ಸಚಿವ ಪ್ರಿಯಾಂಕ್ ಖರ್ಗೆ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿದ್ದಾರೆ: ಶೆಟ್ಟರ್ ಆರೋಪ

ಹುಬ್ಬಳ್ಳಿ,ಜ.23: ಸಚಿವ ಪ್ರಿಯಾಂಕ್ ಖರ್ಗೆ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಸಿಎಂ ಕುಮಾರಸ್ವಾಮಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೋಕಾಚರಣೆ ಘೋಷಣೆ ಮಾಡಿದ್ದರೂ ಕೂಡ ಸಚಿವ ಪ್ರೀಯಾಂಕ್ ಖರ್ಗೆ ಹಠಕ್ಕೆ ಬಿದ್ದು ಕಾರ್ಯಕ್ರಮ ಮಾಡಿದ್ದಾರೆ. ಅವರ ವಿರುದ್ಧ ಶೀಘ್ರವಾಗಿ ಮುಖ್ಯಮಂತ್ರಿಗಳು ಕ್ರಮ ಜಾರಿ ಮಾಡಬೇಕು ಎಂದರು.
ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್-ಗಣೇಶ್ ಗಲಾಟೆ ಪ್ರಕರಣದ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ ನವರು ಆನಂದ್ ಸಿಂಗ್ ಹಾಗೂ ಗಣೇಶ್ ನಡುವಿನ ಗಲಾಟೆಯನ್ನು ಮುಚ್ಚಿಡುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನವರು ಅಧಿಕಾರಕ್ಕಾಗಿ ಏನೆಲ್ಲಾ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಕಾಂಗ್ರೆಸ್ ಶಾಸಕರನ್ನು ನಮ್ಮ ಪಾರ್ಟಿಗೆ ಬರುವಂತೆ ಕರೆದಿಲ್ಲ. ಆದರೆ, ಕಾಂಗ್ರೆಸ್ ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದರು.





