Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಯವ್ಯಯದಲ್ಲಿ ರೈತ ಪರ ಯೋಜನೆಗಳಿಗೆ...

ಆಯವ್ಯಯದಲ್ಲಿ ರೈತ ಪರ ಯೋಜನೆಗಳಿಗೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ25 Jan 2019 8:05 PM IST
share
ಆಯವ್ಯಯದಲ್ಲಿ ರೈತ ಪರ ಯೋಜನೆಗಳಿಗೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ. 25: ಮುಂದಿನ ತಿಂಗಳ 8ರಂದು ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವ ಮೈತ್ರಿ ಸರಕಾರದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಮುಖಂಡರೊಂದಿಗೆ ಬಜೆಟ್ ಮಂಡನೆ ಸಂಬಂಧ ಸಮಾಲೋಚನೆ ನಡೆಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮುಂದಿನ ಆಯವ್ಯಯದಲ್ಲಿ ರೈತಪರ ಉತ್ತಮ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ಆಯವ್ಯಯ ಮಂಡನೆ ಹಿನ್ನೆಲೆಯಲ್ಲಿ ಇಲಾಖಾವಾರು ಮಾಹಿತಿ ಪಡೆದಿದ್ದು, ಇಂದು ರೈತ ಮುಖಂಡರ ಸಲಹೆ-ಸೂಚನೆಗಳನ್ನು ಪಡೆದಿದ್ದೇನೆ. ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಕಬ್ಬಿನ ಬಾಕಿ ಕೊಡಿಸುವುದು ಸೇರಿದಂತೆ ಎಲ್ಲ ವಿಚಾರಗಳ ಚರ್ಚೆ ಮಾಡಲಾಗಿದೆ ಎಂದರು.

ಫೆ.6ರಿಂದ ಜಂಟಿ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಹೀಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನ ನೀಡಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯಪಾಲರ ಅಂಕಿತ: ವಿಧಾನ ಪರಿಷತ್ ನಾಮನಿರ್ದೇಶನ ಸ್ಥಾನಕ್ಕೆ ಕೆ.ಎ. ತಿಪ್ಪೇಸ್ವಾಮಿಯವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ರಾಜ್ಯಪಾಲರು ಇಂದು ತಿಪ್ಪೇಸ್ವಾಮಿ ಅವರನ್ನು ಮೇಲ್ಮನೆಗೆ ನಾಮನಿರ್ದೇಶನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ರೈತರ ಸಭೆಯಲ್ಲಿ ನಟಿ ಭಾವನಾ: ರೈತ ಮುಖಂಡರೊಂದಿಗಿನ ಸಭೆಯಲ್ಲಿ ನಟಿ ಭಾವನಾ ಪಾಲ್ಗೊಂಡಿದ್ದರು. ಬಜೆಟ್‌ನಲ್ಲಿ ಮೀನುಗಾರರಿಗೆ ನೀಡುತ್ತಿರುವ ಸಬ್ಸಿಡಿ ಹೆಚ್ಚಿಸಬೇಕು. ಜತೆಗೆ ಏತ ನೀರಾವರಿ ಯೋಜನೆಗಳ ವಿದ್ಯುತ್ ಬಿಲ್ ಅನ್ನು ಸಂಬಂಧಿಸಿದ ಸಹಕಾರ ಸಂಘಗಳು ಭರಿಸಬೇಕೆಂಬ ಸರಕಾರದ ನಿಯಮವನ್ನು ಸಡಿಲಿಸಬೇಕು ಎಂದು ಭಾವನಾ ಒತ್ತಾಯಿಸಿದರು.

ರೈತರನ್ನು ಕರೆದು ಅವರ ಸಮಸ್ಯೆಗಳನ್ನು ಆಲಿಸುವುದು ಮುಖ್ಯವಲ್ಲ, ಬಜೆಟ್‌ನಲ್ಲಿ ರೈತರ ಯೋಜನೆಗಳ ಘೋಷಣೆ, ಅನುಷ್ಠಾನ ಮುಖ್ಯ. ಆ ನಿಟ್ಟಿನಲ್ಲಿ ಸರಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಕಬ್ಬಿನ ಬಾಕಿ ಕೊಡಿಸಲು ಸರಕಾರ ಕಠಿಣ ಕ್ರಮ ವಹಿಸಬೇಕೆಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

‘ರೈತರ ಸಾಲಮನ್ನಾ, ಗ್ರಾಮೀಣಾಭಿವೃದ್ಧಿ, ನೀರಾವರಿ, ರೇಶ್ಮೆ ಸೇರಿದಂತೆ ರೈತರ ಅಭಿವೃದ್ಧಿ ದೃಷ್ಟಿಯಿಂದ ಬಜೆಜ್ ಆಶಾದಾಯಕವಾಗಿರುತ್ತದೆಂಬ ವಿಶ್ವಾಸವಿದೆ. ಒಂದು ವೇಳೆ ರೈತರ ವಿರುದ್ಧವಾಗಿದ್ದರೆ ಹೋರಾಟ ನಡೆಸಬೇಕಾಗುತ್ತದೆ’

-ಕೋಡಿಹಳ್ಳಿ ಚಂದ್ರಶೇಖರ್ ,ರೈತ ಮುಖಂಡ

‘ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರಕಾರ ಕೃಷಿ ಉತ್ಪನ್ನಗಳಿಗೆ ನಿಗದಿ ಪಡಿಸಿರುವ ಬೆಲೆ ಅವೈಜ್ಞಾನಿಕವಾಗಿದ್ದು, ಅದನ್ನು ಸರಿಪಡಿಸಬೇಕು. 10 ಸಾವಿರ ಕೋಟಿ ರೂ.ಆವರ್ತನಿಧಿ ಇರಿಸಬೇಕು. ಕೈಗಾರಿಕೆಗಳಿಗೆ ಕೃಷಿ ಭೂಮಿ ನೀಡುವ ಮೂಲಕ ರೈತರಿಗೆ ಅನ್ಯಾಯವಾಗುತ್ತಿದ್ದು, ಅದನ್ನು ನಿಲ್ಲಿಸಬೇಕು. ಬೆಲೆ ಕುಸಿತಕ್ಕೆ ಕಾರಣವಾಗಿರುವ ತೊಗರಿ ಆಮದು ನಿಲ್ಲಿಸಲು ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಬೇಕು’

-ಮಾರುತಿ ಮಾನ್ಪಡೆ, ಅಧ್ಯಕ್ಷರು ಪ್ರಾಂತ ರೈತ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X