Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿಕ್ಷಣವು ಸಮಾಜದಲ್ಲಿ ಒಬ್ಬ ಉತ್ತಮ...

ಶಿಕ್ಷಣವು ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯನ್ನಾಗಿ ರೂಪಿಸುವಂತಿರಬೇಕು: ನ್ಯಾ. ಮಹಮ್ಮದ್ ನವಾಝ್

ವಾರ್ತಾಭಾರತಿವಾರ್ತಾಭಾರತಿ23 Jan 2019 8:31 PM IST
share
ಶಿಕ್ಷಣವು ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯನ್ನಾಗಿ ರೂಪಿಸುವಂತಿರಬೇಕು: ನ್ಯಾ. ಮಹಮ್ಮದ್ ನವಾಝ್

ಪುತ್ತೂರು, ಜ. 23: ಶಿಕ್ಷಣದ ಮೂಲ ಉದ್ದೇಶ ಕೇವಲ ಜ್ಞಾನ, ಕೌಶಲ್ಯಗಳ ಸಂಪಾದನೆ ಮಾತ್ರ ಆದರೆ ಸಾಲದು. ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ವಿಕಸನದೊಂದಿಗೆ ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯನ್ನಾಗಿ ರೂಪಿಸುವಂತಿರಬೇಕು ಎಂದು ರಾಜ್ಯ ಹೈಕೋರ್ಟು ನ್ಯಾಯಾಧೀಶ ಮಹಮ್ಮದ್ ನವಾಝ್ ಹೇಳಿದರು.

ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಹಿರಿಯ ವಿದ್ಯಾರ್ಥಿ ಮತ್ತು ರಕ್ಷಕ ಶಿಕ್ಷಕ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಮಹತ್ವಪೂರ್ಣ ಸಾಧನೆಗೆ ಶಿಸ್ತು ಮತ್ತು ಸತತ ಪರಿಶ್ರಮ ಅತಿ ಮುಖ್ಯ. ಹಿರಿಯ ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈದ ಶಿಕ್ಷಣ ಸಂಸ್ಥೆಯೊಂದಿಗೆ ನಿಕಟ ಸಂಪರ್ಕವಿಟ್ಟುಕೊಳ್ಳುವ ಜತೆಗೆ ಸಂಸ್ಥೆಯ ಸಾಧನೆಯ ಬಗ್ಗೆ ಹೆಮ್ಮೆ ಪಡುವ ಮನೋಭಾವ ಹೊಂದಿರಬೆಕು ಎಂದು ತಿಳಿಸಿದರು. 

ಮಂಗಳೂರಿನ ಎಮ್.ಜಗನ್ನಾಥ್ ಕಾಮತ್ ಅಂಡ್ ಕೊ ಸಂಸ್ಥೆಯ ಸಿಎ.ಎಮ್.ಜಗನ್ನಾಥ ಕಾಮತ್ ಅವರು ಮಾತನಾಡಿ, ಈ ಶಿಕ್ಷಣ ಸಂಸ್ಥೆಯು ಪ್ರತಿಭಾನ್ವಿತರನ್ನು ಸಮಾಜಕ್ಕೆ ನೀಡುವ ಮೂಲಕ ಬಹಳಷ್ಟು ಹೆಸರು ಗಳಿಸಿದೆ.ಮುಂದಿನ ದಿನಗಳಲ್ಲಿ ಈ ಸಂಸ್ಥೆಯ ಕೀರ್ತಿ ಇನ್ನಷ್ಟು ಉತ್ತುಂಗಕ್ಕೇರಲಿ ಎಂದರು.

ವಿಜಯಾ ಬ್ಯಾಂಕ್ ಹುಬ್ಬಳ್ಳಿಯ ಪ್ರಾದೇಶಿಕ ಕಛೇರಿಯ ಉಪಮಹಾ ಪ್ರಬಂಧಕ ಬ್ಯಾಪ್ಟಿಸ್ಟ್ ಲೋಬೊ ಅವರು ಮಾತನಾಡಿ, ಈ ಕಾಲೇಜು ಹಲವಾರು ಕ್ರೀಡಾ ಸಾಧಕರನ್ನು ಸೃಷ್ಠಿ ಮಾಡಿರುವ ಅಪ್ರತಿಮ ಶಿಕ್ಷಣ ಸಂಸ್ಥೆಯಾಗಿದೆ ಎಂದರು. 

