Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರದ ವಿರುದ್ಧ ಮುಷ್ಕರ ಆರಂಭಿಸಿದ...

ಕೇಂದ್ರದ ವಿರುದ್ಧ ಮುಷ್ಕರ ಆರಂಭಿಸಿದ ಸೇನಾ ಉದ್ಯೋಗಿಗಳು

‘ಮೋದಿ ಸರಕಾರ ಖಾಸಗಿ ಕಾರ್ಪೊರೇಟ್ ಕುಳಗಳನ್ನು ಬಲಪಡಿಸುತ್ತಿದೆ’

ವಾರ್ತಾಭಾರತಿವಾರ್ತಾಭಾರತಿ23 Jan 2019 6:58 PM IST
share
ಕೇಂದ್ರದ ವಿರುದ್ಧ ಮುಷ್ಕರ ಆರಂಭಿಸಿದ ಸೇನಾ ಉದ್ಯೋಗಿಗಳು

ಬೆಂಗಳೂರು, ಜ.22: ರಕ್ಷಣಾ ಉದ್ಯಮ ನಿಷ್ಕ್ರಿಯಗೊಳಿಸುತ್ತಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ, ರಕ್ಷಣಾ ಇಲಾಖೆಯ ನೂರಾರು ಉದ್ಯೋಗಿಗಳು ಬುಧವಾರದಿಂದ ಮುಷ್ಕರ ಆರಂಭಿಸಿದ್ದಾರೆ.

ಇಲ್ಲಿನ ಜೆಸಿ ನಗರದ ಟಿವಿ ಟವರ್ ಸಮೀಪದ ರಕ್ಷಣಾ ಇಲಾಖೆಯ ಕಚೇರಿ ಮುಂಭಾಗ ಆಲ್ ಇಂಡಿಯಾ ಡಿಫೆನ್ಸ್ ಎಂಪ್ಲಾಯೀಸ್ ಫೆಡರೇಷನ್ ನೇತೃತ್ವದಲ್ಲಿ ಜಮಾಯಿಸಿದ ಉದ್ಯೋಗಿಗಳು, ಕೇಂದ್ರದ ಖಾಸಗೀಕರಣ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮುಷ್ಕರದ ನೇತೃತ್ವ ವಹಿಸಿ ಮಾತನಾಡಿದ ಫೇಡರೇಷನ್ ಉಪಾಧ್ಯಕ್ಷ ಎಂ.ಕೆ.ರವೀಂದ್ರನ್ ಪಿಳ್ಳೆ, ರಕ್ಷಣಾ ಉದ್ಯಮದ ಖಾಸಗೀಕರಣ ತಡೆಯಲು, ಜೊತೆಗೆ ನಿವೃತ್ತಿ ವೇತನದ ಹಕ್ಕನ್ನು ಮರಳಿ ಪಡೆಯುವ ಸಲುವಾಗಿ ಇಂದಿನಿಂದ ಮೂರು ದಿನಗಳ ಮುಷ್ಕರ ನಡೆಸಲಾಗುವುದು ಎಂದರು.

ಕೇಂದ್ರದ ಮೋದಿ ಸರಕಾರ ಖಾಸಗಿ ಕಾರ್ಪೊರೇಟ್ ಕುಳಗಳನ್ನು ಬಲಪಡಿಸುವ ಗುರಿ ಇಟ್ಟುಕೊಂಡಿದ್ದು, ಪ್ರಮುಖ ರಕ್ಷಣಾ ತಯಾರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಾದ ಸಂಶೋಧನೆ ಹಾಗೂ ಸೇವಾ ಕಾರ್ಯಗಳನ್ನು ಅಂಬಾನಿ ಮತ್ತು ಅದಾನಿಗಳ ಗುಂಪಿಗೆ ವಹಿಸಲು ತೀರ್ಮಾನಿಸಿದೆ ಎಂದು ಗಂಭೀರ ಆರೋಪ ಮಾಡಿದರು.

ಕೇಂದ್ರದ ನೀತಿಗಳಿಂದ ರಾಷ್ಟ್ರ ವ್ಯಾಪ್ತಿಯ ನಾಲ್ಕು ಲಕ್ಷ ರಕ್ಷಣಾ ನಾಗರಿಕ ಉದ್ಯೋಗಿಗಳು ರೋಸಿ ಹೋಗಿದ್ದಾರೆ ಎಂದ ಅವರು, ರಕ್ಷಣಾ ನೀತಿಗಳು ದೇಶದ ಅಭಿವೃದ್ಧಿಗಾಗಿಯೋ, ಅಥವಾ ಖಾಸಗಿ ಕಾರ್ಪೋರೇಟ್‌ಗಳ ಉದ್ಧಾರಕ್ಕಾಗಿ ಇವೆಯೋ ಎಂದು ಅವರು ಪ್ರಶ್ನೆ ಮಾಡಿದರು.

