ಜ.25: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜ.24: ತುಮಕೂರು ಜಿಲ್ಲೆಯ ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಅಗಲಿಕೆ ಹಿನ್ನೆಲೆ ರಾಜ್ಯಾದ್ಯಂತ ಸರಕಾರ ಮೂರು ದಿನ ಶೋಕಾಚರಣೆ ನಡೆಸುತ್ತಿರುವಾಗಲೇ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ‘ಸಂವಿಧಾನ ಸಂಭಾಷಣೆ’ ಕಾರ್ಯಕ್ರಮ ಆಯೋಜನೆ ಮಾಡಿದ್ದನ್ನು ಖಂಡಿಸಿ ಜ.25ರಂದು ಬಿಜೆಪಿಯು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





