ಉಡುಪಿ: ಬಾಲ್ಯ ವಿವಾಹ ನಿಷೇಧ ಕುರಿತ ಜಾಥಾ ಉದ್ಘಾಟನೆ

ಉಡುಪಿ, ಜ.24: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ಬಾಲ್ಯ ವಿವಾಹ ನಿಷೇಧ ಕುರಿತ ಜಾಥಾವನ್ನು ಉಡುಪಿಯ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಂ.ಜೋಶಿ ಗುರುವಾರ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.
ಬೋರ್ಡ್ ಹೈಸ್ಕೂಲ್‌ನಿಂದ ಸೈಂಟ್ ಸಿಸಿಲೀಸ್ ಶಾಲೆವರೆಗೆ ನಡೆದ ಜಾಥಾದಲ್ಲಿ ‘ಸಂದಿಗ್ಧ’ ಚಲನಚಿತ್ರದಲ್ಲಿ ನಟಿಸಿದ್ದ ಬಾಲ ನಟರಾದ ಸಂಜನಾ, ಕಿರಣ್, ನಿಶಾಂತ್ ಅವರನ್ನು ಅಲಂಕೃತ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ಜಾಥಾದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ವನಿತಾ ತೊರವಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಂದಿಗ್ಧ ಚಲನಚಿತ್ರದ ನಿರ್ದೇಶಕ ಮತ್ತು ನಟ ಸುಚೇಂದ್ರ ಪ್ರಸಾದ್, ನಟ ಮಹೇಶ್ ದೇವ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಶಿಶು ಅಬಿವೃಧ್ದಿ ಯೋಜನಾಧಿಕಾರಿ ಶೋಭಾ ಮತ್ತಿತರರು ಉಪಸ್ಥಿತರಿದ್ದರು.
ಜಾಥಾದಲ್ಲಿ ಡೊಳ್ಳು ಕಣಿತ, ವೀರಗಾಸೆ, ಕಂಸಾಳೆ ಮುಂತಾದ ಜಾನಪದ ತಂಡಗಳು ಭಾಗವಹಿಸಿದ್ದವು.







