Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನನ್ನು ಲಿಂಗಾಯತ ವಿರೋಧಿ ಎಂದು...

ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲಾಯಿತು: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ25 Jan 2019 7:55 PM IST
share
ನನ್ನನ್ನು ಲಿಂಗಾಯತ ವಿರೋಧಿ ಎಂದು ಬಿಂಬಿಸಲಾಯಿತು: ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಜ.25: ಲಿಂಗಾಯತ ಪ್ರತ್ಯೇಕ ಧರ್ಮ ಮಾಡುವ ಯೋಜನೆಯೇ ನನಗೆ ಇರಲಿಲ್ಲ. ನಾನು ಬಸವಣ್ಣನ ಅನುಯಾಯಿ. ಆದುದರಿಂದಲೇ, ಬಸವ ಜಯಂತಿ ದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಬಾಗಲಕೋಟೆಯ ಹುನಗುಂದದಲ್ಲಿ ಪಂಚಮಸಾಲಿ ಲಿಂಗಾಯತ ಸಮಾವೇಶ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರಿಡಬೇಕೆಂಬ ಬೇಡಿಕೆಯನ್ನು, ಸಚಿವ ಸಂಪುಟದ ಮುಂದಿಟ್ಟು ಅನುಮೋದನೆ ಮಾಡಿಕೊಟ್ಟೆ. ಇದಕ್ಕಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸನ್ಮಾನಿಸಿದರು ಎಂದು ಅವರು ಹೇಳಿದರು.

ಅದೇ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕು ಎಂಬ ಬೇಡಿಕೆ ಬಂತು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ, ನಾಲ್ಕೈದು ಅರ್ಜಿಗಳನ್ನು ನೀಡಿದರು. ಆಗ ನಾನೇನು ಮಾಡಬೇಕಿತ್ತು ? ಸಚಿವ ಸಂಪುಟದ ಎದುರು ವಿಷಯವನ್ನು ಇಟ್ಟು ಚರ್ಚಿಸುವ ವೇಳೆ, ಈಶ್ವರ್ ಖಂಡ್ರೆ, ಶಾಮನೂರು ಸೇರಿದಂತೆ ಯಾರೊಬ್ಬರೂ ವಿರೋಧ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಆದರೆ, ಈಗ ನನ್ನನ್ನು ಲಿಂಗಾಯತ ಸಮುದಾಯವನ್ನು ಒಡೆಯುತ್ತಿದ್ದಾನೆ ಎಂದು ಬಿಂಬಿಸಲಾಗುತ್ತಿದೆ. ಈ ವಿಚಾರದಲ್ಲಿ ನನ್ನ ತಪ್ಪೇನಿದೆ. ಬೌದ್ಧ, ಜೈನ ಧರ್ಮದಂತೆ ಲಿಂಗಾಯತವು ಪ್ರತ್ಯೇಕ ಧರ್ಮ. ಇತಿಹಾಸ ಗೊತ್ತಿಲ್ಲದವರು ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಅನೇಕ ಮಹನೀಯರು, ಸಮಾಜ ಸುಧಾರಕರ ಜಯಂತಿಗಳನ್ನು ಮಾಡಿದೆ. ಎಲ್ಲ ಸರಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಇರಬೇಕೆಂದು ಆದೇಶ ಮಾಡಿದೆ. ಆದರೂ, ನಾನು ಜಾತಿ ಸಮಾವೇಶಗಳನ್ನು ಮಾಡುತ್ತೇನೆ ಎಂದು ಟೀಕಿಸುತ್ತಾರೆ. ಇಂತಹ ಟೀಕೆಗಳನ್ನು ಮಾಡುವವರೇ ಜಾತಿವಾದಿಗಳು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬಸವಾದಿ ಶರಣರ ಕನಸು ಜಾತ್ಯತೀತ ಸಮಾಜ. ಆದರೆ, ಇವತ್ತು ನಮ್ಮ ಸಮಾಜದಲ್ಲಿ ‘ಇವನ್ಯಾರು’ ಎನ್ನುವ ಒಂದು ವರ್ಗವಿದ್ದರೆ, ಮತ್ತೊಂದೆಡೆ ಇವರು ‘ನಮ್ಮವರು’ ಎನ್ನುವ ಇನ್ನೊಂದು ವರ್ಗವಿದೆ. ಆದರೆ, ಎಲ್ಲರೂ ನಮ್ಮವರು ಎನ್ನುವ ಸಮಾಜ ನಿರ್ಮಾಣವಾಗಬೇಕು ಎಂದು ಅವರು ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ನಡೆದ ಅಪಪ್ರಚಾರದಲ್ಲಿ ನನ್ನದೇನು ತಪ್ಪಿಲ್ಲ ಎಂದು ನೀವು ಹೇಳುತ್ತಿದ್ದೀರಿ, ಹಾಗಾದರೆ, ನೀವು ನನ್ನ ಜೊತೆ ಇರಬೇಕಲ್ಲ. ಅದನ್ನು ಬಿಟ್ಟು, ನಾನು ಲಿಂಗಾಯತ ಸಮಾಜವನ್ನು ವಿಭಜನೆ ಮಾಡಿದೆ ಎಂದು ನನ್ನನ್ನು ಹಾಕಿಕೊಂಡು ಹೊಡಿತೀರಲ್ಲಪ್ಪ ಎಂದು ಸಿದ್ದರಾಮಯ್ಯ ಸಭಿಕರಿಗೆ ಪ್ರಶ್ನಿಸಿದರು.

ಬಡವರು ಯಾವ ಜಾತಿ, ಧರ್ಮದಲ್ಲಿ ಇದ್ದರೂ ಅವರ ಜೊತೆ ನಾನು ನಿಲ್ಲುತ್ತೇನೆ. ನನ್ನ ಅಧಿಕಾರಾವಧಿಯಲ್ಲಿ ರೈತರ ಸಾಲಮನ್ನಾ, ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಹೊಂಡ, ವಿದ್ಯಾಸಿರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುವಾಗ ಯಾವ ಜಾತಿಯನ್ನು ನೋಡಿಲ್ಲ. ಆದರೂ, ನನ್ನ ವಿರುದ್ಧ ಅಪಪ್ರಚಾರ ನಡೆಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X