Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ...

ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಪ್ರಹ್ಲಾದ್ ಜೋಶಿ ಆಗ್ರಹ

ಶೋಕಾಚರಣೆ ಆದೇಶ ಉಲ್ಲಂಘನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jan 2019 9:52 PM IST
share
ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆಯಾಚನೆಗೆ ಸಂಸದ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ,ಜ.23: ಭಾರತ್ ಕೋ ತುಕಡೇ ತುಕಡೇ ಕರೋಂಗಿ ಅಂದವರನ್ನು ಕರೆದುಕೊಂಡು ಬಂದು ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಮಾಡಿದ್ದಾರೆ. ರಾಜ್ಯ ಸರ್ಕಾರ ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಈ ರೀತಿ ಮಾಡಿರುವುದು ಸರಿಯಲ್ಲ, ಇದು ಆಕ್ಷಮ್ಯ ಅಪರಾಧ. ಶೀಘ್ರವೇ ಪ್ರಿಯಾಂಕ್ ಕ್ಷಮೆ ಯಾಚನೆ ಮಾಡಬೇಕೆಂದು ಎಂದು ಸಂಸದ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.

ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನೈತಿಕತೆ ಅನ್ನೋದು ಕಾಂಗ್ರೆಸ್ ಅವರಿಗೆ ಗೊತ್ತೇ ಇಲ್ಲ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಅನ್ನೋದು ಅಪ್ರಸ್ತುತ. ಕೂಡಲೆ ಕಾಂಗ್ರೆಸ್ ಅಧ್ಯಕ್ಷ ಈ ಘಟನೆ ಬಗ್ಗೆ ಕ್ಷಮೆ ಕೇಳಬೇಕು. ಅಲ್ಲದೆ ಸಿಎಂ, ಡಿಸಿಎಂ ಉತ್ತರ ಕೊಡಬೇಕು ಎಂದರು. 

ರೆಸಾರ್ಟ್ ನಲ್ಲಿ ಶಾಸಕರ ಗಲಾಟೆ ಪ್ರಕರಣ ಕುರಿತು ಮಾತನಾಡಿದ ಅವರು, ಇದು ಕಾಂಗ್ರೆಸ್ ನ ಡ್ರಾಮ. ಎಲ್ಲರನ್ನೂ ಅಲ್ಲಿಗೆ ಕರೆದುಕೊಂಡು ಹೋಗಿದ್ದು ಏಕೆ ಎಂದು ಪ್ರಶ್ನಿಸಿದರು. ಎಲ್ಲಾ ಡ್ರಾಮ ಮುಗಿದ ಮೇಲೆ 307 ಕೇಸ್ ಹಾಕಿದ್ದಾರೆ. ಹೀಗಾಗಿ ಎಲ್ಲರ ಮೇಲೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಬಿಜೆಪಿ ಯಾವುದೇ ಜಾತಿ ರಾಜಕಾರಣ ಮಾಡಿಲ್ಲ. ಜಾತಿ ರಾಜಕಾರಣ ಮಾಡುವುದು ಕಾಂಗ್ರೆಸಿಗರು. ನಗರದ ಅಭಿವೃದ್ಧಿ ವಿಚಾರದಲ್ಲಿ ಒಂದು ಸಮುದಾಯವನ್ನು ಎತ್ತಿಕಟ್ಟಿ ಬಿಜೆಪಿಯವರ ಹೆಸರನ್ನು ಹಾಳು ಮಾಡಲು ಹುನ್ನಾರ ನಡೆಸುತ್ತಿದ್ದಾರೆ. ಇಂತಹ ಅನಾವಶ್ಯಕ ರಾಜಕಾರಣ ತಂತ್ರ ಬಳಸದೆ ನಗರದ ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ನನ್ನ ಮೇಲೆ ಕಾಂಗ್ರೆಸ್ ನವರು ದೂರು ದಾಖಲಿಸುವುದಾದರೆ ದಾಖಲಿಸಲಿ. ನಾನು ಮುಂದಿನ ವಿಚಾರಣೆಯನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X