Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಣ್ಣು ಮಗುವಿಗೂ ಸಮಾನ ವಿದ್ಯಾಭ್ಯಾಸ...

ಹೆಣ್ಣು ಮಗುವಿಗೂ ಸಮಾನ ವಿದ್ಯಾಭ್ಯಾಸ ಸಿಗಲಿ: ಶೀಲಾ ಕೆ. ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ24 Jan 2019 9:41 PM IST
share
ಹೆಣ್ಣು ಮಗುವಿಗೂ ಸಮಾನ ವಿದ್ಯಾಭ್ಯಾಸ ಸಿಗಲಿ: ಶೀಲಾ ಕೆ. ಶೆಟ್ಟಿ

ಉಡುಪಿ, ಜ.24: ಸ್ವಾತಂತ್ರ ಬಂದ ನಂತರ ಎಲ್ಲ ಹೆಣ್ಣು ಮಗುವಿಗೂ ಸಮಾನ ವಿದ್ಯಾಭ್ಯಾಸ ದೊರೆಯಬೇಕೆಂದು ಸರಕಾರಗಳು ಹಲವು ಯೋಜನೆ ಗಳ ಮೂಲಕ ಸಾಕಷ್ಟು ಶ್ರಮ ವಹಿಸಿವೆ ಎಂದು ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದ್ದಾರೆ.

ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಉಡುಪಿ ಸೈಂಟ್ ಸಿಸಿಲೀಸ್ ಶಾಲಾ ಸಭಾಂಗಣ ದಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.

ಹಿಂದಿನಿಂದಲೂ ಹೆಣ್ಣಿನ ಮೇಲೆ ಶೋಷಣೆ ನಡೆಯುತ್ತಿದ್ದು, ಅದು ಇಂದಿಗೂ ಸಂಪೂರ್ಣವಾಗಿ ಕೊನೆಯಾಗಿಲ್ಲ. ಇದೆಲ್ಲದರ ನಡುವೆಯೂ ಹೆಣ್ಣು ಇಂದು ಸಾಧನೆಯ ಹಾದಿಯಲ್ಲಿ ಮುಂದಿದ್ದಾಳೆ. ಅದೆಲ್ಲವೂ ಸಾಧ್ಯವಾಗುವುದು ಶಿಕ್ಷಣದ ಮೂಲಕ. ಎಲ್ಲಾ ಹೆಣ್ಣು ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಬಾಲ್ಯವಿವಾಹದ ಬಗ್ಗೆ ಮಾತ್ರವಲ್ಲದೆ ಬಾಲ್ಯವಿವಾಹ ನಿಷೇಧದ ಕುರಿತು ಇರುವ ಕಾನೂನಿನ ಅರಿವು ಮೂಡಿಸುವುದು ಮುಖ್ಯ ಕರ್ತವ್ಯ ಎಂದು ಶೀಲಾ ಶೆಟ್ಟಿ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ಎನ್. ತೊರವಿ ಪ್ರಾಸ್ತಾವಿಕ ಬಾಷಣ ಮಾಡಿದರು. ಸಂದಿಗ್ಧ ಚಲನಚಿತ್ರದ ನಿರ್ದೇಶಕ ಸುಚೇಂದ್ರ ಪ್ರಸಾದ್, ನಟ ಮಹೇಶ್ ದೇವ್ರ, ಚಿತ್ರದ ಬಾಲನಟರಾದ ಸಂಜನಾ, ಕಿರಣ್, ನಿಶಾಂತ್, ಚಿತ್ರದ ತಾಂತ್ರಿಕ ಸಹ ನಿರ್ದೇಶಕ ಗಿರೀಶ್, ಸಹ ನಿರ್ದೇಶಕ ನಾಗೇಶ್ ಇವರನ್ನು ಸನ್ಮಾನಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ಶಿಶು ಅಭಿವೃಧ್ದಿ ಯೋಜನಾಧಿಕಾರಿ ಶೋಭಾ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್, ಸೈಂಟ್ ಸಿಸಿಲೀಸ್‌ನ ಮೇಝಿ ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀಣಾ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X