ಮೈಸೂರಿನ ಕೈಗಾರಿಕೋದ್ಯಮಿ ಸುಬ್ರಹ್ಮಣ್ಯರೈ ಅವರು ಮಾತನಾಡಿ, ಪ್ರಸ್ತುತ ಸ್ವ ಉದ್ಯೋಗಕ್ಕೆ ವಿಪುಲ ಅವಕಾಶಗಳಿವೆ. ವಿದ್ಯಾರ್ಥಿಜೀವನದಲ್ಲಿ ಶಿಸ್ತು, ಪರಿಶ್ರಮ ಸಮಯ ಪಾಲನೆ ಮತ್ತು ಭವಿಷ್ಯದ ಕುರಿತು ಸ್ಪಷ್ಟಯೋಜನೆಯನ್ನು ಅಳವಡಿಸಿಕೊಂಡಾಗ ಯಶಸ್ಸು ನಿಶ್ಚಿತ ಎಂದರು.

ಮಂಗಳೂರು ಧರ್ಮಪ್ರಾಂತ್ಯದ ಮಾಜಿ ವಿಕಾರ್‍ಜನರಲ್ ಮೊ. ಡೆನ್ನಿಸ್ ಮೊರಾಸ್ ಪ್ರಭು   ಅವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಸ್ಥೆಯ ಯಶಸ್ಸಿನಲ್ಲಿ ರಕ್ಷಕ-ಶಿಕ್ಷಕ ಸಂಘ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಕೊಡುಗೆ ಮಹತ್ವಪೂರ್ಣವಾದುದು ಎಂದು ಅವರು ಹೇಳಿದರು.  

ಕಾರ್ಯಕ್ರಮದಲ್ಲಿ ವಿಜಿಎಸ್‍ಟಿ ಪ್ರಶಸ್ತಿ ಪುರಸ್ಕೃತರಾದ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಡಾ.ಆ್ಯಂಟನಿ ಪ್ರಕಾಶ್ ಮೊಂತೆರೊ,ಪಿಎಚ್‍ಡಿ ಪದವಿ ಗಳಿಸಿರುವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕೆ ಚಂದ್ರಶೇಖರ ಮತ್ತು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಮಾಲಿನಿ ಕೆ ಹಾಗೂ ಮಂಗಳೂರು ವಿವಿ ಸಿಂಡಿಕೇಟ್‍ಗೆ ನಾಮನಿರ್ದೇಶನಗೊಂಡಿರುವ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಯೋ ನೊರೊನ್ಹಾ ಅವರನ್ನುಸನ್ಮಾನಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಎಪ್ರಿಲ್ ತಿಂಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಕಾಲೇಜಿನ ಕ್ರೀಡಾ ಪ್ರತಿಭೆಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 

ಕಾಲೇಜಿನ ಸಂಚಾಲಕ ಆಲ್ಫ್ರೆಡ್‍ಜೆ ಪಿಂಟೊ ಶುಭಾಶಂಸನೆಗೈದರು. ಸಂತ ಫಿಲೋಮಿನಾ ಪದವಿ ಕಾಲೇಜ್‍ನ ಪ್ರಾಂಶುಪಾಲ ಫ್ರೊ. ಲಿಯೋ ನೊರೊನ್ಹಾ, ಪೂರ್ವಕಾಲೇಜಿನ ಪ್ರಾಂಶುಪಾಲ ವಿಜಯ್ ಲೋಬೊ, ಪದವಿ ಪೂರ್ವ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್‍ರೈ, ಕಾರ್ಯದರ್ಶಿ ಪ್ರಶಾಂತ್ ಭಟ್ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೈರಾಜ್ ಭಂಡಾರಿ ಸ್ವಾಗತಿಸಿದರು. ಕಾರ್ಯದರ್ಶಿ ಡಾ. ಕೆ ಚಂದ್ರಶೇಖರ್‍ಹಾಗೂ ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಎಡ್ವಿನ್.ಎಸ್.ಡಿ'ಸೋಜ ವರದಿ ಮಂಡಿಸಿದರು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಒಲಿವೆರ ವಂದಿಸಿದರು. ಹಿರಿಯ ವಿದ್ಯಾರ್ಥಿನಿ ಪ್ರತಿಮಾ ಹೆಗ್ಡೆ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X