Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಿಕೆಗಳು ಸಮಾಜದ ಕೈಗನ್ನಡಿ:...

ಪತ್ರಿಕೆಗಳು ಸಮಾಜದ ಕೈಗನ್ನಡಿ: ಬಸವಲಿಂಗಮೂರ್ತಿ ಸ್ವಾಮೀಜಿ

ದಫ್ ಅಸೋಸಿಯೇಶನ್ ದ.ಕ-ಉಡುಪಿ ಜಿಲ್ಲೆ ಇದರ ದಶಮಾನೋತ್ಸವ

ವಾರ್ತಾಭಾರತಿವಾರ್ತಾಭಾರತಿ22 Jan 2019 10:44 PM IST
share
ಪತ್ರಿಕೆಗಳು ಸಮಾಜದ ಕೈಗನ್ನಡಿ: ಬಸವಲಿಂಗಮೂರ್ತಿ ಸ್ವಾಮೀಜಿ

ಬಂಟ್ವಾಳ, ಜ. 22: ಪತ್ರಿಕೆಗಳು ಸಮಾಜದ ಕೈಗನ್ನಡಿ. ಪತ್ರಿಕೆಗಳು ನೀಡುವ ನಾಲ್ಕು ದಿಕ್ಕುಗಳ ಸುದ್ದಿ ನಮಗೆ ಉತ್ತಮ ದಾರಿಯನ್ನು ತೋರುತ್ತದೆ ಎಂದು ಮೈಸೂರು ಬಸವಧ್ಯಾನ ಮಂದಿರ ಶ್ರೀ ಬಸವಲಿಂಗಮೂರ್ತಿ ಸ್ವಾಮೀಜಿ ಹೇಳಿದ್ದಾರೆ.

ದಫ್ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ದಶಮಾನೋತ್ಸವ ಹಾಗೂ ಕರಾವಳಿ ಟೈಮ್ಸ್ ಪಾಕ್ಷಿಕ ಇದರ ನಾಲ್ಕನೆ ವಾರ್ಷಿಕೋತ್ಸವದ ಪ್ರಯುಕ್ತ ಇತ್ತೀಚೆಗೆ ಪಾಣೆಮಂಗಳೂರು-ಆಲಡ್ಕ ಮೈದಾನದ ಮರ್‍ಹೂಂ ಕೆ.ಎಂ. ಇಕ್ಬಾಲ್ ಮಾಸ್ಟರ್ ವೇದಿಕೆಯಲ್ಲಿ ನಡೆದ ದಫ್ ಸ್ಪರ್ಧೆ, ನಅತೇ ಶರೀಫ್, ಸೌಹಾರ್ದ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಹಿರಿಯರು, ಮುತ್ಸದ್ದಿಗಳು, ಜ್ಞಾನವಂತರು ಕೂಡಾ ಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸುತ್ತಿದ್ದರು. ಹಿರಿಯ ಸ್ವಾಮೀಜಿಗಳಾದ ಶ್ರೀ ಸಿದ್ದಗಂಗಾ ಸ್ವಾಮೀಜಿಯವರು ತಮಗೆ 112 ವರ್ಷ ಪ್ರಾಯವಾದಾಗಲೂ ಬೆಳಿಗ್ಗಿನ ತಮ್ಮ ಪೂಜೆ ಮುಗಿಸಿ ಪ್ರಥಮವಾಗಿ ಪತ್ರಿಕೆಗಳನ್ನು ತರಿಸಿ ಓದುವ ಮೂಲಕ ತಮ್ಮ ಜ್ಞಾನಕ್ಕೆ ಸಾಣೆ ಹಿಡಿಯುತ್ತಿದ್ದರು ಎಂದರು.

ಸರ್ವಜ್ಞ ಸಮಾನರಾದ ಮಹಾತ್ಮರೂ ಕೂಡಾ ಪತ್ರಿಕೆಗಳನ್ನು ಓದುವ ವಾಡಿಕೆ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಿಕೆಗಳನ್ನು ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ ಎಂದು ಸ್ವಾಮೀಜಿ ಹೇಳಿದರು.

ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಹಾಜಿ ಬಿ.ಎಚ್. ಅಬೂಸ್ವಾಲಿಹ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಸೂಫಿ ಹಾಗೂ ಶರಣ ಸಂತರ ಸೇವಾ ಸಮಿತಿ ರಾಜ್ಯಾಧ್ಯಕ್ಷ ಖ್ವಾಜಾ ಅಝೀಂ ಅಲಿ ಶಾ ಚಿಶ್ತಿ ಉದ್ಘಾಟಿಸಿದರು. ಮಾಜಿ ಸಚಿವ ಬಿ. ರಮಾನಾಥ ರೈ ಕರಾವಳಿ ಟೈಮ್ಸ್ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದ ಸಾಧಕರನ್ನು ಸನ್ಮಾನಿಸಿದರು.

ಬೆಳ್ಮ ಜುಮಾ ಮಸೀದಿ ಖತೀಬ್ ಎನ್.ಎಚ್. ಆದಂ ಫೈಝಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ಮಾಜಿ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸದಸ್ಯ ಹಾಶೀರ್ ಪೇರಿಮಾರ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್. ಖಾದರ್, ಸಜಿಪಮುನ್ನೂರು ಗ್ರಾಪಂ ಸದಸ್ಯ ಯೂಸುಫ್ ಕರಂದಾಡಿ, ಚರಣ್, ತುಂಬೆ ಗ್ರಾಪಂ ಸದಸ್ಯ ಮುಹಮ್ಮದ್ ವಳವೂರು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಹಿದಾಯ ಫೌಂಡೇಶನ್ ಸಂಚಾಲಕ ಜಿ. ಮುಹಮ್ಮದ್ ಹನೀಫ್ ಗೋಳ್ತಮಜಲು, ಆನಿಯಾ ದರ್ಬಾರ್ ಮಾಲಕ ಹಂಝ ಬಸ್ತಿಕೋಡಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕರ್ ಸಜಿಪ, ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಬಂಟ್ವಾಳ ಘಟಕಾಧ್ಯಕ್ಷ ಫಾರೂಕ್ ಬಂಟ್ವಾಳ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಮಾಂಬಾರಿ, ಮೆಸ್ಕಾಂ ಸಲಹಾ ಸಮಿತಿ ಮಾಜಿ ಸದಸ್ಯ ವೆಂಕಪ್ಪ ಪೂಜಾರಿ, ಬಂಟ್ವಾಳ ಪುರಸಭಾ ಮಾಜಿ ಸದಸ್ಯ ಹಾಜಿ ಪಿ. ಮುಹಮ್ಮದ್ ರಫೀಕ್, ಆಲಡ್ಕ ಎಂಜೆಎಂ ಅಧ್ಯಕ್ಷ ಅಬೂಬಕರ್ ತ್ರೀಮೆನ್ಸ್, ಉದ್ಯಮಿಗಳಾದ ದಾವೂದ್ ನಂದಾವರ, ಮುಹಮ್ಮದ್ ಹನೀಫ್ ಬೋಳಂಗಡಿ, ಹನೀಫ್ ಹಾಸ್ಕೋ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಗೂಡಿನಬಳಿ ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ಲತೀಫ್ ಖಾನ್ ಗೂಡಿನಬಳಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ, ಪ್ರಕಾಶ್ ಮೆಲ್ಕಾರ್, ಕರಾವಳಿ ಟೈಮ್ಸ್ ಉಪ ಸಂಪಾದಕ ಯು. ಮುಸ್ತಫಾ, ಪ್ರತಿನಿಧಿ ಅನ್ವರ್ ಹುಸೈನ್ ನಂದಾವರ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಇತ್ತೀಚೆಗೆ ನಿಧನರಾದ ಸಮಸ್ತ ಉಪಾಧ್ಯಕ್ಷ ಮರ್‍ಹೂಂ ಶೈಖುನಾ ಮಿತ್ತಬೈಲು ಸಹಿತ ನಮ್ಮನ್ನಗಲಿದವರಿಗೆ ಮಿತ್ತಬೈಲ್ ಉಸ್ತಾದರ ಪುತ್ರ ಇರ್ಶಾದ್ ದಾರಿಮಿ ಅಲ್-ಜಝರಿ ಅವರು ಅನುಸ್ಮರಣಾ ಪ್ರಾರ್ಥನೆ ನೆರವೇರಿಸಿದರು.

