ಮತದಾರರ ಪಟ್ಟಿಗಳ ಪರಿಷ್ಕರಣೆ: ಹೆಲ್ಪ್‌ಡೆಸ್ಕ್ ಸ್ಥಾಪನೆ
ಉಡುಪಿ, ಜ.24: ವಿಧಾನಸಭಾ ಮತದಾರರ ಪಟ್ಟಿಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಗಳಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆಯುವುದು ಹಾಗೂ ತಿದ್ದುಪಡಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕುರಿತು ಕುಂದಾಪುರ ವಿಧಾನಸಬಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಂದಾಪುರ ಸಹಾಯಕ ಕಮೀಷನರ್ ಕಚೇರಿಯಲ್ಲಿ ಹೆಲ್ಪ್‌ಡೆಸ್ಕ್ ಸ್ಥಾಪಿಸಲಾಗಿದೆ.
ಕುಂದಾಪುರ ವಿಧಾನಸಬಾ ಕ್ಷೇತ್ರದ ಮತದಾರರ ಪಟ್ಟಿಗಳ ಪರಿಷ್ಕರಣೆಗೆ ಸಾರ್ವಜನಿಕರು ಈ ಹೆಲ್ಪ್‌ಡೆಸ್ಕ್‌ನಿಂದ ಮಾಹಿತಿ ಪಡೆಯಬಹುದು. ಹೆಲ್ಪ್ ಡೆಸ್ಕ್‌ನ ಸಿಬ್ಬಂದಿಯಾಗಿ ಕುಂದಾಪುರ ಸಹಾಯಕ ಕಮೀಷನರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಪ್ರೀತೇಶ್ ಇವರನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಮೊಬೈಲ್ ನಂ: 9591313700 ಮತ್ತು ದೂ.ಸಂಖ್ಯೆ: 08254-231984ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಕುಂದಾಪುರ ಸಹಾಯಕ ಕಮೀಷನರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