ಸರಕಾರಿ ಕಾರ್ಪೋರೇಟ್ ವ್ಯವಸ್ಥೆಯಡಿ ದೇಶದ ಸೈನಿಕರಿಗೆ ಸ್ವೇಚ್ಛಾ ಸ್ವಾತಂತ್ರವನ್ನು ನೀಡಬೇಕು. ಅವರಿಗೆ ಬೇಕಾದ ಯುದ್ಧ ಸಾಮಗ್ರಿಗಳನ್ನು ಪಡೆಯಲು ನಿರಾಕರಿಸಿದೆ, ಅವರಿಗೆ ಅನುಮತಿ ನೀಡಬೇಕು. ಈ ಎಲ್ಲ ವಿಚಾರಗಳನ್ನು ಸರಕಾರ ಸಂಸತ್ತಿನೊಳಗೆ ಹಾಗೂ ಹೊರಗೆ ಚರ್ಚಿಸಬೇಕು ಎಂದು ಅವರು ಒತ್ತಾಯ ಮಾಡಿದರು.

ದೇಶದ ಶಾಂತಿ ಸ್ಥಾಪನೆಗಾಗಿ, ರಕ್ಷಣಾ ಉದ್ಯಮಗಳಲ್ಲಿ ಸ್ವಾವಲಂಬನೆ ಸಾಧಿಸಲು ರಕ್ಷಣಾ ಘಟಕಗಳನ್ನು ಸ್ಥಾಪಿಸಲಾಗಿದ್ದು, ಸಂಸ್ಥೆಯಲ್ಲಿನ ಕೌಶಲ್ಯ ಭರಿತ ನೌಕರರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಗೌರವವನ್ನು ಸಾಧಿಸಲು ಒದ್ದಡುತ್ತಿದ್ದಾರೆ. ಆದರೆ, ಸರಕಾರ ಅವರನ್ನು ಉತ್ತೇಜಿಸುವ ಬದಲಾಗಿ, ರಕ್ಷಣಾ ಘಟಕಗಳನ್ನು ನಿಷ್ಕ್ರೀಯಗೊಳಿಸಲಾಗುತ್ತಿದೆ ಎಂದು ದೂರಿದರು.

ಸರಕಾರವು ಸೈನಿಕರ ಅಧೀನದಲ್ಲಿರುವ ಉದ್ಯಮಗಳಿಗೆ ಮತ್ತು ಘಟಕಗಳಿಗೆ ಗುಣಮಟ್ಟ ಹಾಲನ್ನು ಸರಬರಾಜು ಮಾಡುತ್ತಿದ್ದ, ಸೇನಾ ಕೃಷಿ ವಲಯಗಳನ್ನು, ತನ್ನ ಕಾರ್ಯನೀತಿ ಅನ್ವಯ ಮುಚ್ಚಲು ನಿರ್ಧರಿಸಿದೆ. ಅಲ್ಲದೆ, ಡಿಆರ್‌ಡಿಓದಲ್ಲಿ ಮಾನವ ಸಂಪನ್ಮೂಲವನ್ನು ಗಣನೀಯವಾಗಿ ತಗ್ಗಿಸಲಾಗಿದೆ ಎಂದು ಎಂ.ಕೆ.ರವೀಂದ್ರ ಪಿಳ್ಳೆ ಹೇಳಿದರು.

ಮುಷ್ಕರದಲ್ಲಿ ಎಡಿಇ ಅಧ್ಯಕ್ಷ ನಾರಾಯಣಪ್ಪ, ಉಪಾಧ್ಯಕ್ಷ ಭಾಸ್ಕರ್ ರಾವ್, ಕಾರ್ಯದರ್ಶಿ ಪ್ರಸನ್ನ, ಆರ್.ಎನ್.ನಾಗರಾಜ್ ಸೇರಿದಂತೆ ಪ್ರಮುಖರಿದ್ದರು.

‘ವೇತನ ನೀಡಿ’

ಸರಕಾರಿ ನೌಕರರ ನಿವೃತ್ತಿ ವೇತನದ ಹಕ್ಕನ್ನು ನ್ಯಾಯಾಲಯವು ಜಾರಿಗೊಳಿಸಿದರೂ, ಕೇಂದ್ರ ಸರಕಾರ ಇದನ್ನು ಕಸಿದುಕೊಂಡಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿದೆ.

-ಎಂ.ಕೆ.ರವೀಂದ್ರನ್ ಪಿಳ್ಳೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X