Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಂಚಕ ಕಂಪನಿಗಳ ವಿರುದ್ಧ ಚಾರ್ಜ್‌ಶೀಟ್...

ವಂಚಕ ಕಂಪನಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ: ಆರೋಪಿಗಳ ಕೋಟ್ಯಂತರ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ24 Jan 2019 9:44 PM IST
share
ವಂಚಕ ಕಂಪನಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ: ಆರೋಪಿಗಳ ಕೋಟ್ಯಂತರ ಆಸ್ತಿ ಪತ್ತೆ

ಬೆಂಗಳೂರು, ಜ.24: ಅಜ್ಮೀರಾ ಗ್ರೂಪ್ಸ್ ಕಂಪನಿಯ ವಂಚನೆ ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ನ್ಯಾಯಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ಆರೋಪಿಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿರುವ ಅಂಶ ಉಲ್ಲೇಖ ಆಗಿದೆ.

ಸಿಸಿಬಿ ಅಪರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಡಿಸಿಪಿ ಎಸ್.ಗಿರೀಶ್ ಹಾಗೂ ಎಸಿಪಿ ಪಿ.ಟಿ.ಸುಬ್ರಮಣ್ಯ ಅವರ ವಿಶೇಷ ತಂಡ ತನಿಖೆ ನಡೆಸಿದ್ದು, 350 ಪುಟಗಳ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಆಸ್ತಿ ಜಪ್ತಿ: ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳು ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿದ್ದ, 5,24,61,495 ರೂ. ನಗದು, ಮೈಸೂರಿನ ದೇವನೂರು ಗ್ರಾಮ ಸರ್ವೆ ನಂ 194 ರಲ್ಲಿ ಖರೀದಿ ಮಾಡಿ ಬಡಾವಣೆ ನಿರ್ಮಿಸಿದ್ದ 3 ಎಕರೆ 25 ಗುಂಟೆ ಭೂಮಿ ಹಾಗೂ ಮರಳವಾಡಿ ಹೋಬಳಿ ಚಿಕ್ಕ ಸಾದೇನಹಳ್ಳಿ ಗ್ರಾಮದಲ್ಲಿ 1.18 ಎಕರೆ. ಅದೇ ರೀತಿ, ಜಯನಗರದಲ್ಲೂ 2 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಸಿಸಿಬಿ ತಿಳಿಸಿದೆ.

ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಿನ್ಸಿಪಲ್ ಸಿಟಿ ಸಿವಿಲ್ ಮತ್ತು ಸಿವಿಲ್ ಸತ್ರ (ಸಿಸಿಹೆಚ್-1) ನ್ಯಾಯಾಲಯದ ಅಧೀನಕ್ಕೆ ತಂದು ಈ ಪ್ರಕರಣದಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡ ಸಂತ್ರಸ್ಥರಿಗೆ ನೀಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಜ್ಮೀರಾ ಗ್ರೂಪ್ಸ್‌ನಲ್ಲಿ ಹೂಡಿಕೆ ಮಾಡಿ ವಂಚನೆಗೊಳಗಾಗಿರುವವರ ಪೈಕಿ ಈಗಾಗಲೇ ಸುಮಾರು 950 ಮಂದಿ ಸಿಸಿಬಿ ಕಚೇರಿಗೆ ಭೇಟಿ ನೀಡಿ, ನೋಂದಣಿ ಮಾಡಿಕೊಂಡ ಎಂಓಯು ಸಲ್ಲಿಸಿದ್ದಾರೆ. ಈಗಾಗಲೇ 26 ಕೋಟಿ ನೀಡಬೇಕು ಎನ್ನುವ ಅಂಶ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?: 2017ರಲ್ಲಿ ನಗರದ ಜಯನಗರದ 4ನೇ ಬ್ಲಾಕ್‌ನ 9ನೇ ಮುಖ್ಯ ರಸ್ತೆಯಲ್ಲಿ ಅಜ್ಮೀರಾ ಗ್ರೂಪ್ಸ್ ಎಂಬುವ ಸಂಸ್ಥೆ ಹುಟ್ಟು ಹಾಕಿದ ತಬ್ರೇಝ್ ಪಾಷ ಮತ್ತು ಅಬ್ದುಲ್ ದಸ್ತಗೀರ್, ಸಾರ್ವಜನಿಕರು ಹಣ ಹೂಡಿಕೆ ಮಾಡಿದರೆ, ಪ್ರತಿಯಾಗಿ ಪ್ರತಿ ತಿಂಗಳು ಅಧಿಕ ಬಡ್ಡಿ ನೀಡುವುದಾಗಿ ಪ್ರೇರೇಪಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಆಶ್ವಾಸನೆ ನೀಡಿ, ಬಳಿಕ ಹಣವನ್ನು ಹಿಂತಿರುಗಿಸದೇ ಮೋಸ ಮಾಡಿದ್ದರೆಂದು ಜಯನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.

ತನಿಖೆ ನಡೆಸಿದ ಸಿಸಿಬಿ, ಪ್ರಕರಣದ ಪ್ರಮುಖ ಆರೋಪಿ ಅಜ್ಮೀರಾ ಗ್ರೂಪ್ಸ್‌ನ ಸ್ಥಾಪಕ ತಬ್ರೇಝ್ ಪಾಷ ಹಾಗೂ ತಬ್ರೇಝ್‌ವುಲ್ಲಾ ಶರೀಫ್ ಅನ್ನು ಜ.3ರಂದು ಬಂಧಿಸಿದ್ದರು. ಆರೋಪಿಗಳ ವಿರುದ್ಧ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X