ರಾಯ್ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲಿರುವ ಪ್ರಿಯಾಂಕಾ ಗಾಂಧಿ: ಮೂಲಗಳು
ಹೊಸದಿಲ್ಲಿ,ಜ.23: ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ಗಾಂಧಿ ತನ್ನ ತಾಯಿಯ ಲೋಕಸಭಾ ಕ್ಷೇತ್ರವಾಗಿರುವ ರಾಯ್ಬರೇಲಿಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಖುದ್ದು ರಾಹುಲ್ ಗಾಂಧಿಯೂ ಏನನ್ನೂ ಹೇಳಲು ನಿರಾಕರಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದು ಆಕೆಗೆ ಬಿಟ್ಟ ವಿಚಾರ ಹಿಂದಷ್ಟೇ ಅವರು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2017ರಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವಲ್ಲಿ ಪ್ರಿಯಾಂಕಾ ಗಾಂಧಿ ಪ್ರಮುಖ ಪಾತ್ರವಹಿಸಿದ್ದರು. ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಭೆಯಲ್ಲೂ ಆಕೆ ಭಾಗಿಯಾಗಿದ್ದರು.
Next Story