ಮೈಸೂರು: ಸಾಲ ಮರುಪಾವತಿಸಲಾಗದೆ ವ್ಯಕ್ತಿ ಆತ್ಮಹತ್ಯೆ

ಮೈಸೂರು,ಜ.23: ವಿಪರೀತ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ಸಾಲ ಮರುಪಾವತಿಸಲಾಗದೇ ನೇಣಿಗೆ ಶರಣಾದ ಘಟನೆ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದೆ.
ಕೆ.ಜಿ.ಕೊಪ್ಪಲು ನಿವಾಸಿ ಗಂಗಾಧರ್ (35) ನೇಣಿಗೆ ಶರಣಾದ ವ್ಯಕ್ತಿ. ಇವರು ಅಪಾರ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ನಿನ್ನೆ ಪತ್ನಿಯನ್ನು ತವರಿಗೆ ಹೋಗಿ ಬರುವಂತೆ ತಿಳಿಸಿ ಕಳುಹಿಸಿಕೊಟ್ಟಿದ್ದರು. ಪತ್ನಿ ತವರಿಗೆ ತೆರಳಿದ ನಂತರ ಮನೆಯ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತ್ನಿ ಮರಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಸರಸ್ವತಿಪುರಂ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





