ಜ.26: ಪ್ರೊ. ಅರ್ತಿಕಜೆ ಅವರ `ಮಾರ್ದನಿ ಮಾಲೆ' ಕೃತಿ ಬಿಡುಗಡೆ
ಪುತ್ತೂರು, ಜ. 24: ಹಿರಿಯ ಪತ್ರಕರ್ತರೂ, ಲೇಖಕರೂ, ನಿವೃತ್ತ ಉಪನ್ಯಾಸಕರೂ ಆದ ಪ್ರೊ. ವಿ.ಬಿ. ಅರ್ತಿಕಜೆಯವರ ಮಾರ್ದನಿ- ಮಾಲೆ ಕೃತಿ ಬಿಡುಗಡೆ ಸಮಾರಂಭ ಜ. 26ರಂದು ಪೂರ್ವಾಹ್ನ ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ವಹಿಸಲಿದ್ದಾರೆ.
ತಾಲೂಕು ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಕೃತಿ ಬಿಡುಗಡೆ ಮಾಡಲಿದ್ದಾರೆ. ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಾಜೆ ಕೃತಿ ಪರಿಚಯ ಮಾಡಲಿದ್ದಾರೆ. ಪತ್ರಕರ್ತರ ಸಂಘದ ಕಾನೂನು ಸಲಹೆಗಾರ ಬಿ.ಪುರಂದರ ಭಟ್ ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.
Next Story





