Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ...

ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ ರಾಷ್ಟ್ರ ಸ್ಥಾಪನೆ’ಗೆ ಕರೆ

ಮಂಗಳೂರಿನ ಹಲವೆಡೆ ಸಂವಿಧಾನ ವಿರೋಧಿ ಅಕ್ರಮ ಬ್ಯಾನರ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ23 Jan 2019 4:55 PM IST
share
ಹಿಂದೂ ಜನಜಾಗೃತಿ ಸಮಿತಿಯಿಂದ ‘ಹಿಂದೂ ರಾಷ್ಟ್ರ ಸ್ಥಾಪನೆ’ಗೆ ಕರೆ

► ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

► ಸಂಘಟನೆಗಳಿಂದ ವಿರೋಧ

ಮಂಗಳೂರು, ಜ. 23: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜ. 27ರಂದು ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆಯಲಿರುವ ಹಿಂದೂ ರಾಷ್ಟ್ರದ ಜಾಗೃತಿ ಸಭೆಗೆ ಸಂಬಂಧಿಸಿ ನಗರದ ಹಲವು ಕಡೆಗಳಲ್ಲಿ ಅಳವಡಿಸಿರುವ ಬ್ಯಾನರ್‌ಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೊಳಗಾಗುತ್ತಿವೆ.

ಈ ಬ್ಯಾನರ್‌ನಲ್ಲಿ ‘ಹಿಂದೂಗಳೇ ಎಲ್ಲರೂ ಒಟ್ಟಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡೋಣ, ಹಿಂದೂಗಳೇ ಸಭೆಗೆ ಉಪಸ್ಥಿತರಿದ್ದು ಹಿಂದೂ ಏಕತೆ ಪ್ರದರ್ಶಿಸಿ’ ಎಂದು ಬರೆಯಲಾಗಿದ್ದು, ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ.

ಮೊದಲು ಈ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳುವುದಾಗಿ ಸಂಘಟಕರು ಹೇಳಿಕೊಂಡಿದ್ದರು. ಕಾರ್ಯಕ್ರಮಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ರೂಪಿಸಿರುವ ಹೊಸ ನಿಯಮಾವಳಿಯ ಕಾರಣದಿಂದಲೋ ಏನೋ, ಇದೀಗ ಕಾರ್ಯಕ್ರಮವು ನಗರದ ಕೋಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯಕ್ಕೆ ಸ್ಥಳಾಂತರಗೊಂಡಿದೆ.

ಹಿಂದೂ ಜನಜಾಗೃತಿ ಸಮಿತಿಯು ಅಳವಡಿಸಿದ ಈ ಬ್ಯಾನರ್ ನಗರದ ಬಹುತೇಕ ಕಡೆಗಳಲ್ಲಿ ಕಾಣಸಿಗುತ್ತಿವೆ. ಬ್ಯಾನರ್ ಅಳವಡಿಕೆಯ ಮೂಲಕ ಪ್ರಚಾರಕ್ಕಿಂತಲೂ ವಾಟ್ಸ್‌ಆ್ಯಪ್ ಸಹಿತ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಗೊಳಗಾಗುವ ಮೂಲಕ ಪ್ರಚಾರ ಪಡೆಯುತ್ತಿವೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅದರಲ್ಲೂ ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ಈ ಬ್ಯಾನರ್ ಅಳವಡಿಕೆಗೆ ಹೇಗೆ ಅವಕಾಶ ಮಾಡಿಕೊಟ್ಟಿತು ? ಸಂವಿಧಾನ ಪ್ರಕಾರ ಇಂಥದ್ದೊಂದು ಬ್ಯಾನರ್ ಅಳವಡಿಕೆಗೆ ಅವಕಾಶ ಇದೆಯೇ ? ಹಿಂದೂ-ಮುಸ್ಲಿಂ-ಕ್ರೈಸ್ತರು ತಮ್ಮ ತಮ್ಮ ಧರ್ಮದ ಆಧಾರದ ಮೇಲೆ ರಾಷ್ಟ್ರಕಟ್ಟಲು ಮುಂದಾಗಿ ಎನ್ನುವಂತಹ ಬ್ಯಾನರ್ ಅಳವಡಿಸಿದರೆ ಈ ದೇಶದ ಪರಿಸ್ಥಿತಿ ಏನಾಗಬಹುದು ? ಇದು ರಾಷ್ಟ್ರದ್ರೋಹ ಅಲ್ಲವೇ ? ಇತ್ಯಾದಿಯಾಗಿ ಪ್ರಶ್ನೆಗಳೊಂದಿಗೆ ಚರ್ಚೆಯಾಗುತ್ತಿವೆ. ಅಲ್ಲದೆ ಈ ಬಗ್ಗೆ ಪೊಲೀಸ್ ಇಲಾಖೆಯು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂಬ ಒತ್ತಾಯವೂ ಕೇಳಿ ಬರುತ್ತಿವೆ.

''ಮಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ನಮಗೆ ಯಾವುದೇ ಸಂಘಟನೆಯು ಅನುಮತಿ ಕೋರಿ ಪತ್ರ ಬರೆದಿಲ್ಲ. ಇನ್ನು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ವಿವಾದಾತ್ಮಕ ಬ್ಯಾನರ್ ಅಳವಡಿಕೆಗೆ ಸಂಬಂಧಿಸಿ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು''.

-ಹನುಮಂತರಾಯ, (ಉಪ ಪೊಲೀಸ್ ಆಯುಕ್ತರು)
ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಮಂಗಳೂರು ನಗರ ಪೊಲೀಸ್ ಇಲಾಖೆ

''ಮನಪಾ ಆಡಳಿತವು ಯಾವುದೇ ವಿವಾದಾತ್ಮಕ ಬ್ಯಾನರ್ ಅಳವಡಿಕೆಗೆ ಅನುಮತಿ ನೀಡುವುದಿಲ್ಲ. ಇಂತಹ ಬ್ಯಾನರ್ ಎಲ್ಲೆಲ್ಲಿ ಅಳವಡಿಸಲಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು''.

- ಗಾಯತ್ರಿ ನಾಯಕ್, (ಉಪಾಯುಕ್ತೆ )
ಮಂಗಳೂರು ಮಹಾನಗರ ಪಾಲಿಕೆ

''ಇದು ಸಂವಿಧಾನ ವಿರೋಧಿಯಾಗಿದೆ. ರಾಷ್ಟ್ರದ್ರೋಹ ಕೃತ್ಯವಾಗಿದೆ. ಪೊಲೀಸರು ಯಾವ ಕಾರಣಕ್ಕೂ ಇದನ್ನು ಲಘುವಾಗಿ ಪರಿಗಣಿಸಬಾರದು. ರಾಷ್ಟ್ರದ ಹಿತಕ್ಕಾಗಿ ಹೋರಾಟ ಮಾಡುವ ಕನ್ಹಯ್ಯಾ ಕುಮಾರ್‌ರಂತಹ ಉತ್ಸಾಹಿ ಯುವಕರ ವಿರುದ್ಧ ಸುಳ್ಳು ಆರೋಪದಡಿ ದೇಶದ್ರೋಹ ಪ್ರಕರಣ ದಾಖಲಿಸುವ ನಮ್ಮ ಆಡಳಿತ ವ್ಯವಸ್ಥೆಯು ಬಹಿರಂಗವಾಗಿ ಇಂತಹ ದುಷ್ಕೃತ್ಯ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು. ಭಾರತದ ಜನರ ಸಂಸ್ಕೃತಿಯೇ ಜಾತ್ಯತೀತತೆಯಿಂದ ಕೂಡಿದೆ. ಭಾರತವನ್ನು ಸಾವಿರಾರು ವರ್ಷಗಳ ಕಾಲ ಮುಸ್ಲಿಂ ರಾಜರುಗಳು ಆಳ್ವಿಕೆ ಮಾಡಿದ್ದರು. ಅವರೆಂದೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಲು ಹೊರಟ ಉದಾಹರಣೆ ಇಲ್ಲ. ಹೀಗಿರುವಾಗ ಕೆಲವು ಮಂದಿ ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಷಡ್ಯಂತ್ರ ನಡೆಸುತ್ತಿರುವುದು ವಿಪರ್ಯಾಸ''

-ಪಿ.ಬಿ.ಡೇಸಾ, ಉಪಾಧ್ಯಕ್ಷರು, ಪಿಯುಸಿಎಲ್ ರಾಷ್ಟ್ರೀಯ ಸಮಿತಿ

''ಗಣರಾಜ್ಯೋತ್ಸವದ ಸಂದರ್ಭದಲ್ಲೇ ಸಂವಿಧಾನ ವಿರೋಧಿ ಮತ್ತು ದೇಶದ್ರೋಹ ಕೃತ್ಯ ನಡೆಸುವ ಇಂತಹ ಕಾರ್ಯಕ್ರಮವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಈ ಕಾರ್ಯಕ್ರಮವನ್ನು ರದ್ದುಗೊಳಿಸಲು ಸೂಕ್ತ ಕ್ರಮ ಜರುಗಿಸಬೇಕು. ಅಷ್ಟೇ ಅಲ್ಲ, ಶಿಕ್ಷಣ ಸಂಸ್ಥೆಯೊಂದರಲ್ಲಿ ಇಂತಹ ಕಾರ್ಯಕ್ರಮ ನಡೆಸಲು ಹೇಗೆ ಅವಕಾಶ ನೀಡಲಾಯಿತು ಎಂಬುದರ ಬಗ್ಗೆ ತನಿಖೆಗೊಳಪಡಿಸಲು ಶಿಕ್ಷಣ ಇಲಾಖೆ ಮುಂದಾಗಬೇಕು. ಇದು ಬಹುತ್ವದ ರಾಷ್ಟ್ರ. ನಾಳೆ ಮುಸ್ಲಿಮರು, ಕ್ರೈಸ್ತರ ಸಹಿತ ಮತ್ತಿತರ ಧರ್ಮೀಯರು ತಮ್ಮ ಧರ್ಮದ ಆಧಾರದ ಮೇಲೆ ರಾಷ್ಟ್ರ ಕಟ್ಟಲು ಮುಂದಾದರೆ ಭಾರದ ಸ್ಥಿತಿ ಹೇಗಾದೀತು ?. ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ಕೂಡ ಎಚ್ಚೆತ್ತುಕೊಳ್ಳಬೇಕಿದೆ. ಕಾರ್ಯಕ್ರಮದ ಸಂಘಟಕರು ಮಾತ್ರವಲ್ಲ ಶಿಕ್ಷಣ ಸಂಸ್ಥೆಯ ವಿರುದ್ಧವೂ ಕ್ರಮ ಜರುಗಿಸಬೇಕು. ಇದು ಬಲಪಂಥೀಯರ ನಗರ ನಕ್ಸಲೈಟ್ ಅಲ್ಲವೇ ? ಸರಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆಯು ಯಾಕೆ ಮೌನವಾಗಿದೆ ?''.

