ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ
ಉಡುಪಿ, ಜ.23: ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಜ. 25ರಂದು ಬೆಳಗ್ಗೆ 10 ಕ್ಕೆ ಅಜ್ಜರಾಡಿನ ಪುರಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ ಜೋಷಿ ಉದ್ಘಾಟಿಸಲಿದ್ದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಯುವ ಮತದಾರರಿಗೆ ಅರಿವಿನ ಹಕ್ಕು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಲಿದ್ದು, ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9:00ಕ್ಕೆ ಉಡುಪಿ ಸರ್ವೀಸ್ ಬಸ್‌ನಿಲ್ದಾಣದಿಂದ ಪುರಭವನದವರೆಗೆ ಮತದಾರರ ಸಾಕ್ಷರತಾ ಕ್ಲಬ್‌ಗಳ ಜಾಥಾವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





