್ ಭಾಗಿ.

2006: ಎ.7 ಶ್ರೀಗಳ ಗುರುವಂದನಾ ಕಾರ್ಯಕ್ರಮ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ರಾಜ್ಯಪಾಲ ಚತುರ್ವೇದಿ, ಸಿಎಂ ಕುಮಾರಸ್ವಾಮಿ, ಡಿಸಿಎಂ ಯಡಿಯೂರಪ್ಪ, ಸುತ್ತೂರು ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧ್ಯಕ್ಷರು ಭಾಗವಹಿಸಿದ್ದರು.

2009: ಕೃಷಿ ಸಮಾವೇಶ ಹಾಗೂ ಮಹಿಳಾ ಸಮಾವೇಶ

2009: ಶ್ರೀಗಳ ಶತಮಾನೋತ್ಸವ ಗುರುವಂದನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಪ್ರತಿಭಾ ಸಿಂಗ್ ಪಾಟೀಲ್ ಆಗಮಿಸಿದ್ದರು.

2010: ಶ್ರೀಗಳಿಗೆ ಬಸವಶ್ರೀ ಪುರಸ್ಕಾರದ ಗೌರವ.

2011: ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಶ್ರೀಮಠದ ಅಧ್ಯಕ್ಷ ಪದವಿಯ ವರ್ಗಾವಣೆ

2012: ಗುರುವಂದನಾ ಕಾರ್ಯಕ್ರಮ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಭಾಗಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X