Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜದಲ್ಲಿನ ತಾರತಮ್ಯಗಳ ವಿರುದ್ಧ ಹೋರಾಟ...

ಸಮಾಜದಲ್ಲಿನ ತಾರತಮ್ಯಗಳ ವಿರುದ್ಧ ಹೋರಾಟ ಅಗತ್ಯ: ಸಂಸದ ಸುರೇಶ್ ಅಂಗಡಿ

ವಾರ್ತಾಭಾರತಿವಾರ್ತಾಭಾರತಿ22 Jan 2019 8:06 PM IST
share
ಸಮಾಜದಲ್ಲಿನ ತಾರತಮ್ಯಗಳ ವಿರುದ್ಧ ಹೋರಾಟ ಅಗತ್ಯ: ಸಂಸದ ಸುರೇಶ್ ಅಂಗಡಿ

ಬೆಳಗಾವಿ, ಜ.21: ಸಮಾಜದಲ್ಲಿರುವ ತಾರತಮ್ಯಗಳ ವಿರುದ್ಧ 12ನೇ ಶತಮಾನದಲ್ಲಿ ಶರಣರು ನಡೆಸಿದ ಹೋರಾಟವನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ ಎಂದು ಸಂಸದ ಸುರೇಶ್ ಅಂಗಡಿ ಹೇಳಿದ್ದಾರೆ.

ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ನಡೆದ ಸಾಮಾಜಿಕ ಕ್ರಾಂತಿಯು ಜಾತಿ ತಾರತಮ್ಯದ ವಿರುದ್ಧ ಧ್ವನಿಯಾಗಿತ್ತು. ಆದರೆ, ಇಂದಿಗೂ ಜಾತಿ, ಮತ, ಲಿಂಗ ಎಂಬುದೇ ಮುಂದುವರೆದಿದ್ದು, ಇದರ ವಿರುದ್ಧ ನಿರಂತರ ಹೋರಾಟ ನಡೆಯುವ ಅಗತ್ಯವಿದೆ ಎಂದು ಅವರು ಹೇಳಿದರು.

ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಸಮಾನತೆ ಹಾಗೂ ಸಹೋದರತೆಯನ್ನು ಸಾರುವ ಕಾರ್ಯವನ್ನು ಮಾಡಿದರು. ನೇರವಾಗಿ ಸಾಮಾಜಿಕ ದೋಷಗಳನ್ನು ಎತ್ತಿ ತೋರಿಸಿ ಅದಕ್ಕೆ ಪರಿಹಾರವನ್ನು ಸೂಚಿಸುವ ಕಾರ್ಯವನ್ನು ಮಾಡಿದ ಅವರನ್ನು ಸ್ಮರಿಸಬೇಕಿದೆ ಎಂದು ಸುರೇಶ್ ಅಂಗಡಿ ತಿಳಿಸಿದರು.

ಅಂಬಿಗರ ಚೌಡಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡಿದ ಡಾ.ಈಶ್ವರ ಮಂಟೂರ ಮಾತನಾಡಿ, ನೇರ ನುಡಿಯ ವಚನಕಾರ ಅಂಬಿಗರ ಚೌಡಯ್ಯ ಕೇವಲ ಒಂದು ಜಾತಿ ಸಮುದಾಯ ಅಥವಾ ಕುಲಕ್ಕೆ ಸೀಮಿತವಾದವರಲ್ಲ. ಅವರು ನಿರಾಶ್ರಿತರನ್ನು, ಬಡವರನ್ನು ಎತ್ತಿ ಹಿಡಿದವರು ಎಂದರು.

ಅವರ ವಚನಗಳಲ್ಲಿ ಬದುಕಿನ ಸೂತ್ರಗಳಿವೆ. ಅವರಲ್ಲಿ ವೃತ್ತಿ ಗೌರವವಿತ್ತು. ದೇವರಿಗೆ ಹೆಸರಿಲ್ಲ ಎಲ್ಲವನ್ನು ನಾವೇ ಸೃಷ್ಟಿಸಿಕೊಂಡಿರುವಂತಹದ್ದು ಎಂದು ತಿಳಿಸಿದ ಚೌಡಯ್ಯನವರ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸುಮಾರು 800 ವರ್ಷಗಳ ಹಿಂದೆಯೇ ತಮ್ಮ ವಚನಗಳ ಮೂಲಕ ಜನಸಾಮಾನ್ಯರಿಗೆ ವೈಚಾರಿಕತೆ ಅರಿವು ಮೂಡಿಸಲು ಹಾಗೂ ಮೂಢನಂಬಿಕೆಗಳನ್ನು ಮತ್ತು ಅರ್ಥವಿಲ್ಲದ ಆಚರಣೆಗಳನ್ನು ತೊಲಗಿಸಲು ಶ್ರಮಿಸಿದ ಅಂಬಿಗರ ಚೌಡಯ್ಯ ನಿಜಕ್ಕೂ ನಿಜ ಶರಣ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪಮೇಯರ್ ಮಧುಶ್ರೀ, ಪೂಜಾರ, ಬೆಳಗಾವಿ ತಹಶೀಲ್ದಾರ್ ಮಂಜುಳಾ ನಾಯಕ, ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದು ಸುನಗಾರ, ಬೆಳಗಾವಿ ಜಿಲ್ಲಾ ಗಂಗಾಮತಸ್ಥರ ಸಮಾಜ ಸಂಘದ ಅಧ್ಯಕ್ಷ ಗಂಗಾರಾಮ ತಳವಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X