- ಪಿ.ವಿ.ಮೋಹನ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ

''ಪ್ರಜಾಪ್ರಭುತ್ವ ಭಾರತದ ಜಾತ್ಯತೀತ ಪರಿಕಲ್ಪನೆಗೆ ಸಡ್ಡು ಹೊಡೆಯುವ ಪ್ರಯತ್ನವೆಂಬಂತೆ ಸನಾತನ ಸಂಸ್ಥೆಯೊಂದಿಗೆ ಸಂಬಂಧ ಹೊಂದಿರುವ ಹಿಂದೂ ಜನಜಾಗೃತಿ ಸಮಿತಿ ಎಂಬ ಸಂಘಟನೆಯ ವತಿಯಿಂದ ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯಕ್ರಮದ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಇದು ಆತಂಕಕಾರಿ ವಿಚಾರವಾಗಿದೆ. ಭಾರತದ ಸಂವಿಧಾನವು ದೇಶವನ್ನು ಒಂದು ಜಾತ್ಯತೀತ, ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಿಸುತ್ತದೆ. ಇಲ್ಲಿ ಯಾವುದೇ ಧರ್ಮದ ಆಧಾರದಲ್ಲಿ ದೇಶ ಕಟ್ಟುತ್ತೇವೆ ಎನ್ನುವುದು ಸಂವಿಧಾನ ವಿರೋಧಿ ಮತ್ತು ದೇಶ ವಿರೋಧಿ ಕೃತ್ಯವಾಗುತ್ತದೆ. ಜಾಗತಿಕ ಮಟ್ಟದಲ್ಲಿ ಇಸ್ಲಾಮಿಕ್ ರಾಷ್ಟ್ರ ಮಾಡುತ್ತೇವೆ ಎಂಬ ಗುರಿಯೊಂದಿಗೆ ಅಮಾಯಕ ಜನರ ಮಾರಣ ಹೋಮ ನಡೆಸುತ್ತಿರುವ ಐಸಿಸ್ ಭಯೋತ್ಪಾದಕರ ಪ್ರಯತ್ನಗಳು ಹೇಗೆ ಜಾಗತಿಕವಾಗಿ ಮಾರಕವೋ ಅದೇ ರೀತಿ ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯ ಪ್ರಯತ್ನವೂ ಮಾರಕವಾಗಿದೆ. ಹಾಗಾಗಿ ಪೊಲೀಸ್ ಇಲಾಖೆಯು ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿ, ಸಂಘಟಕರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು''

-ಯಾಸರ್ ಹಸನ್, ಪಿಎಫ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ

''ಸಂವಿಧಾನವನ್ನು ಧಿಕ್ಕರಿಸುವಂತಹ ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ. ಈ ಮೂಲಕ ದೇಶದ ಐಕ್ಯತೆ, ಸಮಗ್ರತೆಗೆ ಸಂಘಟಕರು ಸವಾಲು ಒಡ್ಡಿದ್ದಾರೆ. ಈ ಕಾರ್ಯಕ್ರಮದ ಆಯೋಜಕರು, ಅವಕಾಶ ಮಾಡಿಕೊಟ್ಟವರ ಮೇಲೆ ದೇಶದ್ರೋಹದ ಸೆಕ್ಷನ್ ಅಡಿ ಪ್ರಕರಣ ದಾಖಲಿಸಬೇಕು ಮತ್ತು ತನಿಖೆ ನಡೆಸಿ ಇದರ ಹಿಂದಿನ ಹುನ್ನಾರಗಳನ್ನು ಬಯಲಿಗೆಳೆಯಬೇಕು''.

- ಮುನೀರ್ ಕಾಟಿಪಳ್ಳ, ಅಧ್ಯಕ್ಷರು, ಡಿವೈಎಫ್‌ಐ, ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X