ಸಣ್ಣ ಅಚಾತುರ್ಯದಿಂದ ಶಾಸಕರ ನಡುವೆ ಹೊಡೆದಾಟ ನಡೆದಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ
"ಯಾರೊಬ್ಬರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ"

ಬೆಂಗಳೂರು, ಜ. 23: ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ಕಂಪ್ಲಿ ಗಣೇಶ್ ನಡುವಿನ ಹೊಡೆದಾಟ ಪ್ರಕರಣ ಸಣ್ಣ ಅಚಾತುರ್ಯದಿಂದ ನಡೆದಿದೆ. ಈ ಪ್ರಕರಣದಲ್ಲಿ ಯಾರೊಬ್ಬರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.
ಈಗಾಗಲೇ ಪ್ರಕರಣ ಸಂಬಂಧ ಶಾಸಕ ಗಣೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಇಂತಹ ಘಟನೆ ನಡೆಯಬಾರದಿತ್ತು. ಇದರಿಂದ ಜನಪ್ರತಿನಿಧಿಗಳ ಬಗ್ಗೆ ಜನರಲ್ಲಿ ವಿಶ್ವಾಸ ಕಡಿಮೆ ಆಗುತ್ತಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
Next Story





