ಗಾಂಜಾ ಸೇವನೆ: ಮೂವರು ಯುವಕರ ಬಂಧನ

ಮಂಗಳೂರು, ಜ. 24: ನಗರದ ಪದವು ಗ್ರಾಮದ ಕುಲಶೇಖರ ಚೌಕಿ ಎಂಬಲ್ಲಿ ರಸ್ತೆ ಬದಿಯಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಮೂವರು ಯುವಕರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಪದವು ಕಕ್ಕೆಬೆಟ್ಟು ನಿವಾಸಿ ಜಿತಿನ್ (25), ನೀರುಮಾರ್ಗ ಪ್ರಕೃತಿ ಲೇಔಟ್ ನಿವಾಸಿ ಮೋಹಿತ್ ಕುಮಾರ್ (27), ಮೂಡುಶೆಡ್ಡೆ ಶಿವನಗರ ನಿವಾಸಿ ಗುರುರಾಜ್ (25) ಬಂಧಿತರು.
ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ನಿರ್ದೇಶನದಂತೆ ಕಂಕನಾಡಿ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಅಶೋಕ್ ನೇತೃತ್ವದಲ್ಲಿ ಠಾಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story