ಗಾಯಕರಾದ ಮಾಸ್ಟರ್ ಉಮರ್ ಸ್ವಲಾಹುದ್ದೀನ್ ದೆಂಜಿಪ್ಪಾಡಿ-ಪಾಣೆಮಂಗಳೂರು, ಹಾಫಿಝ್ ಮುಹಮ್ಮದ್ ಮುಝಮ್ಮಿಲ್ ಮೈಸೂರು ಹಾಗೂ ಖ್ವಾಜಾ ಮೌದೂದ್ ಅಲಿ ಮೈಸೂರು ಅವರಿಂದ ನಅತೇ ಶರೀಫ್ ಆಲಾಪನೆ ನಡೆಯಿತು.

ದಫ್ ಉಸ್ತಾದರು ಹಾಗೂ ಪೋಷಕರಾದ ಎನ್.ಕೆ. ಕಾಸಿಂ ನೇರಳಕಟ್ಟೆ, ಹಸೈನಾರ್ ಕಡಂಬು, ಇಬ್ರಾಹಿಂ ಕಡಂಬು, ಇಬ್ರಾಹಿಂ ಕೋಟ-ಕುಂದಾಪುರ, ರಫೀಕ್ ಮುಸ್ಲಿಯಾರ್, ಅಬ್ದುಲ್ ಅಝೀಝ್ ಬೊಳ್ಳಾಯಿ, ಅಬ್ದುಲ್ ರಝಾಕ್ ಸಜಿಪ, ಫಾರೂಕ್ ಪರ್ಲಿಯಾ ಹಾಗೂ ದಫ್ ಅಸೋಸಿಯೇಶನ್ ಸ್ಥಾಪಕ ಕಾರ್ಯದರ್ಶಿ ಆರ್.ಕೆ. ಮದನಿ ಅಮ್ಮೆಂಬಳ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರಾದ ಹಾಜಿ ಸುಲೈಮಾನ್ ಸಿಂಗಾರಿ ನಾರ್ಶ, ಹಾಜಿ ಕೆ.ಎಸ್. ಅಬೂಬಕರ್ ಪಲ್ಲಮಜಲು, ಅಬೂಬಕರ್ ಸಿದ್ದೀಕ್ ಗುಡ್ಡೆಅಂಗಡಿ ಹಾಗೂ ಕಾರ್ಯಕ್ರಮದ ಯಶಸ್ಸಿನಲ್ಲಿ ಪಾಲುದಾರರಾದ ಮುಹಮ್ಮದ್ ರಫೀಕ್ ಡ್ರೈವರ್, ಹಮೀದ್ ಅಲಿ ಕುಕ್ಕಾಜೆ ಅವರನ್ನು ಗೌರವಿಸಲಾಯಿತು.

ಕರಾವಳಿ ಟೈಮ್ಸ್ ಪ್ರಧಾನ ಸಂಪಾದಕ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಸ್ವಾಗತಿಸಿ, ದಫ್ ಎಸೋಸಿಯೇಶನ್ ಅಧ್ಯಕ್ಷ ಲತೀಫ್ ನೇರಳಕಟ್ಟೆ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ವಂದಿಸಿದರು. ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು. 

ಮಣಿಪುರ ತಂಡಕ್ಕೆ ದಫ್ ಪ್ರಶಸ್ತಿ

16 ತಂಡಗಳು ಭಾಗವಹಿಸಿದ್ದ ದಫ್ ಸ್ಪರ್ಧಾ ಕೂಟದಲ್ಲಿ ಕಟಪಾಡಿ-ಮಣಿಪುರದ ಖಲಂದರ್ ಷಾ ದಫ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಪುತ್ತೂರು-ಪರ್ಲಡ್ಕದ ಹಯಾತುಲ್ ಇಸ್ಲಾಂ ದಫ್ ತಂಡ ದ್ವಿತೀಯ ಹಾಗೂ ಕೂಳೂರು-ಪಂಜಿಮೊಗರಿನ ರಿಫಾಯಿಯ ದಫ್ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿತು. ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಬಶೀರ್ ರೆಂಗೇಲು, ಶಹೀದ್ ಬಿ.ಸಿ.ರೋಡ್, ಇರ್ಶಾದ್ ನೆಹರುನಗರ ಕಾರ್ಯನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X